Advertisement
ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ಗುರು ವಾರ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಅದರಲ್ಲಿ ಸಿಎಂ ಆಯ್ಕೆ ಬಗ್ಗೆ ಅಂತಿಮ ನಿರ್ಧಾರವಾಗುವ ಸಾಧ್ಯತೆಯಿದೆ. ಮುಂದಿನ ಎಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನ ದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಆಯ್ಕೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಮಧ್ಯಪ್ರದೇಶದಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಲೋಕಸಭೆ ಚುನಾವಣೆ ಮುಕ್ತಾಯದವರೆಗೆ ಮುಂದುವರಿಸುವ ಸಾಧ್ಯತೆಗಳ ಬಗ್ಗೆಯೂ ಚರ್ಚೆಗಳು ನಡೆದಿವೆ. ಅವರಲ್ಲದೆ ಬಿಜೆಪಿಯ ಕೈಲಾಶ್ ವಿಜಯವರ್ಗೀಯ, ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಸಿಂಗ್ ಪಟೇಲ್, ಜ್ಯೋತಿರಾದಿತ್ಯ ಸಿಂಧಿಯಾ ಅವರು ಸಿಎಂ ಹುದ್ದೆಯ ಮೇಲೆ ಕಣ್ಣಿರಿಸಿದ್ದಾರೆ. ರಾಜಸ್ಥಾನದಲ್ಲಿ ಮಾಜಿ ಸಿಎಂ ವಸುಂಧರಾ ರಾಜೇ, ನೂತನ ಶಾಸಕರಾದ ದಿಯಾ ಕುಮಾರಿ, ಬಾಬಾ ಬಾಲಕನಾಥ್, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್, ಅರ್ಜುನ್ ರಾಮ್ ಮೇಘಾÌಲ್ ಅವರ ಹೆಸರುಗಳೂ ಸಿಎಂ ಹುದ್ದೆಗೆ ಕೇಳಿ ಬರುತ್ತಿವೆ. ಛತ್ತೀಸ್‌ಗಢದಲ್ಲಿ ಮಾಜಿ ಸಿಎಂ ಡಾ| ರಮಣ್ ಸಿಂಗ್ ಜತೆಗೆ ರಾಜ್ಯ ಬಿಜೆಪಿ ಅಧ್ಯಕ್ಷ ಅರುಣ್ ಕುಮಾರ್ ಸಾವೋ, ನಿವೃತ್ತ ಐಎಎಸ್ ಅಧಿಕಾರಿ ಒ.ಪಿ.ಚೌಧರಿ, ನಿಕಟಪೂರ್ವ ವಿಧಾನಸಭೆಯ ವಿಪಕ್ಷ ನಾಯಕ ಧರಮ್‌ಲಾಲ್ ಕೌಶಿಕ್‌ರ ಹೆಸರುಗಳು ಚಾಲ್ತಿಯಲ್ಲಿವೆ.