ಚಿಕ್ಕಬಳ್ಳಾಪುರ: ರಾಜ್ಯಕ್ಕೆ ತಿಂಗಳೊಳಗೆ ಹೊಸ ಪ್ರವಾಸೋದ್ಯಮ ನೀತಿಯನ್ನು ತರಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ನಂದಿ ಬೆಟ್ಟದಲ್ಲಿ ಶುಕ್ರವಾರ ಪ್ರವಾಸೋದ್ಯಮ ಇಲಾಖೆ ನಿರ್ಮಿಸಿರುವ ಸಮ್ಮೇಳನ ಸಭಾಂಗಣ ಉದ್ಘಾಟನೆ ಬಳಿಕ ಮಾತನಾಡಿದರು ಅವರು ಈಗಾಗಲೇ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ 300 ಕೋಟಿ ರೂ ಬಂಡವಾಳ ಹೂಡಿಕೆ ಮಾಡಿದೆ ಎಂದರು.
ಪ್ರವಾಸೋದ್ಯಮ ಕೇವಲ ದುಡ್ಡು ಇದ್ದವರಿಗೆ ಅಥವಾ ಸಿರಿವಂತರಿಗೆ ಎನ್ನುವ ಮನೋಭಾವನೆ ಇದೆ. ಆದರೆ ಸರ್ಕಾರ ಶ್ರಮಿಕರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಪ್ರವಾಸೋದ್ಯಮದಲ್ಲಿ ಹೊಸ ಬದಲಾವಣೆ ತರುವ ಚಿಂತನೆ ಮಾಡಿದೆ ಎಂದರು. ಆ ದಿಕ್ಕಿನಲ್ಲಿ ಕೃಷಿ, ಶೈಕ್ಷಣಿಕ ಹಾಗೂ ಶ್ರದ್ದಾ ಕೇಂದ್ರಗಳ ಅಭಿವೃದ್ಧಿ ಕ್ರಮ ವಹಿಸಲಿದೆ ಎಂದರು.
ಸಮ್ಮೇಳನ ಸಭಾಂಗಣ ಉದ್ಘಾಟನೆ: ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಬೆಟ್ಟದಲ್ಲಿ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಸ್ಥಾಪಿಸಿರುವ ಸಮ್ಮೇಳನದ ಸಭಾಂಗಣವನ್ನು ಸಚಿವ ಎಚ್.ಕೆ.ಪಾಟೀಲ್ ಶುಕ್ರವಾರ ಉದ್ಘಾಟಿಸಿರು.
ನಂದಿಬೆಟ್ಟದ ಪ್ರಕೃತಿಯ ಮಡಿಲಲ್ಲಿ ಸುಮಾರು 95 ಲಕ್ಷ ರೂಪಾಯಿ ವೆಚ್ಚದಲ್ಲಿ ಹೈಟೆಕ್ ಆಗಿ ನಿರ್ಮಿಸಲಾಗಿರುವ ಸಮ್ಮೇಳನ ಸಭಾಂಗಣ ನೋಡಲು ಆಕರ್ಷಕವಾಗಿದೆ. ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಕಾರ್ಪೋರೆಟ್ ಕಂಪನಿಗಳು ನಡೆಸುವ ಸಭೆ, ಸಮಾರಂಭಗಳ ಆಯೋಜನೆಗೆ ಈ ಸಮ್ಮೇಳನ ಸಭಾಂಗಣ ನಿರ್ಮಿಸಲಾಗಿದೆ. ಕೇವಲ 6 ತಿಂಗಳಲ್ಲಿ ಸಭಾಂಗಣ ನಿರ್ಮಿಸಲಾಗಿದೆ. 200 ಕ್ಕೂ ಹೆಚ್ಚು ಮಂದಿ ಕೂರಲು ಆಸನ ವ್ಯವಸ್ಥೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಜಿ.ಜಗದೀಶ್ ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.