Advertisement

ಹತ್ತು ಸಾವಿರ ಮೆಗಾವ್ಯಾಟ್‌ ಉತ್ಪಾದನ ಗುರಿಯ ನೂತನ ಇಂಧನ ನೀತಿ: ಸುನಿಲ್‌

11:24 PM Sep 29, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಹತ್ತು ಸಾವಿರ ಮೆಗಾ ವ್ಯಾಟ್‌ ಉತ್ಪಾದನೆಯ ಗುರಿಯೊಂದಿಗೆ ನೂತನ ನವೀಕರಿಸಬಹುದಾದ ಇಂಧನ ನೀತಿಯನ್ನು ತರಲಾಗುವುದು ಎಂದು ಸಚಿವ ವಿ. ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

Advertisement

ಬುಧವಾರ ಪಾವಗಡ ಸೋಲಾರ್‌ ಪಾರ್ಕ್‌ ಪರಿಶೀಲನ ಸಭೆಯ ಬಳಿಕ ಮಾತನಾಡಿದ ಅವರು, ಸೋಲಾರ್‌ ಪಾರ್ಕ್‌ ನಿಂದ 1,850 ಮೆಗಾ ವ್ಯಾಟ್‌ ವಿದ್ಯುತ್‌ ರಾಜ್ಯಕ್ಕೆ ಲಭಿಸುತ್ತಿದ್ದು, 200 ಮೆಗಾವ್ಯಾಟ್‌ ಹೊರರಾಜ್ಯಕ್ಕೆ ಪೂರೈ ಸಲಾಗುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಯವರು 2022ರ ವೇಳೆಗೆ ನವೀಕರಿಸಬಹುದಾದ ಇಂಧನ ಉತ್ಪಾದನ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿ ನೀಡಿದ್ದು, ಈ ನಿಟ್ಟಿನಲ್ಲಿ ನೂತನ ನೀತಿಯನ್ನು ತರಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:ಸ್ವಾತಂತ್ರ್ಯ ಹೋರಾಟಕ್ಕೂ ಸಿದ್ದರಾಮಯ್ಯರಿಗೂ ಏನು ಸಂಬಂಧ: ಆರಗ ಪ್ರಶ್ನೆ

ದೇಶದ ಅತಿದೊಡ್ಡ ಸೋಲಾರ್‌ ಪಾರ್ಕ್‌ ನಿರ್ಮಾಣಕ್ಕಾಗಿ ಭೂಮಿ ನೀಡಿದ ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಅವರಿಗೆ ಅಗತ್ಯವಾದ ಸೌಲಭ್ಯ ಕಲ್ಪಿಸಲಾಗುವುದು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next