ಮುಂಬೈ: ಮಹಾರಾಷ್ಟ್ರದ ನೂತನ ಮಹಾಯುತಿ ಸರಕಾರ ಡಿಸೆಂಬರ್ 5 ರಂದು ಸಂಜೆ ಆಜಾದ್ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದೆ ಎಂದು ರಾಜ್ಯ ಬಿಜೆಪಿ ಶನಿವಾರ ಪ್ರಕಟಿಸಿದೆ.
ಮುಖ್ಯಮಂತ್ರಿ ಯಾರೆಂಬುದರ ಕುರಿತು ಇನ್ನೂ ಯಾವುದೇ ಘೋಷಣೆಯಾಗದಿದ್ದರೂ, ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಮತ್ತು ಕಳೆದ ಏಕನಾಥ್ ಶಿಂಧೆ ನೇತೃತ್ವದ ಸರಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವಿಸ್ ಅವರು ಉನ್ನತ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ನಿಯೋಜಿತ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಶಿಂಧೆ, ನೂತನ ಸರಕಾರ ರಚನೆಯಾಗುತ್ತಿರುವ ವೇಳೆ ಅಸಮಾಧಾನಗೊಂಡಿದ್ದಾರೆ ಎಂಬ ಊಹಾಪೋಹಗಳ ನಡುವೆ ಒಂದು ದಿನ ಮುಂಚಿತವಾಗಿ ಸತಾರಾ ಜಿಲ್ಲೆಯ ತಮ್ಮ ಸ್ವಗ್ರಾಮ ಡೇರ್‌ಗೆ ತೆರಳಿದ್ದು, ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರು ದೆಹಲಿಯಿಂದ ಮರಳಿದ ಬಳಿಕ ಕೆಮ್ಮು ಮತ್ತು ಶೀತವಿದೆ. ಪ್ರಯಾಸ ಅವರ ಮೇಲೆ ಪರಿಣಾಮ ಬೀರಿದ್ದರಿಂದ ನಾವು ವಿಶ್ರಾಂತಿ ತೆಗೆದುಕೊಳ್ಳಲು ಸಲಹೆ ನೀಡಿದ್ದೇವೆ” ಎಂದು ಶಿವಸೇನಾ ಮುಖಂಡ ಶಂಭುರಾಜ್ ದೇಸಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಏತನ್ಮಧ್ಯೆ, ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಡಿಸೆಂಬರ್ 2 ರಂದು ಸಭೆ ನಡೆಯಲಿದ್ದು,
ಫಡ್ನವೀಸ್ ಅವರಿಗೆ ಈ ಬಾರಿ ಸಿಎಂ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.