Advertisement

ಪ್ರತಿ 150 ಕಿ.ಮೀ.ಗೆ ಸಣ್ಣ ವಿಮಾನ ನಿಲ್ದಾಣ: ಸಿಎಂ

07:15 AM Sep 15, 2017 | |

ಬೆಳಗಾವಿ: ರಾಜ್ಯದಲ್ಲಿ ಈಗಿರುವ ವಿಮಾನ ನಿಲ್ದಾಣಗಳ ಜತೆಗೆ ಪ್ರತಿ 150 ಕಿಲೋ ಮೀಟರ್‌ ವ್ಯಾಪ್ತಿಯಲ್ಲಿ ಒಂದು ಚಿಕ್ಕ ವಿಮಾನ ನಿಲ್ದಾಣ ಸ್ಥಾಪಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement

ಬೆಳಗಾವಿಯಲ್ಲಿ ಮೇಲ್ದರ್ಜೆಗೇರಿಸಿದ ಸಾಂಬ್ರಾ ನೂತನ ವಿಮಾನ ನಿಲ್ದಾಣವನ್ನು ಗುರುವಾರ ಕೇಂದ್ರ ವಿಮಾನಯಾನ ಸಚಿವ ಪಿ.ಗಜಪತಿರಾಜು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಮಾತ್ರ ದೊಡ್ಡ ವಿಮಾನ ನಿಲ್ದಾಣಗಳಿವೆ. ಬೆಳಗಾವಿ, ಮೈಸೂರು, ಹುಬ್ಬಳ್ಳಿಯಲ್ಲಿ ದೇಶೀಯ ವಿಮಾನ ನಿಲ್ದಾಣಗಳಿವೆ. ಇದಕ್ಕೆ ಪೂರಕವಾಗಿ ಈಗ ಇರುವ ವಿಮಾನ ನಿಲ್ದಾಣಗಳ ಜತೆಗೆ ಪ್ರತಿ 150 ಕಿ. ಮೀ. ವ್ಯಾಪ್ತಿಯಲ್ಲಿ ಒಂದು ಚಿಕ್ಕ ವಿಮಾನ ನಿಲ್ದಾಣ ಸ್ಥಾಪಿಸಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಜನ ವಿಮಾನದಲ್ಲಿ ಪ್ರಯಾಣ ಮಾಡುವವರು ಕರ್ನಾಟಕದಲ್ಲಿದ್ದಾರೆ. ಇದರಲ್ಲಿ ರಾಜ್ಯಕ್ಕೆ ಮೊದಲ ಸ್ಥಾನವಿದೆ. ಈ ನಿಟ್ಟಿನಲ್ಲಿ ಕಲಬುರಗಿ, ಶಿವಮೊಗ್ಗ, ಹಾಸನ ಮತ್ತು ವಿಜಯಪುರದಲ್ಲಿ ಚಿಕ್ಕ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಇದರಿಂದ ಸಂಪರ್ಕ ವ್ಯವಸ್ಥೆ ಮತ್ತಷ್ಟು ಸುಧಾರಿಸಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next