Advertisement

ಪ್ರಮಾಣ ವಚನ ಸ್ವೀಕರಿಸಿದ ವಿಧಾನ ಪರಿಷತ್ ನ ಐವರು ನಾಮ ನಿರ್ದೇಶಿತ ಸದಸ್ಯರು

03:50 PM Jul 30, 2020 | keerthan |

ಬೆಂಗಳೂರು: ವಿಧಾನ ಪರಿಷತ್ ಗೆ ಇತ್ತೀಚೆಗೆ ನಾಮನಿರ್ದೇಶನಗೊಂಡ ಐವರು ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಇಂದು ನಡೆಯಿತು. ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದರು

Advertisement

ನೂತನ ಸದಸ್ಯರಾದ ಸಿ.ಪಿ.ಯೋಗೇಶ್ವರ್, ಎಚ್. ವಿಶ್ವನಾಥ್, ಶಾಂತಾರಾಮ್ ಸಿದ್ದಿ, ಭಾರತಿ ಶೆಟ್ಟಿ ಹಾಗೂ ಸಾಬಣ್ಣ ತಳವಾರ ಪ್ರಮಾಣ ವಚನ ಸ್ವೀಕರಿಸಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್. ವಿಶ್ವನಾಥ್, ನಾಮ ನಿರ್ದೇಶನಕ್ಕೆ ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಸಿಎಂ ಯಡಿಯೂರಪ್ಪಗೆ ಧನ್ಯವಾದಗಳು ಸಲ್ಲಿಸಿದರು.

ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ. ಕೋವಿಡ್ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಎಲ್ಲ ಜನಪ್ರತಿನಿಧಿಗಳು ಕೋವಿಡ್ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ನಾವೂ ಅವರೊಂದಿಗೆ ಕೈ ಜೋಡಿಸಿ ಕೆಲಸ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಬಿಎಸ್ ವೈ ಸಿಎಂ ಆಗಿ ಮುಂದುವರಿಯಬೇಕೆಂದು ಕುಮಾರಸ್ವಾಮಿ, ಡಿಕೆಶಿ ಬಯಸುತ್ತಾರೆ: ಯೋಗೇಶ್ವರ್

Advertisement

ಶಾಂತಾರಾಮ್ ಸಿದ್ದಿ ಅವರು ಆ ಸಮಾಜದ ಅಭಿವೃದ್ಧಿಗೆ ಎಲೆ ಮರೆಕಾಯಿಯಂತೆ ಕೆಲಸ ಮಾಡುತ್ತಿದ್ದರು. ಅವರ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಸಮಾಜದ ಅಭಿವೃದ್ಧಿಗೆ ಸರ್ಕಾರದ ಮಟ್ಟದಿಂದಲೂ ಎಲ್ಲ ಸಹಕಾರ ನೀಡುತ್ತದೆ ಎಂದರು.

ಬಿಜೆಪಿ ಎಲ್ಲ ಜಾತಿ ಜನಾಂಗಕ್ಕೆ ಅವಕಾಶ ನೀಡುತ್ತಿದೆ. ಇದು ಪಕ್ಷದ ಕಾರ್ಯಕರ್ತರಿಗೆ ಉತ್ಸಾಹ ಹೆಚ್ಚಾಗುವಂತೆ ಮಾಡಿದೆ. ಸಿಎಂ ಯಡಿಯೂರಪ್ಪ ಅವರು ನಾಲಿಗೆ ಮೇಲೆ ನಿಂತ ನಾಯಕ. ಮಾತಿಗೆ ತಪ್ಪದ ನಾಯಕ ಯಡಿಯೂರಪ್ಪ. ನಾವೆಲ್ಲ ಅವರ ಬೆಂಬಲಕ್ಕೆ ಇದ್ದೀವಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next