Advertisement

ಯೂಟ್ಯೂಬ್ ನಲ್ಲಿ ಹೊಸ ಟ್ರೆಂಡ್ ಹುಟ್ಟು ಹಾಕಿದ “ಟಗರು’ಟೀಸರ್

02:23 PM Nov 08, 2017 | Team Udayavani |

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ “ಟಗರು’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಅಲ್ಲದೇ ಯೂಟ್ಯೂಬ್ ನಲ್ಲಿ ತನ್ನದೇ ಭರ್ಜರಿ ಹವಾ ಸೃಷ್ಟಿಸಿದೆ. 

Advertisement

“ಟಗರು’ ಚಿತ್ರವನ್ನು ‘ದುನಿಯಾ’ ಸೂರಿ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆ ಅವರದ್ದೇ. ಮಹೇಂದ್ರ ಸಿಂಹ ಛಾಯಾಗ್ರಹಣ ಮಾಡಿದರೆ, “ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ಖ್ಯಾತಿಯ ಚರಣ್‌ರಾಜ್‌ ಸಂಗೀತ ಸಂಯೋಜಿಸಿದ್ದಾರೆ.

ಇನ್ನು ಚಿತ್ರದಲ್ಲಿ ಶಿವರಾಜಕುಮಾರ್‌ ಅವರ ಜೊತೆಗೆ ಮಾನ್ವಿತಾ, ಭಾವನಾ ಮೆನನ್‌, ದೇವರಾಜ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ವಿಲನ್‌ ಆಗಿ ಧನಂಜಯ್‌ ಮತ್ತು ವಸಿಷ್ಠ ಸಿಂಹಾ ಕಾಣಿಸಿಕೊಳ್ಳುತ್ತಿರುವುದು ವಿಶೇಷ. 

Advertisement

Udayavani is now on Telegram. Click here to join our channel and stay updated with the latest news.

Next