Advertisement
ಮನೆ ಹಸ್ತಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಳಪು ಸಿಎ ಬ್ಯಾಂಕ್ ಅಧ್ಯಕ್ಷ, ಗ್ರಾ.ಪಂ. ಮಾಜಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಬೆಳಪು ಗ್ರಾಮದಲ್ಲಿ 600ಕ್ಕೂ ಅಧಿಕ ಬಡಕುಟುಂಬಗಳಿಗೆ ಮನೆ ನಿವೇಶನವನ್ನು ಒದಗಿಸಿ ಕೊಡಲಾಗಿದ್ದು, ಸರಕಾರದ ವಿವಿಧ ಮೂಲಗಳಿಂದ ಗೃಹ ನಿರ್ಮಾಣಕ್ಕೆ ಸರಕಾರ ಮತ್ತು ದಾನಿಗಳಿಂದ ಹಣಕಾಸಿನ ನೆರವನ್ನೂ ದೊರಕಿಸಿಲಾಗಿದೆ. ಮನೆ ನಿವೇಶನ ದೊರಕಿದರೂ, ಮನೆ ನಿರ್ಮಾಣಕ್ಕೆ ಕಷ್ಟ ಪಡುತ್ತಿದ್ದ ಕೆಲವರಿಗೆ ದಾನಿಗಳ ನೆರವಿನೊಂದಿಗೆ ಮನೆ ನಿರ್ಮಾಣದ ಸಂಕಲ್ಪ ಮಾಡಲಾಗಿದ್ದು, ಅದಕ್ಕೆ ಅನುಗುಣವಾಗಿ ಜಮಾಅತೆ ಇಸಾಮೀ ಹಿಂದ್ ಸಹಿತ ವಿವಿಧ ಸಂಸ್ಥೆಗಳು ನಮ್ಮೊಂದಿಗೆ ಕೈ ಜೋಡಿಸಿರುವುದು ಶ್ಲಾಘನೀಯ ಎಂದರು.
Related Articles
Advertisement
ಕಾಪು ಧರಣಿ ಸಮಾಜ ಸೇವಾ ಸಂಘದ ಅಧ್ಯಕ್ಷ ಲೀಲಾಧರ ಶೆಟ್ಟಿ ಕರಂದಾಡಿ, ಉದ್ಯಮಿ ಎಸ್. ಕೆ. ಇಕ್ಬಾಲ್ ಕಟಪಾಡಿ, ಕಾಪು ಮುಷ್ತಾಕ್ ಇಲೆಕ್ಟ್ರಿಕಲ್ಸ್‌ನ ಮಾಲಕ ಮುಷ್ತಾಕ್ ಇಬ್ರಾಹಿಂ, ಜಮಾಅತೆ ಇಸ್ಲಾಮೀ ಹಿಂದ್ ಉಡುಪಿ ಸ್ಥಾಯೀ ಅಧ್ಯಕ್ಷ ಡಾ| ಅಬ್ದುಲ್ ಅಜೀಜ್, ಇಕ್ಬಾಲ್ ಸಾಹೇಬ್ ಮಜೂರು ಅತಿಥಿಗಳಾಗಿ ಭಾಗವಹಿಸಿದ್ದರು.
ಜಮಾಅತೆ ಇಸಾಮೀ ಹಿಂದ್‌ನ ಹೂಡೆ ಸ್ಥಾನೀಯ ಅಧ್ಯಕ್ಷ ಅಬ್ದುಲ್ ಖಾದರ್, ಮಲ್ಪೆ ಸ್ಥಾನೀಯ ಅಧ್ಯಕ್ಷ ಅಬ್ದುಲ್ ರಹಮಾನ್ ರಫೀಕ್, ಹೆಚ್.ಆರ್.ಎಸ್. ನ ಜಿಲ್ಲಾ ಸಂಚಾಲಕ ಹಸನ್ ಮೊದಲಾದವರು ಉಪಸ್ಥಿತರಿದ್ದರು.
ಜಮಾಅತೆ ಇಸ್ಲಾಮೀ ಹಿಂದ್‌ನ ಕಾಪು ಸ್ಥಾನೀಯ ಅಧ್ಯಕ್ಷ ಅನ್ವರ್ ಅಲಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಮಹಮ್ಮದ್ ಇಕ್ಬಾಲ್ ಆದಂ ಮಜೂರು ವಂದಿಸಿದರು. ನಿಸಾರ್ ಅಹಮದ್ ಕಟಪಾಡಿ ಕಾರ್ಯಕ್ರಮ ನಿರೂಪಿಸಿದರು.