Advertisement
ಗ್ರಾಹಕರ ಅಭಿರುಚಿಗೆ ತಕ್ಕಂತೆ ಕಾಲ ಕಾಲಕ್ಕೆ ಅನುಗುಣವಾಗಿ ಕೆಎಂಎಫ್ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಹಾಗೂ ಇನ್ನಿತರೆ ಅಗತ್ಯ ಹೊಸ ಹೊಸ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ. ಅದರ ಭಾಗವಾಗಿ ಈಗ ನಂದಿನಿ ದೋಸೆ ಹಾಗೂ ಇಡ್ಲಿ ಹಿಟ್ಟು ಪರಿಚಯಿಸಲಾಗಿದೆ. ನಗರ ಪ್ರದೇಶಗಳಲ್ಲಿ ಕೆಲಸದ ಒತ್ತಡದಿಂದಾಗಿ ಬಹುತೇಕರು ನಿತ್ಯ ಆಹಾರವನ್ನು ಮನೆಯಲ್ಲೇ ತಯಾರಿಸಲು ಸಿದ್ಧ ಆಹಾರಗಳ ಮೊರೆ ಹೋಗುತ್ತಿದ್ದಾರೆ. ಇದನ್ನು ಗಮನದಲ್ಲಿರಿಸಿಕೊಂಡು ಕೆಎಂಎಫ್ ಅರೋಗ್ಯಕರ ಇಡ್ಲಿ, ದೋಸೆ ಹಿಟ್ಟನ್ನು ಗ್ರಾಹಕರಿಗೆ ಒದಗಿಸಲು ತೀರ್ಮಾನಿಸಿದೆ.
ಬೆಂಗಳೂರು ನಗರದಲ್ಲಿ ಪ್ರಾಯೋಗಿಕವಾಗಿ ನಂದಿನಿ ಬ್ರಾಂಡ್ನ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಎರಡು ವಿವಿಧ ಪ್ಯಾಕ್ಗಳಲ್ಲಿ ಅಂದರೆ 400 ಗ್ರಾಂಗೆ 40 ರೂ. ಹಾಗೂ 900 ಗ್ರಾಂಗೆ 80 ರೂ. ಗರಿಷ್ಠ ಮಾರಾಟ ದರ ನಿಗದಿಪಡಿಸಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ಬಳಿಕ ಮಾರುಕಟ್ಟೆಯಲ್ಲಿ ಗ್ರಾಹಕರ ಪ್ರತಿಕ್ರಿಯೆ ಅವಲೋಕಿಸಿ, ಉಳಿದ ನಗರಗಳಿಗೂ ವಿಸ್ತರಿಸುವ ಯೋಜನೆ ಹೊಂದಿದೆ.
Related Articles
Advertisement