Advertisement
ಭಾರತೀಯ ಕೈಗಾರಿಕೆಗಳ ಒಕ್ಕೂಟವು (ಸಿಐಐ) ಆಶ್ರಯದಲ್ಲಿ ಸಂಘಟಿಸಲಾಗಿರುವ “ಸಿಐಐ ಎಗ್ರೋ ಹಾಗೂ ಫೂಡ್ ಟೆಕ್ 2020” ವರ್ಚವಲ್ ಕಾನ್ಫರೆನ್ಸ್ ಉದ್ದೇಶಿಸಿ ಮಾತನಾಡಿದ ಸಚಿವ ಸದಾನಂದ ಗೌಡ ಅವರು ದೀರ್ಘಕಾಲದವರೆಗೆ ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಲು ಸಾವಯವ ಕೃಷಿ ಅನಿವಾರ್ಯ ಎಂದರು.
Related Articles
Advertisement
ಪ್ರಧಾನಿಯವರ ಆಶಯದಂತೆ ರಸಗೊಬ್ಬರ ವಲಯದಲ್ಲಿ ಸಂಪೂರ್ಣ ಸ್ವಾಲಂಬನೆ ಗಳಿಸುವಲ್ಲಿ ನಮ್ಮ ರಸಗೊಬ್ಬರ ಇಲಾಖೆಯು ಅನೇಕ ಕ್ರಮಗಳನ್ನು ಕೈಗೊಂಡಿದೆ. ಪೊಟಾಷ್ ಗೊಬ್ಬರಕ್ಕೆ ಸಂಬಂಧಿಸಿದಂತೆ ನಾವು ಬಹುತೇಕ ಆಮದನ್ನೇ ಅವಲಂಬಿಸಿದ್ದೇವೆ. ಆದರೆ ಶೇಕಡಾ ೮೦ರಷ್ಟು ಯೂರಿಯಾ ಸ್ವದೇಶದಲ್ಲಿಯೇ ಉತ್ಪಾದನೆ ಮಾಡುತ್ತಿದ್ದೇವೆ. ಪೊಸ್ಫೆಟಿಕ್ ನಮೂನೆಯ ಗೊಬ್ಬರ ಅರ್ಧದಷ್ಟು ನಮ್ಮಲ್ಲಿಯೇ ಉತ್ಪಾದನೆ ಆಗುತ್ತದೆ. ರಸಗೊಬ್ಬರಕ್ಕೆ ಅಗತ್ಯವಾದ ಕಚ್ಚಾವಸ್ತುಗಳನ್ನು ನೇರ ಆವಕಕ್ಕೆ ಪ್ರಯತ್ನಿಸಲಾಗುತ್ತಿದೆ. ವಿದೇಶೀ ಕಂಪನಿಗಳ ಜೊತೆ ಪಾಲುಗಾರಿಕೆ ಹೊಂದಲು ಭಾರತದ ಖಾಸಗಿ ರಸಗೊಬ್ಬರ ಕಂಪನಿಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಸಚಿವ ಸದಾನಂದ ಗೌಡ ವಿವರಿಸಿದರು.
ಇದನ್ನೂ ಓದಿ: ಬಾಲಿವುಡ್ ನಟಿ ಕಂಗನಾ ಹಾಗೂ ಸಹೋದರಿ ರಂಗೋಲಿ ಚಾಂಡೆಲ್ ವಿರುದ್ಧ FIR ದಾಖಲು
ರಸಗೊಬ್ಬರ ಇಲಾಖೆಯು ದೇಶಾದ್ಯಂತ ರಸಗೊಬ್ಬರ ಪೂರೈಕೆಯನ್ನು ಸಮರ್ಪಕವಾಗಿ ಹಾಗೂ ಕರಾರುವಕ್ಕಾಗಿ ಕೈಗೊಳ್ಳಲು ಉನ್ನತ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದೆ. ರೈತರಿಗೆ ದೊರೆಯುವ ರಿಯಾಯತಿ ಸೋರಿಕೆಯಾಗದಂತೆ ತಡೆಯಲು ನೇರ ನೆರವು ವರ್ಗಾವಣೆ ವ್ಯವಸ್ಥೆಯನ್ನು (ಡಿಬಿಟಿ ಸಿಸ್ಟಮ್) ಅಳವಡಿಸಿಕೊಳ್ಳಲಾಗಿದೆ. ಮೇಲಿಂದಮೇಲೆ ಈ ತಂತ್ರಾಂಶ/ದತ್ತಾಂಶಗಳನ್ನು ಉನ್ನತೀಕರಣಗೊಳಿಸಲಾಗುತ್ತಿದ್ದು “ಗವರ್ನನ್ಸ್ ಡಿಜಿಟಲ್ ಟ್ರಾನ್ಸಫೊರ್ಮೇಶನ್ ಅವಾರ್ಡ್” ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಇಲಾಖೆ ಭಾಜನವಾಗಿದೆ ಎಂದು ಸದಾನಂದ ಗೌಡ ತಿಳಿಸಿದರು.
ಸಿಐಐ ಟೆಕ್ ಮೇಳದ ಅಧ್ಯಕ್ಷ ಶ್ರೀ ಅಜಯ್ ಎಸ್ ಶ್ರೀರಾಮ್, ಸಮ್ಮೇಳನದ ಸಂಚಾಲಕ ಡಾ, ಅರವಿಂದ್ ಕಪೂರ್, ಇಲಾಖಾ ಕಾರ್ಯದರ್ಶಿ ಛಬಿಲೇಂದ್ರ ರೌಲ್ ಮುಂತಾದವರು ಪಾಲ್ಗೊಂಡರು.