Advertisement
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಸಹಿತ ಮಂಗಳೂರು ದಕ್ಷಿಣ ಮತ್ತು ಉತ್ತರ ಶಾಸಕರ ಸಮಕ್ಷಮದಲ್ಲಿ ಶನಿವಾರ ಮಹತ್ವದ ಸಭೆ ನಡೆಯುವ ಸಾಧ್ಯತೆ ಇದ್ದು, ಸಭೆಯಲ್ಲಿ ಮೇಯರ್ ಮತ್ತು ಉಪಮೇಯರ್ ಅಭ್ಯರ್ಥಿ ಅಂತಿಮಗೊಳ್ಳುವ ನಿರೀಕ್ಷೆ ಇದೆ.
Related Articles
ಹಾಲಿ ಮೇಯರ್ ದಿವಾಕರ ಪಾಂಡೇಶ್ವರ ಅವರ ಅಧಿಕಾರಾವಧಿ ಫೆ. 28ಕ್ಕೆ ಪೂರ್ಣಗೊಳ್ಳಲಿದೆ. ಆದರೆ, ಮಾರ್ಚ್ 2ರಂದು ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ನಿಯಮದ ಪ್ರಕಾರ ಮಾರ್ಚ್ 2ರ ವರೆಗೆ ಹಾಲಿ ಮೇಯರ್ ದಿವಾಕರ ಪಾಂಡೇಶ್ವರ ಮತ್ತು ಉಪಮೇಯರ್ ವೇದಾವತಿ ಅವರ ಅಧಿಕಾರಾವಧಿ ವಿಸ್ತರಣೆ ಗೊಳ್ಳಲಿದೆ ಎಂದು ಪಾಲಿಕೆ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
Advertisement
ವಾರಾಂತ್ಯದೊಳಗೆ ಸಭೆಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಅಭ್ಯರ್ಥಿ ಯಾರೆಂದು ಇನ್ನೂ ಅಂತಿಮಗೊಂಡಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಸೂಚನೆಯಂತೆ ಬಿಜೆಪಿ ಜಿಲ್ಲಾಧ್ಯಕ್ಷರು ಈ ವಾರಾಂತ್ಯದಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಅಭ್ಯರ್ಥಿಯ ಹೆಸರು ಅಂತಿಮಗೊಳಿಸುತ್ತೇವೆ. ಮಾ. 2ರಂದು ಮೇಯರ್, ಉಪಮೇಯರ್ ಚುನಾವಣೆ ನಿಗದಿಯಾಗಿದ್ದು, ಅಭ್ಯರ್ಥಿ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ. ಪಕ್ಷದ ತೀರ್ಮಾನವೇ ಅಂತಿಮವಾಗಿರುತ್ತದೆ.
-ಡಿ. ವೇದವ್ಯಾಸ ಕಾಮತ್, ಶಾಸಕರು.