Advertisement

ನಾಳೆಯಿಂದ ಮನೆ ಮನೆಗೆ ಲಸಿಕಾಮಿತ್ರ ನೂತನ ಲಸಿಕಾ ಅಭಿಯಾನ

12:53 AM Nov 09, 2021 | Team Udayavani |

ಮಂಗಳೂರು: ಈಗಾಗಲೇ ಪ್ರಥಮ ಡೋಸ್‌ ಪಡೆದು, ಎರಡನೇ ಡೋಸ್‌ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್‌ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ನ. 10ರಂದು ಚಾಲನೆ ನೀಡಲಾಗುವುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕಿಶೋರ್‌ ಕುಮಾರ್‌ ತಿಳಿಸಿದರು.

Advertisement

ಅವರು ಸೋಮವಾರ ನಡೆದ ಮನೆ ಮನೆಗೆ ಲಸಿಕಾ ಅಭಿಯಾನದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.

ಮೊದಲ ಹಂತದಲ್ಲಿ ಈ ಅಭಿಯಾನಕ್ಕೆ ನ.10ರಂದು ಮಂಗಳೂರು ಮಹಾನಗರ ಪಾಲಿಕೆವ್ಯಾಪ್ತಿಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಚಾಲನೆ ನೀಡಲಾಗುವುದು. ಮುಂದಿನ ಹಂತದಲ್ಲಿ ಜಿಲ್ಲೆಯಾದ್ಯಂತ ಈ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಲ್ಲಿ ಭಾಗವಹಿಸುತ್ತಿರುವ ಮಂಗಳೂರು ವಿವಿಯ ಎನ್ನೆಸ್ಸೆಸ್‌ ಸ್ವಯಂ ಸೇವಕರಿಗೆ ತರಬೇತಿಯನ್ನು ನೀಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ನ.29ರಿಂದ ಡಿ.23ರವರೆಗೆ ಸಂಸತ್‌ನ ಚಳಿಗಾಲದ ಅಧಿವೇಶನ?

ಈ ಹಿನ್ನೆಲೆಯಲ್ಲಿ ಎನ್ನೆಸ್ಸೆಸ್‌ ಸ್ವಯಂ ಸೇವಕರು ಮನೆಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರು ಸಹಕರಿಸುವಂತೆ ಡಿಎಚ್‌ಒ ಕೋರಿದರು.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next