Advertisement

ಬಂಟರ ಸಂಘ ಮುಂಬಯಿ ನೂತನ ಅಧ್ಯಕ್ಷರಾಗಿ ಚಂದ್ರಹಾಸ್‌ ಕೆ. ಶೆಟ್ಟಿ ಅವಿರೋಧ ಆಯ್ಕೆ

07:46 PM Feb 01, 2021 | Team Udayavani |

ಮುಂಬಯಿ: ಮುಂಬಯಿಯ ಹಿರಿಯ ಪ್ರತಿಷ್ಠಿತ ಸಮಾಜ ಸೇವಾ ಸಂಸ್ಥೆ ಬಂಟರ ಸಂಘ ಮುಂಬಯಿ ಇದರ ನೂತನ ಅಧ್ಯಕ್ಷರಾಗಿ ಸಮಾಜ ಸೇವಕ, ಹಿರಿಯ ಹೊಟೇಲ್‌ ಉದ್ಯಮಿ, ಸಂಘಟಕ ಚಂದ್ರಹಾಸ್‌ ಕೆ. ಶೆಟ್ಟಿ ಅವರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advertisement

ಜ. 31ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ 92ನೇ ವಾರ್ಷಿಕ ಮಹಾಸಭೆಯಲ್ಲಿ 2021-2023ರ ಅವಧಿಗೆ ಚಂದ್ರಹಾಸ್‌ ಕೆ. ಶೆಟ್ಟಿ ಅವರನ್ನು ಸಂಘದ ಮೂವತ್ತನೇ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಚಂದ್ರಹಾಸ ಕೆ. ಶೆಟ್ಟಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಿರಿಯ ನ್ಯಾಯವಾದಿ ಡಿ. ಕೆ. ಶೆಟ್ಟಿ ಪ್ರಕಟಿಸಿದಾಗ ಸದಸ್ಯರು ಹಷೊìದ್ಘಾರದಿಂದ ಅವರನ್ನು ಸ್ವಾಗತಿಸಿ ಅನುಮೋದಿಸಿದರು. ನೂತನ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ ಅವರನ್ನು ನಿರ್ಗಮನ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆಯಾಗಿ ಉಮಾಕೃಷ್ಣ ಶೆಟ್ಟಿ ಮತ್ತು ಯುವ ವಿಭಾಗದ ನೂತನ ಕಾರ್ಯಾಧ್ಯಕ್ಷರಾಗಿ ಸಾಗರ್‌ ದಿವಾಕರ ಶೆಟ್ಟಿ ಅವರನ್ನು ನೇಮಿಸಲಾಯಿತು.

ಇದನ್ನೂ ಓದಿ:ರಾಯರ ದರ್ಶನದಿಂದ ಜೀವನ ಪಾವನ: ಪ್ರಹ್ಲಾದಾಚಾರ್ಯ

ಮಹಿಳಾ ವಿಭಾಗದ ನಿರ್ಗಮನ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ ಅವರು ನೂತನ ಕಾರ್ಯಾಧ್ಯಕ್ಷೆ ಉಮಾಕೃಷ್ಣ ಶೆಟ್ಟಿ ಅವರನ್ನು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರೆ, ಯುವ ವಿಭಾಗದ ನಿರ್ಗಮನ ಕಾರ್ಯಾಧ್ಯಕ್ಷ ಶರತ್‌ ಶೆಟ್ಟಿ ಅವರು ನೂತನ ಕಾರ್ಯಾಧ್ಯಕ್ಷ ಸಾಗರ್‌ ದಿವಾಕರ್‌ ಶೆಟ್ಟಿ ಅವರನ್ನು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಗೌರವಿಸಿದರು. ಚಿತ್ರ-ವರದಿ: ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

Advertisement
Advertisement

Udayavani is now on Telegram. Click here to join our channel and stay updated with the latest news.

Next