Advertisement

ಹೊಸ ಶಿಕ್ಷಣ ನೀತಿ: ವಿರೋಧ ಪಕ್ಷಗಳಿಗೆ ಸದನದಲ್ಲಿ ಉತ್ತರಿಸುವೆ

09:33 PM Sep 05, 2021 | Team Udayavani |

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಗೊಂದಲವನ್ನು ಮೂಡಿಸುತ್ತಿರುವ ವಿರೋಧ ಪಕ್ಷಗಳಿಗೆ ಸದನದಲ್ಲಿ ಉತ್ತರ ನೀಡುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌ ಅಶ್ವತ್ಥನಾರಾಯಣ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ವಿರೋಧ ಪಕ್ಷಗಳು ಹೊಸ ಶಿಕ್ಷಣ ನೀತಿಯ ಕುರಿತಂತೆ ಸದನದಲ್ಲಿ ಪ್ರಸ್ತಾಪ ಮಾಡುತ್ತೇವೆ ಎಂದು ಹೇಳಿವೆ. ಹೀಗಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತಂತೆ ವಿರೋಧ ಪಕ್ಷಗಳ ಮುಖಂಡರು ಏನೆಲ್ಲಾ ಪ್ರಶ್ನೆಗಳನ್ನು ಕೇಳಿದರೂ ಅವುಗಳಿಗೆಲ್ಲ ಸರ್ಮಕ ಉತ್ತರ ನೀಡುತ್ತೇನೆ ಎಂದು ತಿಳಿಸಿದರು. ಹೊಸ ಶಿಕ್ಷಣ ನೀತಿಯ ಜಾರಿಯ ವಿಚಾರದಲ್ಲಿ ವಿರೋಧ ಪಕ್ಷದ ನಾಯಕರನ್ನು ಕೂಡ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯುದಾಗಿ ಹೇಳಿದರು.

ಹೊಸ ಶಿಕ್ಷಣ ನೀತಿಯಲ್ಲಿ ಬಹುಭಾಷೆ ಆಯ್ಕೆಗೆ ಆದ್ಯತೆ ನೀಡಲಾಗಿದೆ. ಅಂತಾರಾಷ್ಟ್ರೀಯ ಭಾಷೆ ಕಲಿಕೆಗೂ ಅವಕಾಶ ವಿದ್ಯಾರ್ಥಿಗಳಿಗೆ ದೊರೆಯಲಿದೆ. ಈ ಎಲ್ಲ ಅಂಶಗಳನ್ನು ನೋಡಿದಾಗ ಮೊದಲಿಗಿಂತಲೂ ಹೊಸ ಶಿಕ್ಷಣ ನೀತಿಯಲ್ಲಿ ಭಾಷಾ ನೀತಿಯಲ್ಲಿ ಬಹಳ ದೊಡ್ಡ ಸುಧಾರಣೆ ಕಾಣಬಹುದಾಗಿದೆ ಎಂದರು.

ಇದನ್ನೂ ಓದಿ:ಯುಎಸ್‌ ಓಪನ್‌ ಟೆನಿಸ್‌ : ಬಾರ್ಟಿಗೆ ಆಘಾತವಿಕ್ಕಿದ ಶೆಲ್ಬಿ ರೋಜರ್

ಹಿಂದಿ ಹೇರಿಕೆ ಮಾಡಿದ್ದು ಕಾಂಗ್ರೆಸ್‌:
ದೇಶದಲ್ಲಿ ಹಿಂದಿ ಹೇರಿಕೆ ಮಾಡಿರುವವರು ಕಾಂಗ್ರೆಸ್‌ ಪಕ್ಷದವರು.ಬಿಜೆಪಿ ಹಿಂದಿ ಹೇರಿಕೆ ಮಾಡಿಲ್ಲ. ಬಿಜೆಪಿ ಪಕ್ಷ ಈ ದೇಶದಲ್ಲಿ ಯಾರು ಯಾವುದೇ ಭಾಷೆಯನ್ನು ಕಲಿಕೆಯಲು ಸ್ವಾತಂತ್ರ್ಯವನ್ನು ನೀಡಿದೆ. ಆದರೂ ಭಾಷಾ ಕಲಿಕೆ ವಿಚಾರದಲ್ಲಿ ಬಿಜೆಪಿ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ದೂರಿದರು.

Advertisement

ಕೋವಿಡ್‌ ನಿರ್ವಹಣೆಯನ್ನು ಸರ್ಕಾರ ಸಮರ್ಪಕವಾಗಿ ಮಾಡುತ್ತಿದೆ.ಎಲ್ಲರಿಗೂ ಲಸಿಕೆ ಕೊಡಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಹೊರ ರಾಜ್ಯದ ವಿದ್ಯಾರ್ಧಿಗಳು ಅಲ್ಲಿಂದ ಇಲ್ಲಿಗೆ ಬರುವಾಗ ಕೋವಿಡ್‌ ಸೋಂಕು ವ್ಯಕ್ತವಾಗಿರುವುದಿಲ್ಲ.ಆದರೆ ಇಲ್ಲಿಗೆ ಬಂದ ಮೇಲೆ ವ್ಯಕ್ತವಾಗಿದೆ. ಹೀಗಾಗಿ ಇದನ್ನು ನಿರ್ವಹಣೆ ಮಾಡುವ ನಿಟ್ಟಿನಲ್ಲಿ ಕೂಡ ಕಾರ್ಯಗಳು ಸರ್ಕಾರದ ವತಿಯಿಂದ ನಡೆಯುತ್ತಿದೆ ಎಂದು ಹೇಳಿದರು.

ಕೋವಿಡ್‌ ಮಧ್ಯೆದಲ್ಲೇ ನಾವಿದ್ದೇವೆ. ಕಲಿಕಾ ತರಗತಿಗಳು ಕೂಡ ಆರಂಭವಾಗಿದ್ದೇವೆ. ಎಲ್ಲಾ ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ ಶಾಲಾ-ಕಾಲೇಜು ಗಳನ್ನು ಆರಂಭಿಸುವ ಪ್ರಕ್ರಿಯೆ ನಡೆದಿದೆ. ಆದರೂ ಎಚ್ಚರಿಕೆ ವಹಿಸಿ ಕಾರ್ಯ ನಿರ್ವಹಿಸಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next