Advertisement

New Year Celebrations: ಚರ್ಚ್‌ಗಳಲ್ಲಿ ಬಲಿ ಪೂಜೆ, ಪ್ರಾರ್ಥನೆ

11:30 PM Dec 31, 2023 | Team Udayavani |

ಉಡುಪಿ/ಮಂಗಳೂರು: ನೂತನ 2024ರ ವರ್ಷವನ್ನು ದ.ಕ. ಮತ್ತು ಉಡುಪಿ ಜಿಲ್ಲೆಯ ಕ್ರೈಸ್ತ ಬಾಂಧವರು ಪ್ರಾರ್ಥನೆ ಚರ್ಚ್‌ಗಳಲ್ಲಿ ವಿಶೇಷ ಬಲಿಪೂಜೆ ಅರ್ಪಿಸಿ ಸ್ವಾಗತಿಸಿದರು. ರವಿವಾರ ಸಂಜೆ ಎಲ್ಲ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್ ಐಸಾಕ್‌ ಲೋಬೊ ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ರವಿವಾರ ಬಲಿಪೂಜೆ ಅರ್ಪಿಸಿದರು. ನೂತನ ವರ್ಷದಲ್ಲಿ ದೇವರು ತೋರಿದ ಹಾದಿಯಲ್ಲಿ ನಡೆದು ವಿಶ್ವ ಶಾಂತಿಗಾಗಿ ಪ್ರತಿಯೊಬ್ಬರು ಪ್ರಾರ್ಥನೆ ಸಲ್ಲಿಸುವಂತೆ ಸಲಹೆ ನೀಡುವುದರೊಂದಿಗೆ ವಿಶ್ವಶಾಂತಿಗಾಗಿ ನಮ್ಮಿಂದಾಗುವ ಪ್ರಯತ್ನ ಮಾಡುವಂತೆ ಕ್ರೈಸ್ತ ಸಮುದಾಯಕ್ಕೆ ಕರೆ ನೀಡಿದರು.

Advertisement

ಮಿಲಾಗ್ರಿಸ್‌ ಕೆಥೆಡ್ರಲ್‌ನ ಪ್ರಧಾನ ಧರ್ಮಗುರು ರೆ| ವಲೇರಿಯನ್‌ ಮೆಂಡೊನ್ಸಾ, ಸಹಾಯಕ ಧರ್ಮಗುರು ರೆ| ಜೋಯ್‌ ಅಂದ್ರಾದೆ, ಅತಿಥಿ ಧರ್ಮಗುರು ರೆ| ಹೆಕ್ಟೆರ್‌ ಡಿ’ ಸೋಜಾ, ನಿತೇಶ್‌ ಡಿ’ಸೋಜಾ, ರೆ| ರೋನ್ಸನ್‌ ಡಿ’ಸೋಜಾ ಉಪಸ್ಥಿತರಿದ್ದರು.

ಶಿರ್ವ ಆರೋಗ್ಯ ಮಾತೆಯ ದೇವಾ ಲಯದಲ್ಲಿ ಧರ್ಮಗುರು ರೆ| ಡಾ| ಲೆಸ್ಲಿ ಡಿ’ಸೋಜಾ, ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಧರ್ಮ ಗುರು ರೆ| ಚಾಲ್ಸ…ì ಮಿನೇಜಸ್‌, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ರೆ| ಸ್ಟ್ಯಾನಿ ತಾವೊ›, ಕಾರ್ಕಳ ಅತ್ತೂರು ಸಂತ ಲಾರೆನ್ಸ್‌ ಬಸಿಲಿಕಾದಲ್ಲಿ ರೆ| ಆಲ್ಬನ್‌ ಡಿ’ಸೋಜಾ, ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ರೆ| ಡೆನಿಸ್‌ ಡೆಸಾ ನೇತೃತ್ವದಲ್ಲಿ ಹೊಸ ವರ್ಷ ಆಚರಣೆಯ ಪ್ರಯುಕ್ತ ಬಲಿಪೂಜೆ ನೆರವೇರಿಸಿದರು. ಚರ್ಚು ಗಳಲ್ಲಿ ಯುವ ಸಂಘಟನೆಯ ಸದಸ್ಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ, ಕೇಕ್‌ ವಿತರಣೆ ನಡೆಯಿತು. ಬಲಿಪೂಜೆಯ ಬಳಿಕ ಕ್ರೈಸ್ತ ಭಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಪರಮ ಪ್ರಸಾದದ ಆರಾಧನೆ
ಮಂಗಳೂರು: ಕ್ರೈಸ್ತರು ರವಿವಾರ ರಾತ್ರಿ ನಿಕಟ ಪೂರ್ವ ವರ್ಷಕ್ಕೆ ವಿದಾಯ ಹೇಳಿ ಹೊಸ ವರ್ಷ (2024) ವನ್ನು ಸ್ವಾಗತಿಸಿ ಚರ್ಚ್‌ಗಳಲ್ಲಿ ಪರಮ ಪ್ರಸಾದದ ಆರಾಧನೆ ಮತ್ತು ವಿಶೇಷ ಪ್ರಾರ್ಥನೆ ಸಲ್ಲಿಸಿ ಬಲಿ ಪೂಜೆಯಲ್ಲಿ ಪಾಲ್ಗೊಂಡರು.

ಪರಮ ಪ್ರಸಾದದ ಆರಾಧನೆಯ ವೇಳೆ ಗತ ವರ್ಷದಲ್ಲಿ ದೇವರು ತೋರಿದ ಕೃಪೆ ಮತ್ತು ಆಶೀರ್ವಾದಗಳಿಗಾಗಿ ಕೃತಜ್ಞತೆ ಸಲ್ಲಿಸಿದರು. ರವಿವಾರ ಸಂಜೆ ವೇಳೆ ಇಗರ್ಜಿಗಳಿಗೆ ತೆರಳಿದ ಬಾಂಧವರು ಕಳೆದ ವರ್ಷ ಸರ್ವ ರೀತಿಯಲ್ಲಿ ತಮ್ಮನ್ನು ಕಾಪಾಡಿದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದರು. ನೂತನ ವರ್ಷ ಪ್ರತಿಯೊಬ್ಬರಿಗೂ ಸಂತೋಷ ತರಲಿ ಎಂದು ಬೇಡಿದರು. ಬಲಿ ಪೂಜೆಯ ಬಳಿಕ ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

Advertisement

ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಬಿಪಷ್‌ ಹೌಸ್‌ನಲ್ಲಿ ಮಂಗಳೂರಿನ ಬಿಷಪ್‌ ರೈ| ರೆ| ಡಾ| ಪೀಟರ್‌ ಪಾವ್‌É ಸಲ್ಡಾನ್ಹಾ ಅವರು ಸಂದೇಶ ನೀಡಿ, ಸಿಹಿ ಘಟನೆಗಳನ್ನು ಮರೆತು ಹೊಸ ವರ್ಷದಲ್ಲಿ ಹೊಸ ಭರವಸೆಯಿಂದ ಬದುಕು ನಡೆಸಿ, ಸತ್ಕಾರ್ಯಗಳ ಮೂಲಕ ಜೀವನವನ್ನು ಬೆಳಗಿಸೋಣ ಎಂದರು. ವಿಕಾರ್‌ ಜೆರಾಲ್‌ ಮ್ಯಾಕ್ಸಿಂ ನೊರೊನ್ಹಾ, ಚಾನ್ಸಿಲರ್‌ ಫಾ| ವಿಕ್ಟರ್‌ ಜಾರ್ಜ್‌, ಪ್ರೊಕ್ರೇಟರ್‌ ಫಾ| ರೊನಾಲ್ಡ್‌ ಡಿ’ಸೋಜಾ ಅವರು ಈ ಸಂದರ್ಭ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next