Advertisement
ಸಂಘದ ಅಧ್ಯಕ್ಷ ಹರೀಶ್ ಶೆಟ್ಟಿ ಕುರ್ಕಾಲ್ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರ ಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕ ರಘುಪತಿ ಭಟ್, ಗೌರವ ಅತಿಥಿಗಳಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾದ ಎ. ಗೋಪಾಲ್ ಅಂಚನ್ ಹಾಗೂ ರಾಷ್ಟ್ರಪತಿ ಪುರಸ್ಕಾರ ಪಡೆದ ಶಿಕ್ಷಕ ಕುದಿ ವಸಂತ್ ಶೆಟ್ಟಿ, ಗೌರವ ಅತಿಥಿಯಾಗಿ ಪುಣೆ ತುಳುಕೂಟದ ಅಧ್ಯಕ್ಷ ಮೋಹನ್ ಶೆಟ್ಟಿ ಎಣ್ಣೆಹೊಳೆ ಉಪಸ್ಥಿತರಿದ್ದರು. ಅತಿಥಿಗಣ್ಯರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯಿತ್ತರು.
Related Articles
Advertisement
ತುಳುಕೂಟ ಪಿಂಪ್ರಿ-ಚಿಂಚಾÌಡ್ ಇನ್ನು ಮುಂದೆ ತುಳುಸಂಘ ಪಿಂಪ್ರಿ-ಚಿಂಚಾÌಡ್ ಎನ್ನುವ ಹೆಸರಿನೊಂದಿಗೆ ಕರೆಸಿಕೊಳ್ಳಲಿದೆ.
ಪುಣೆಯಲ್ಲಿ ಶ್ರೇಷ್ಠ ನಾಯಕತ್ವದೊಂದಿಗೆ ಗುರುತಿಸಿಕೊಂಡು ಪುಣೆ ಬಂಟರ ಭವನವನ್ನು ತನ್ನ ನೇತೃತ್ವದಲ್ಲಿ ನಿರ್ಮಿಸಿ ಲೋಕಾರ್ಪಣೆಗೊಳಿಸಿದ, ವಿಶೇಷ ಸಮಾಜ ಸೇವಕನಾಗಿ ಗುರುತಿಸಿ ಕೊಳ್ಳುವ ಪುಣೆ ತುಳುಕನ್ನಡಿಗರೆಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾದ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು ಮತ್ತು ದಿವ್ಯಾ ಸಂತೋಷ್ ಶೆಟ್ಟಿ ದಂಪತಿಯನ್ನು ವರ್ಷದ ಸಾಧಕರನ್ನಾಗಿ ಬೃಹತ್ ಹಾರ ತೊಡಿಸಿ, ಫಲ-ಪುಷ್ಪ, ಸ್ಮರಣಿಕೆ, ಸಮ್ಮಾನಪತ್ರಗಳನ್ನು ನೀಡಿ ಸಮ್ಮಾನಿಸಲಾಯಿತು. ಅತಿಥಿಗಳನ್ನು ಶಾಲು ಹೊದೆಸಿ, ನೆನಪಿನ ಕಾಣಿಕೆಗಳನ್ನು ನೀಡಿ ಸತ್ಕರಿಸಲಾಯಿತು.
ಸಮಾರಂಭದಲ್ಲಿ ಉಪಸ್ಥಿತರಿದ್ದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರನ್ನು ಎಲೆ- ಅಡಿಕೆ, ಹಿಂಗಾರ ನೀಡಿ ಗೌರವಿಸಲಾಯಿತು. ಉಪಾಧ್ಯಕ್ಷ ದಿನೇಶ್ ಶೆಟ್ಟಿ ಉಜಿರೆ ಸ್ವಾಗತಿಸಿದರು. ಸಂತೋಷ್ ಕಡಂಬ, ಶ್ಯಾಮ್ ಸುವರ್ಣ, ಸುಧಾಕರ ಶೆಟ್ಟಿ ಪೆಲತ್ತೂರು ಅತಿಥಿಗಳನ್ನು ಪರಿಚಯಿಸಿದರು. ನೂತನ್ ಸುವರ್ಣ ಮತ್ತು ಕುಸುಮಾ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಸಂತೋಷ್ ಶೆಟ್ಟಿ ಪೆರ್ಡೂರು ವಂದಿಸಿದರು.
ಜಯಲಕ್ಷ್ಮೀ ಪಿ. ಶೆಟ್ಟಿ, ಜ್ಯೋತಿ ವಿ. ಶೆಟ್ಟಿ ಹಾಗೂ ಪ್ರೇಮಾ ವಿ. ಶೆಟ್ಟಿ ಇವರೊಗಳೊಂದಿಗೆ ತಾಳ್ಮೆಯ ಹಾದಿ ಎಂಬ ಮುಕ್ತ ಸಂದರ್ಶನ ಕಾರ್ಯಕ್ರಮ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಸಮಿತಿ ಸದಸ್ಯರಿಂದ ನೃತ್ಯ ವೈವಿಧ್ಯಗಳು, ಸಂಘದ ಸದಸ್ಯರಿಂದ ರಸಮಂಜರಿ ಕಾರ್ಯಕ್ರಮ ಹಾಗೂ ಪ್ರಶಸ್ತಿ ವಿಜೇತ ತುಳು ನಾಟಕ ಮಣ್ಣಿ ಪ್ರದರ್ಶನಗೊಂಡು ಪ್ರೇಕ್ಷಕರ ಮನಸೂರೆಗೊಂಡಿತು. ಸಂಘದ ಪದಾಧಿಕಾರಿಗಳು ಹಾಗೂ ಯುವ ವಿಭಾಗದ ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಚಿತ್ರ-ವರದಿ : ಕಿರಣ್ ಬಿ. ರೈ ಕರ್ನೂರು