ನಿರ್ವಹಣಾಧಿಕಾರಿ ಶಿವರಾಮೇ ಗೌಡ ತಿಳಿಸಿದರು. ಗುರುವಾರ ನಡೆದ ಜಿಪಂ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.
Advertisement
ಸರ್ಕಾರದ ಮಾರ್ಗಸೂಚಿ ಪ್ರಕಾರ ಶೇ.80ಕ್ಕೂ ಅಧಿಕ ಶೌಚಾಲಯ ಸಂಪರ್ಕ ಹೊಂದಿರುವ ಜಿಲ್ಲೆಗಳನ್ನು ಸಂಪೂರ್ಣ ಬಯಲು ಶೌಚಾಲಯ ಮುಕ್ತ ಜಿಲ್ಲೆಗಳೆಂದು ಘೋಷಿಸಲಾಗಿದೆ. ಆದರೂ ಹೊಸದಾಗಿ ಶೌಚಾಲಯಗಳ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಅದರಂತೆ ಕಳೆದ ಅಕ್ಟೋಬರ್ ತಿಂಗಳಲ್ಲಿ ಹೊಸ ಸಮೀಕ್ಷೆ ಕಾರ್ಯ ನಡೆಸಲಾಗಿತ್ತು. 11540 ಶೌಚಾಲಯ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅಗತ್ಯವಿದ್ದಲ್ಲಿ ಇನ್ನಷ್ಟು ಶೌಚಾಲಯಗಳನ್ನು ನಿರ್ಮಿಸಬಹುದಾಗಿದೆ ಎಂದು ಅವರು ಹೇಳಿದರು.
ಶಾಲಾ ಕೊಠಡಿ ದುರಸ್ತಿ: ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕೊಠಡಿಗಳ ದುರಸ್ತಿಗಾಗಿ 1.65 ಕೋಟಿ ರೂ ಅನುದಾನ ಬಿಡುಗಡೆಯಾಗಿದ್ದು ಇದನ್ನು ಸಂಬಂಧಿಸಿದ ಅನುಷ್ಠಾನಾಧಿ ಕಾರಿಗಳಿಗೆ ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಪ್ರಗತಿಯಲ್ಲಿವೆ ಎಂದು ಡಿಡಿಪಿಐ ಅವರು ಸಭೆಗೆ ಮಾಹಿತಿ ನೀಡಿದರು.
Related Articles
Advertisement
ಇದಕ್ಕೆ ಪ್ರತಿಕ್ರಿಯಿಸಿದ ಗಣಿ ಮತ್ತು ಭೂ ವಿಜ್ಞಾನಾಕಾರಿ ವಿಂಧ್ಯಾ, ಸರ್ಕಾರದ ವಿವಿಧ ಯೋಜನೆಗಳ ಅಡಿ ಮನೆ ನಿರ್ಮಾಣಕ್ಕೆ ಟ್ರಾಕ್ಟರ್, ಎತ್ತಿನಗಾಡಿ, ಅಟೋಗಳಲ್ಲಿ ಮರಳು ಸಾಗಾಟಕ್ಕೆ ಯಾವುದೇ ಅಡ್ಡಿ ಉಂಟು ಮಾಡುತ್ತಿಲ್ಲ. ಅಕ್ರಮ ಮರಳುಗಾರಿಕೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು 5 ಲಕ್ಷ ರೂ. ವಸೂಲು ಮಾಡಿ ಇಲಾಖೆ ವತಿಯಿಂದ 2 ಎಫ್ಐಆರ್ ದಾಖಲಿಸಲಾಗಿದೆ ಎಂದರು.
ಗ್ರಾಮೀಣ ಪ್ರದೇಶದಲ್ಲಿ ಮನೆಗಳ ನಿರ್ಮಾಣಕ್ಕೆ ಸ್ಥಳೀಯ ಪಿಡಿಒ ಅವರಿಂದ ಪ್ರಮಾಣ ಪತ್ರ ಹೊಂದಿರುವವರು ಮರಳುಸಾಗಾಟಕ್ಕೆ ಅಡ್ಡಿ ಉಂಟು ಮಾಡದಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಶಿವರಾಮೇಗೌಡ ಅವರು ತಿಳಿಸಿದರು.
ಜಿಪಂ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯ ಕುಮಾರ್, ವಿಧಾನ ಪರಿಷತ್ ಸದಸ್ಯ ಪ್ರಸನ್ನ ಕುಮಾರ್ ಮತ್ತಿತರರು ಇದ್ದರು.