Advertisement
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಯಳಂದೂರು, ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದಕಾಂಗ್ರೆಸ್ ಬೆಂಬಲಿತ ವಿಜೇತ ಅಭ್ಯರ್ಥಿಗಳಿಗೆ ಹಮ್ಮಿ ಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದಅವರು, ಸಾರ್ವಜನಿಕರ ಸೇವೆಯಿಂದ ದೀರ್ಘವಾಗಿ ರಾಜಕಾರಣದಲ್ಲಿ ಉಳಿದುಕೊಳ್ಳಬಹುದು. ಜನರಕಷ್ಟಗಳಿಗೆ ಸ್ಪಂದಿಸುವ ಜನಪ್ರತಿನಿಧಿಗೆ ಸೋಲೇ ಇರುವುದಿಲ್ಲ. ಸೋತರು ತಾತ್ಕಾಲಿಕ ಸೋಲಾಗಿರುತ್ತದೆ. ರಾಜಕಾರಣದಲ್ಲಿ ಇದು ಸ್ವಾಭಾವಿಕ ಪ್ರಕ್ರಿಯೆಯಾಗಿದ್ದು, ಸೋತವರು ಧೃತಿಗೆಡಬಾರದು ಎಂದರು.
Related Articles
Advertisement
ಅಧ್ಯಕ್ಷ, ಉಪಾಧ್ಯಕ್ಷ ಆಮಿಷಕ್ಕೆ ಬಲಿಯಾಗಬೇಡಿ : ಕೊಳ್ಳೇಗಾಲ ಕ್ಷೇತ್ರದಲ್ಲಿ ಶಾಸಕ ಎನ್. ಮಹೇಶ್ ಅವರು ನನ್ನ ಬೆಂಬಗರು 100 ರಿಂದ 120 ಸ್ಥಾನ ಗೆದ್ದಿದ್ದಾರೆ. ನಾವು ಹಲವು ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿಯಲಿದ್ದೇವೆ ಎಂಬ ಗೊಂದಲದ ಹೇಳಿಕೆ ಕೊಟ್ಟಿದ್ದಾರೆ. ಆದರೆ, ಇದಕ್ಕೆ ಸೂಕ್ತ ದಾಖಲೆಗಳೇ ಇಲ್ಲ. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಆಮಿಷವೊಡ್ಡಿ ತಮ್ಮ ಬೇಳೆಬೇಯಿಸಿಕೊಳ್ಳಲು ಕೆಲವರು ಗಾಳ ಹಾಕುತ್ತಿದ್ದಾರೆ. ಇದರಿಂದ ಬಿಜೆಪಿ ಕೂಡ ಹೊರತಾಗಿಲ್ಲ. ಹೀಗಾಗಿ ಇಂತಹ ಆಮಿಷಗಳಿಗೆ ಯಾವ ಸದಸ್ಯರೂ ಬಲಿಯಾಗಬಾರದು ಎಂದು ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ ಮನವಿ ಮಾಡಿದರು. ಕೊಳ್ಳೇಗಾಲ ಕ್ಷೇತ್ರ ವ್ಯಾಪ್ತಿಯಲ್ಲಿ 24 ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಸಂಖ್ಯೆ ಅಧಿಕವಾಗಿದ್ದು ಅಧಿಕಾರ ಹಿಡಿಯುವ ಪೂರ್ಣ ವಿಶ್ವಾಸವಿದೆ ಎಂದರು.
ಕ್ಷೇತ್ರಕ್ಕೆ ಶಾಸಕ ಮಹೇಶ್ ಕೊಡುಗೆ ಶೂನ್ಯ : ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಪರವಾದ ನಿಲುವು ಸಾರ್ವಜನಿಕರಲ್ಲಿ ಹೆಚ್ಚಾಗಿದೆ ಎಂಬುದು ಈ ಚುನಾವಣೆ ತೋರಿಸಿಕೊಟ್ಟಿದೆ. ಹಾಲಿ ಇರುವ ಶಾಸಕರು ಸಚಿವರಾಗಿಯೂ ಕೆಲ ಕಾಲ ಕಾರ್ಯನಿರ್ವಹಿಸಿದ್ದರು. ಆದರೆ, ಇವರು ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಶೂನ್ಯವಾಗಿದೆ. ಒಂದೇ ಒಂದು ಹೊಸ ಯೋಜನೆಯನ್ನು ಇವರ ಕೈಯಲ್ಲಿ ತರಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿರುವ ಬಿಜೆಪಿ ಸರ್ಕಾರದ ಕತೆಯೂ ಇದೆ ಆಗಿದೆ ಎಂದು ಧ್ರುವನಾರಾಯಣ್ ವಾಗ್ಧಾಳಿ ನಡೆಸಿದರು.