Advertisement

ಸಿ.ಟಿ. ರವಿ, ಸುನಿಲ್ ಕುಮಾರ್ ಗೆ ಹೊಸ ಹೊಣೆ

11:26 PM Nov 13, 2020 | mahesh |

ಬೆಂಗಳೂರು: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರು ಸಂಘಟನಾತ್ಮಕವಾಗಿ ಪಕ್ಷವನ್ನು ಇನ್ನಷ್ಟು ಬಲಪಡಿಸುವ ದೃಷ್ಟಿಯಿಂದ ವಿವಿಧ ರಾಜ್ಯಗಳ ಪ್ರಭಾರಿ ಹಾಗೂ ಸಹ ಪ್ರಭಾರಿಗಳ ನಿಯೋಜನೆ ಮಾಡಿದ್ದರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರನ್ನು ಮಹಾರಾಷ್ಟ್ರ, ಗೋವಾ ಮತ್ತು ತಮಿಳುನಾಡಿಗೆ ಪ್ರಭಾರಿಯಾಗಿ ನೇಮಿಸಲಾಗಿದೆ. ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರನ್ನು ಕೇರಳಕ್ಕೆ ಪ್ರಭಾರಿಯಾಗಿ ನೇಮಿಸಲಾಗಿದೆ. ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಅವರನ್ನು ಪುದುಚೇರಿಗೆ ಉಸ್ತುವಾರಿಯಾಗಿ ನೇಮಿಸಲಾಗಿದೆ. ಕರ್ನಾಟಕಕ್ಕೆ ಅರುಣ್ ಸಿಂಹ ಪ್ರಭಾರಿ ಹಾಗೂ ಡಿ.ಕೆ.ಅರುಣಾ ಅವರನ್ನು ಸಹ ಪ್ರಭಾರಿಯಾಗಿ ನೇಮಿಸಲಾಗಿದೆ ಎಂದು ರಾಷ್ಟ್ರೀಯ ಬಿಜೆಪಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next