Advertisement

ಹೊಸ ವರ್ಷಾಚರಣೆ: ಮಂಗಳೂರಿನಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ

02:59 PM Dec 31, 2022 | Team Udayavani |

ಮಂಗಳೂರು : ನಗರದಾದ್ಯಂತ ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಲಾಗಿದೆ.

Advertisement

ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲಾಧಿಕಾರಿಗಳ ಸಭೆಯಂತೆ ನಿಯಮಾವಳಿ ರೂಪಿಸಲಾಗಿದೆ. 12.30ಕ್ಕೆ ಕಾರ್ಯಕ್ರಮ ಮುಗಿಸಿ 10 ಗಂಟೆಗೆ ಧ್ವನಿ ವರ್ಧಕ ಬಂದ್ ಮಾಡಬೇಕು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 32 ಚೆಕ್ ಪೋಸ್ಟ್ ಹಾಕಲಾಗಿದೆ. ಯಾವುದೇ ತೊಂದರೆ ಇಲ್ಲದೇ ಸಂಭ್ರಮಾಚರಣೆಗಳನ್ನು ಮಾಡಬೇಕು. ಬೀಚ್ ಅಥವಾ ಯಾವುದೇ ಜಾಗದಲ್ಲಿ ಅನುಮತಿ ಪಡೆದು ಮಾಡಬೇಕು. ಅನುಮತಿ ಇಲ್ಲದೇ ಯಾವುದೇ ಆಚರಣೆಗೆ ಅವಕಾಶ ಇಲ್ಲ ಎಂದು ಹೇಳಿದ್ದಾರೆ.

12.30ಗೆ ಎಲ್ಲವೂ ಮುಗಿಸುವಾಗ ಯಾರೂ ರಸ್ತೆಯಲ್ಲಿ ಇರಬಾರದು. ತ್ರಿಬಲ್ ರೈಡ್ ಅಥವಾ ಕುಡಿದು ವಾಹನ ಚಾಲನೆಗೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.

ಕಮಿಷನರ್ ವ್ಯಾಪ್ತಿಯಲ್ಲಿ ಸ್ವಲ್ಪ ಸೂಕ್ಷ್ಮ ಪರಿಸ್ಥಿತಿ ಇತ್ತು, ಯಾವುದೇ ಸಂಘಟನೆಗಳಿಗೆ ಎಚ್ಚರಿಕೆ ಕೊಡೋ ಅಧಿಕಾರ ಇಲ್ಲ. ಯಾರಾದರೂ ತೊಂದರೆ ಕೊಟ್ಟರೆ, ಸಂಶಯಾಸ್ಪದ ವ್ಯಕ್ತಿಗಳು , ಅಪರಿಚಿತರು, ಸಮಾಜಘಾತುಕ ಶಕ್ತಿಗಳು ಕಂಡು ಬಂದಲ್ಲಿ ತತ್ ಕ್ಷಣ 112 ಕ್ಕೆ ಸಂಪರ್ಕ ಮಾಡಿ. ಸುರತ್ಕಲ್ , ಕಾಟಿಪಳ್ಳ ಭಾಗದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಮಂಗಳೂರನ್ನು ಉಗ್ರರ ಹಿಟ್ ಲೀಸ್ಟ್ ನಲ್ಲಿ ಇರುವ ಹಿನ್ನೆಲೆಯಲ್ಲಿ ಎಲ್ಲಾ ಆಯಕಟ್ಟಿನ ಜಾಗದಲ್ಲಿ ಹದ್ದಿನ ಕಣ್ಣು ಇಡಲಾಗಿದ್ದು ಅನುಮಾನಾಸ್ಪದ ವ್ಯಕ್ತಿಗಳು , ಅಪರಿಚಿರ ಬಗ್ಗೆ ನಿಗಾ ವಹಿಸಲಾಗಿದೆ. ಸ್ಥಳೀಯ ಪೊಲೀಸ್ ಠಾಣೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಹೇಳಿದ್ದು, ನಿಯಮ ಪಾಲಿಸಿ ಜವಾಬ್ದಾರಿಯುತವಾಗಿ ಆಚರಿಸಲು ಸೂಚನೆ ನೀಡಿದ್ದಾರೆ.

Advertisement

ಕೋವಿಡ್ ಕರಿ ನೆರಳು

ಹಲವಾರು ಕಠಿಣ ನಿಯಮಾವಳಿಯೊಂದಿಗೆ ಜಿಲ್ಲಾಡಳಿತ ಫಿಲ್ಡ್ ಗೆ ಇಳಿದಿದ್ದು, ಮಾರ್ಗಸೂಚಿ ರಚಿಸಿ 3 ಗಸ್ತು ಪಡೆಯೊಂದಿಗೆ ಕೋವಿಡ್ ಪ್ರೊಟೊಕಾಲ್ ಕಟ್ಟು ನಿಟ್ಟಾಗಿ ಜಾರಿಗೆ ತರಲು ಸೂಚನೆ ನೀಡಲಾಗಿದೆ. ಕ್ಲಬ್, ಪಬ್, ರೆಸ್ಟೋರೆಂಟ್,ಹೊಟೇಲ್ ಗಳಲ್ಲಿ ನಿಯಮಗಳಿಗೆ ಒಳಪಟ್ಟು ರಾತ್ರಿ 12. 30ರವರೆಗೆ ಮಾತ್ರ ಸಂಭ್ರಮಾಚರಣೆಗೆ ಅನುಮತಿ ನೀಡಲಾಗಿದೆ. ಪೊಲೀಸ್ ಇಲಾಖೆ, ಪಾಲಿಕೆಯ ಅಧಿಕಾರಿಗಳು, ಪರಿಸರ ಮಾಲಿನ್ಯ ನಿಯಂತ್ರಣ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಮೂರು ತಂಡಗಳ ಗಸ್ತು ಪಡೆಯನ್ನು ಜಿಲ್ಲಾಡಳಿತ ರಚಿಸಿದೆ.

ಸಭಾಂಗಣ, ತೆರೆದ ಸ್ಥಳ , ಹೊರಾಂಗಣ ಪ್ರದೇಶ, ಕಲ್ಯಾಣ ಮಂಟಪ, ಸಭಾ ಭವನ,ಸರ್ವೀಸ್ ಅಪಾರ್ಟೆಂಟ್, ಕಡಲತೀರ, ಹೋಂಸ್ಟೇ,ಮಾಲ್ ಇತ್ಯಾದಿ ತೆರೆದ ಪ್ರದೇಶಗಳಲ್ಲಿ ಡಿಜೆ/ಡಾಲ್ಟಿ ಡ್ಯಾನ್ಸ್ ಗಳನ್ನು ನಡೆಸುವಂತಿಲ್ಲ ಎಂದು ಹೇಳಿದೆ.

ಧಾರ್ಮಿಕ ಕಾರ್ಯಕ್ರಮ ನಡೆಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಸಂಜೆ 7 ಬಳಿಕ ಬೀಚ್ ಗೆ ಪ್ರವೇಶ ನಿರ್ಬಂಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next