Advertisement
ಬೆಂಗಳೂರಿನಲ್ಲಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಅವರು ಮಾತನಾಡಿದರು.
Related Articles
Advertisement
ಕೆಲವು ದುಬಾರಿ ಖಾಸಗಿ ಕಾರುಗಳಲ್ಲಿ ಇಂತಹ ತಂತ್ರಜ್ಞಾನ ಅಳವಡಿಸಿರುವುದರಿಂದ ರಾತ್ರಿ ವೇಳೆಯಲ್ಲಿ ಒಂದು ವೇಳೆ ಚಾಲಕರಿಗೆ ನಿದ್ದೆಯ ಮಂಪರು ಕವಿದಂತಾದರೆ ತಕ್ಷಣವೇ ಎಚ್ಚರಿಕೆಯ ಸೂಚನೆ ನೀಡುವಂತಹ ಮತ್ತು ಆಕಸ್ಮಿಕವಾಗಿ ವಾಹನಗಳು ಅಥವಾ ವ್ಯಕ್ತಿಗಳು ಎದುರಿಗೆ ಅಡ್ಡಬಂದರೆ ತಂತಾನಾಗಿಯೇ ಬ್ರೇಕ್ ಹಾಕುವಂತಹ ವ್ಯವಸ್ಥೆ ಜಾರಿಗೆ ಬಂದಿದೆ. ಇಂತಹ ಆಧುನಿಕ ಪ್ರಯೋಗ ನಮ್ಮ ಸರ್ಕಾರಿ ಸಾರಿಗೆ ಬಸ್ಸುಗಳಲ್ಲೂ ಯಶಸ್ವಿಯಾದರೆ ಹಲವು ರೀತಿಯ ಅನುಕೂಲ ಸಾಧ್ಯವೆಂದು ಶ್ರೀ ಸವದಿ ಅವರು ತಿಳಿಸಿದರು.
ಇದನ್ನೂ ಓದಿ:ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಳ: ಲಾಕ್‌ಡೌನ್ ಸಮಯದಲ್ಲಿ ಪ್ರಕರಣಗಳಲ್ಲಿ ಏರಿಕೆ !
ಲಾಕ್‍ಡೌನ್ ನಂತರದಲ್ಲಿ ಈಗಾಗಲೇ ಶೇಕಡಾ 60 ರಷ್ಟು ಬಸ್ ಸಂಚಾರಗಳನ್ನು ಪ್ರಾರಂಭಿಸಲಾಗಿದೆ. ಮುಂದಿನ ತಿಂಗಳು ಕೊರಿಯರ್ ಸೇವೆಯನ್ನೂ ನಮ್ಮ ಸಾರಿಗೆ ಸಂಸ್ಥೆಗಳ ಮೂಲಕ ಪ್ರಾರಂಭಿಸಲಾಗುವುದು. ಈಗಾಗಲೇ ಸಾರಿಗೆ ಸಂಸ್ಥೆಗಳಲ್ಲಿ ಉಳಿತಾಯದ ಕ್ರಮವಾಗಿ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲಾಗಿದೆ. ಹೊಸ ಸಿಬ್ಬಂದಿಗಳ ನೇಮಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ಶ್ರೀ ಸವದಿ ಅವರು ವಿವರಿಸಿದರು.
ಇಂದಿನ ಸಭೆಯಲ್ಲಿ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ಶ್ರೀ ಅಂಜುಂ ಪರ್ವೇಜ್, ಕ.ರಾ.ರ.ಸಾ.ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶಿವಯೋಗಿ ಕಳಸದ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಭದ್ರತಾ ಮತ್ತು ಜಾಗೃತಾ ನಿರ್ದೇಶಕರಾದ ಡಾ. ಅರುಣ್, ಈ.ಕ.ರ.ಸಾ.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೂರ್ಮಾರಾವ್, ವಾ.ಕ.ರ.ಸಾ.ಸಂಸ್ಥೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.