Advertisement

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

02:13 AM Nov 25, 2024 | Team Udayavani |

ಕನಕಪುರ: ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದು. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆ ಹೊಂದಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

Advertisement

ಕನಕಾಂಬರಿ ಮಹಿಳಾ ಒಕ್ಕೂಟದ ವತಿಯಿಂದ ರವಿವಾರ ನಡೆದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲ ಮಹಿಳಾ ಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಹಿಂದೆ ಎಸ್‌.ಎಂ. ಕೃಷ್ಣ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಮೋಟಮ್ಮ ಅವರು ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳನ್ನು ಆರಂಭಿಸಿ, ಆರ್ಥಿಕ ಶಕ್ತಿ ತುಂಬಿದರು. ಈಗ ಅದೇ ಇಲಾಖೆಯ ಮೂಲಕ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿರುವುದು ನನ್ನ ಪಾಲಿನ ಅದೃಷ್ಟ ಎಂದರು.

ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರನ್ನು ಸ್ವಾವಲಂಬಿಯಾಗಿ ಸುವ ಉದ್ದೇಶ ನನ್ನದು. ಹಾಗಾಗಿ ಗೃಹಲಕ್ಷ್ಮಿ ಸಂಘಗಳ ಮೂಲಕ ಮಹಿಳೆಯರಿಗೆ ಮತ್ತಷ್ಟು ಶಕ್ತಿ ತುಂಬಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next