Advertisement

11 ಗಂಟೆಗೆ ನೂತನ ಸಚಿವರ ಪಟ್ಟಿ ರಿಲೀಸ್ : ಮಧ್ಯಾಹ್ನ ಪ್ರಮಾಣ ವಚನ : ಬೊಮ್ಮಾಯಿ

09:37 AM Aug 04, 2021 | Team Udayavani |

ಬೆಂಗಳೂರು : ನೂತನ ಸಚಿವರ ಪಟ್ಟಿಯನ್ನು ಇಂದು ಬೆಳಗ್ಗೆ 11 ಗಂಟೆಗೆ ಘೋಷಣೆ ಮಾಡಲಾಗುವುದು ಎಂದು ನೂತನ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ.

Advertisement

ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿಕೊಂಡ ಬಳಿಕ ಹೊಸ ಸಂಪುಟ ರಚನೆ ಮಾಡುವ ಬಗ್ಗೆ ಚರ್ಚೆಗಳು ಬಿರುಸಾಗಿ ನಡೆಯುತ್ತಿವೆ. ಇದೇ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದ ಬೊಮ್ಮಾಯಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ನೂತನ ಸಚಿವರ ಪಟ್ಟಿಯನ್ನು ಬೆಳಗ್ಗೆ 11 ಗಂಟೆಗೆ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ ಭವನದಲ್ಲಿ 11 ಗಂಟೆಗೆ ಅಧಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ವರಿಷ್ಠರು ಸಚಿವ ಸಂಪುಟ ರಚನೆಗೆ ಒಪ್ಪಿಗೆ ಕೊಟ್ಟಿದ್ದಾರೆ. ಹೈಕಮಾಂಡ್ ಜೊತೆ ಈ ಬಗ್ಗೆ ಚರ್ಚೆಯೂ ಆಗಿದೆ. ಅಲ್ಲದೆ ನೂತನ ಸಚಿವರು ಇಂದು ಮಧ್ಯಾಹ್ನವೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next