Advertisement

ರಾಜ್ಯಕ್ಕೆ ಆಗಮಿಸಿದ ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

04:14 PM Jul 10, 2021 | Team Udayavani |

ಬೆಂಗಳೂರು: ರಾಜ್ಯಕ್ಕೆ ನೂತನ ರಾಜ್ಯಪಾಲರಾಗಿ ನೇಮಕವಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ರಾಜ್ಯಕ್ಕಾಗಮಿಸಿದರು. ಅವರನ್ನು ಕಂದಾಯ ಸಚಿವ ಆರ್ ಅಶೋಕ ಅವರು ಕೆಂಪೇಗೌಡ ಅಂತಾ        ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

Advertisement

ಈ ಸಂದರ್ಭದಲ್ಲಿ ಸರ್ಕಾರದ ‌ಮುಖ್ಯ ಕಾರ್ಯದರ್ಶಿಗ ಪಿ ರವಿಕುಮಾರ್‌, ಪೋಲಿಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಉಪಸ್ಥಿತರಿದ್ದರು.

ಇದನ್ನೂ ಓದಿ:ಕೋವಿಡ್ ಹೆಚ್ಚಳ; ಗೋವಾದಲ್ಲಿ ಕರ್ಫ್ಯೂ ವಿಸ್ತರಣೆ ಸುಳಿವು ನೀಡಿದ ಸಿಎಂ ಸಾವಂತ್

ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯದ 19ನೇ ರಾಜ್ಯಪಾಲರಾಗಿ ರವಿವಾರ ಬೆಳಗ್ಗೆ 10.30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next