Advertisement
ಸಭೆಯ ಬಳಿಕ ಮಾತಾನಾಡಿದ ಅವರು, ಮಾಸ್ಕ್ ಧರಿಸುವುದು, ದೈಹಿಕ ಅಂತರವನ್ನು ಪಾಲಿಸುವುದರ ಜೊತೆಗೆ, ಜಾತ್ರೆ, ಸಮಾವೇಶ, ಪ್ರತಿಭಟನೆಯಲ್ಲಿ ಜನಸಂದಣಿ ಸೇರುವಂತಿಲ್ಲ ಎಂದು ಹೇಳಿದ್ದಾರೆ.
Related Articles
Advertisement
ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲು ನಿರ್ಧರಿಸಲಾಯಿತು. ಕೋವಿಡ್ ಲಸಿಕೆಯ ಎರಡೂ ಡೋಸ್ ಗಳನ್ನು ಪಡೆದು 9 ತಿಂಗಳು ಪೂರೈಸಿದ ಮುಂಚೂಣಿಯ ಕಾರ್ಯಕರ್ತರಿಗೆ 3ನೇ ಡೋಸ್ ಅನ್ನು ಆದ್ಯತೆಯ ಮೇರೆಗೆ ನೀಡಲು ಸೂಚಿಸಿದರು.
ಮೂರನೇ ಅಲೆಯಲ್ಲಿ ಹೋಮ್ ಐಸೋಲೇಷನ್ ನಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡುವಂತೆ ಹಾಗೂ ಸೂಕ್ತ ಔಷಧಿಗಳ ಕಿಟ್ ಅನ್ನು ಒದಗಿಸುವಂತೆ ಸೂಚಿಸಿದರು.
ಪರೀಕ್ಷಾ ವರದಿ ಬಂದ ಕೂಡಲೇ ಸೋಂಕಿತರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಆಸ್ಪತ್ರೆಗೆ ದಾಖಲಿಸುವ ಅಗತ್ಯವಿದೆಯೇ ಇಲ್ಲವೇ ಎಂದು ನಿರ್ಧರಿಸುವ ಟ್ರಯಾಜಿಂಗ್ ವ್ಯವಸ್ಥೆಯನ್ನು ಬಲಪಡಿಸುವಂತೆ ಸೂಚಿಸಿದರು.
ಹೋಮ್ ಐಸೊಲೇಷನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಯಿತು.