Advertisement

ಬಿಜೆಪಿಯಲ್ಲಿ ಸಂತೋಷ್‌ ಬಣ ಸೃಷ್ಟಿ?

12:09 PM Jun 23, 2017 | Team Udayavani |

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಿ.ಎಸ್‌. ಯಡಿಯೂರಪ್ಪ ಬಣ, ಕೆ.ಎಸ್‌.ಈಶ್ವರಪ್ಪ ಬಣ ಒಂದಾಗಿದೆ. ಆದರೆ, ಇದೀಗ ಪಕ್ಷದ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್‌.ಸಂತೋಷ್‌ ಬಣ ಸೃಷ್ಟಿಯಾಗಿದೆಯೇ? ಹೀಗೊಂದು ಅನುಮಾನ ಸೃಷ್ಟಿಯಾಗಿದೆ. ಇದಕ್ಕೆ ಕಾರಣ ಸಂತೋಷ್‌ ಬಳಗದ ಹೆಸರಿನಲ್ಲಿ ಮಾಧ್ಯಮ ಕಚೇರಿಗಳಿಗೆ ಬಂದಿರುವ ಪತ್ರ. ಬಿಜೆಪಿಯ ಲೆಟರ್‌ಹೆಡ್‌ನ‌ಲ್ಲಿ ಬಂದಿರುವ ಈ ಪತ್ರದಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ಮುರಳೀಧರರಾವ್‌, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌, ಉಪನಾಯಕ ಆರ್‌.ಅಶೋಕ್‌, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶೋಭಾ ಕರಂದ್ಲಾಜೆ, ಅರವಿಂದ ಲಿಂಬಾವಳಿ ಮತ್ತು ರವಿಕುಮಾರ್‌ ಅವರನ್ನು ಕೈಬಿಡಬೇಕು. ಜತೆಗೆ, ಉಪಾಧ್ಯಕ್ಷ ಸ್ಥಾನದಿಂದ ಕೈಬಿಟ್ಟ ಭಾನುಪ್ರಕಾಶ್‌ ಮತ್ತು ನಿರ್ಮಲ್‌ ಕುಮಾರ್‌ ಸುರಾನ ಅವರಿಗೆ ಮತ್ತೆ ಪಕ್ಷದಲ್ಲಿ ಅವಕಾಶ ಕಲ್ಪಿಸಬೇಕು ಎಂಬ ಒತ್ತಾಯವಿದೆ.

Advertisement

ಇದೇ ರೀತಿಯ ಹಲವು ಬೇಡಿಕೆಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಪತ್ರದಲ್ಲಿ ಇಡಲಾಗಿದೆ. ಪತ್ರದಲ್ಲಿ ಉಲ್ಲೇಖೀಸಿರುವ ಅಂಶಗಳನ್ನು ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕಾರಿಣಿಯಲ್ಲಿ ಚರ್ಚಿಸಲು ನಿರ್ಧರಿಸಲಾಗಿತ್ತು. ಆದರೆ, ಕಾರ್ಯ ಕಾರಿಣಿಯಲ್ಲಿ ಚರ್ಚೆಯಾಗದೆ ಪ್ರಮುಖ ನಾಯಕರ ಸಭೆಯಲ್ಲಿ ಪ್ರಸ್ತಾಪವಾಗಿ ಪ್ರಕ್ಷುದ್ಧ ವಾತಾವರಣ ನಿರ್ಮಾಣವಾಯಿತು. ಈ ಕಾರಣಕ್ಕಾಗಿಯೇ ಮಾಧ್ಯಮಗಳನ್ನು ಕಾರ್ಯಕಾರಿಣಿಯಿಂದ ದೂರವಿಡಲಾಯಿತು ಎಂಬ ಆರೋಪವಿದೆ. ಆದರೆ, ಈ ಪತ್ರಕ್ಕೂ ಬಿ.ಎಲ್‌.ಸಂತೋಷ್‌ ಅವರಿಗೂ ಯಾವುದೇ ಸಂಬಂಧ ಇಲ್ಲ. ಪಕ್ಷದಲ್ಲಿ ಎಲ್ಲವೂ ಸರಿ ಹೋಗುತ್ತಿದೆ ಎನ್ನುವಾಗ ವಿನಾಕಾರಣ ಗೊಂದಲ ಸೃಷ್ಟಿಸಲು ಕಿಡಿಗೇಡಿಗಳು ಈ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next