ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಸಾನ್ಯಾ ಅಯ್ಯರ್ ಸದ್ಯ ಬಾಲಿವುಡ್‌ಗೆ ಹಾರುವ ಕನಸು ಕಾಣುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬಾಲಿವುಡ್‌ನಲ್ಲಿ ಪ್ರಾಜೆಕ್ಟ್ ಮಾಡುತ್ತಿದ್ದು, ಅದಕ್ಕಾಗಿ ಬಾಲಿವುಡ್ ಖ್ಯಾತ ಫೋಟೋಗ್ರಾಫರ್ ಡಬೂ ರತ್ನಾನಿ ಅವರಿಂದ ಫೋಟೋಶೂಟ್ ಮಾಡಿಸಿಕೊಂಡಿ ರುವುದಾಗಿ ತಿಳಿಸಿದ್ದ ಸಾನ್ಯಾ ಅಯ್ಯರ್, ಇದೀಗ ತಮ್ಮ ಫೋಟೋಶೂಟ್ ನ ವೆರೈಟಿ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ಇನ್ನು ಕಳೆದ ಕೆಲ ದಿನಗಳಿಂದ ತಮ್ಮ ಫೋಟೋಶೂಟ್‌ನ ಫೋಟೋಗಳನ್ನು ಒಂದೊಂದಾಗಿ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿ ಕೊಳ್ಳುತ್ತಿರುವ ಸಾನ್ಯಾ ಫೋಟೋಗಳು ನೋಡುಗರ ಗಮನ ಸೆಳೆಯುತ್ತಿದೆ.
ಸದ್ಯ ಸಾನ್ಯಾ ಅಯ್ಯರ್ ಶೇರ್ ಮಾಡಿರುವ ಫೋಟೋಗಳಲ್ಲಿ ಸಾನ್ಯಾ ಸಖತ್ ಹಾಟ್ ಹಾಟ್ ಆ್ಯಂಡ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ