Advertisement
ಉಜಳಂಬದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಸಿಬ್ಬಂದಿಯಿಂದ ಜಿಲ್ಲಾಧಿಕಾರಿವರೆಗಿನ ಅಧಿಕಾರಿಗಳು ಬೆಳಗ್ಗೆಯಿಂದ ಸಂಜೆವರೆಗೆ ಜನರ ಜೊತೆಗಿದ್ದು ತಾಳ್ಮೆಯಿಂದ ಜನರ ನೋವು ಆಲಿಸುವುದನ್ನು, ಜನರು ಬದಲಾವಣೆ ಆಗುವದನ್ನು ನಾನು ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಾಣುತ್ತಿದ್ದೇನೆ ಎಂದರು. ಈ ಗ್ರಾಮವಾಸ್ತವ್ಯ ಕಾರ್ಯಕ್ರಮದಿಂದ ಜನಸಾಮಾನ್ಯರಿಗೆ ಸ್ಪಂದಿಸುವಂತಹ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.
Related Articles
Advertisement
2006ರಲ್ಲಿ ಇಷ್ಟು ದೊಡ್ಡಮಟ್ಟದ ಗ್ರಾಮವಾಸ್ತವ್ಯ ನಡೆದಿರಲಿಲ್ಲ. ಈ ಹಿಂದೆ ನಾವು ಹಳ್ಳಿಗೆ ಹೋಗೋದೇ ರಾತ್ರಿ 1 ಗಂಟೆಯಾಗುತ್ತಿತ್ತು. ಬರೀ ಅಧಿಕಾರಿಗಳೇ ಅರ್ಜಿ ಪಡೆಯುತ್ತಿದ್ದರು. ಈ ಹಿಂದೆ ನಡೆದ ಗ್ರಾಮವಾಸ್ತವ್ಯ ವೇಳೆ ಪರಿಹಾರ ಪಡೆದುಕೊಂಡವರು ಅದನ್ನು ಈಗಲೂ ನೆನಪಿಸುವುದು ಈಗ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮದ ವೇಳೆ ಗೊತ್ತಾಗಿದೆ ಎಂದು ಅವರು ತಿಳಿಸಿದರು.
ಈ ವೇಳೆ ಸಚಿವರಾದ ಬಂಡೆಪ್ಪ ಖಾಶೆಂಪೂರ, ರಾಜಶೇಖರ ಪಾಟೀಲ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ.ನಾರಾಯಣರಾವ್ ಹಾಗೂ ಇನ್ನೀತರ ಅಧಿಕಾರಿಗಳು ಹಾಜರಿದ್ದರು.