Advertisement

Chikkamagaluru: ಪ್ರವಾಸಿ ತಾಣಗಳಿಗೆ ನಿರ್ಬಂಧ, ಇಲ್ಲಿದೆ ಹೊಸ ವರ್ಷಾಚರಣೆಗೆ ಮಾರ್ಗಸೂಚಿ

03:53 PM Dec 30, 2024 | Team Udayavani |

ಚಿಕ್ಕಮಗಳೂರು: ಹೊಸವರ್ಷಾಚರಣೆ ಸಂಬಂಧ ಅಹಿತಕರ ಘಟನೆಗಳು ಸಂಭವಿಸದಂತೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಡಿ.31ರ ಸಂಜೆ 6 ಗಂಟೆಯಿಂದ ಜ.1 ರ ಬೆಳಿಗ್ಗೆ 6 ಗಂಟೆಯವರೆಗೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣಗಳಿಗೆ ಪ್ರವಾಸಿಗರ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ತಿಳಿಸಿದರು.

Advertisement

ಸೋಮವಾರ ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನೂತನ ವರ್ಷಾಚರಣೆ ಹಿನ್ನಲೆ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಆಯಾಕಟ್ಟಿನ ಸ್ಥಳಗಳಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡ ಲಾಗಿದೆ. ಪ್ರಸಿದ್ಧ ಪ್ರವಾಸಿಕೇಂದ್ರಗಳಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ, ಝರಿಫಾಲ್ಸ್ ಸೇರಿದಂತೆ ಇತರೆ ಕಡೆಗಳಲ್ಲಿ ಮಧ್ಯಪಾನ ಮಾಡುವುದು, ಅಸಭ್ಯವಾಗಿ ವರ್ತಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿರ್ಬಂಧವನ್ನು ವಿಧಿಸಲಾಗಿದೆ ಎಂದರು.

ನೂತನ ವರ್ಷಾಚರಣೆ ಸಂದರ್ಭದಲ್ಲಿ ಏನೇನು ಕ್ರಮಗಳನ್ನು ಕೈಗೊಳ್ಳಬೇಕೆಂದು ರೆಸಾರ್ಟ್, ಹೋಮ್‌ಸ್ಟೇ ಮಾಲೀಕರು, ಲಾಡ್ಜ್, ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರ ಸಭೆ ನಡೆಸಿ ತಿಳುವಳಿಕೆ ನೀಡಲಾಗಿದೆ. ನ್ಯಾಯಾಲಯದ ಆದೇಶದಂತೆ ರಾತ್ರಿ 10 ಗಂಟೆ ನಂತರ ಸಾರ್ವಜನಿಕವಾಗಿ ಸೌಂಡ್‌ಸಿಸ್ಟಮ್ (ಸಂಗೀತಾ ಕಾರ್ಯಕ್ರಮ, ಡಿ.ಜೆ. ಇತ್ಯಾದಿ) ಬಳಕೆ ಮಾಡುವಂತಿಲ್ಲ. ಪಟಾಕಿ ಸಿಡಿಸು ವಂತಿಲ್ಲ. ಇವೆಂಟ್‌ಗಳನ್ನು ಆಯೋಜನೆ ಮಾಡುವ ಹೋಮ್ ಸ್ಟೇ, ರೆಸಾರ್ಟ್ ಮಾಲೀಕರು ಇಲಾಖೆಯ ಪರವಾನಿಗೆ ಪಡೆದು ಕೊಳ್ಳುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.

ಇವೆಂಟ್‌ಗಳು ನಡೆಯುವ ಸ್ಥಳದಲ್ಲಿ ಮಾಲೀಕರು ಸಿ.ಸಿ.ಕ್ಯಾಮರಗಳ ಅಳವಡಿಕೆ ಮಾಡಬೇಕು. ನ್ಯಾಯಾಲಯದ ಆದೇಶಗಳನ್ನು ಪಾಲನೆ ಮಾಡಬೇಕು. ಸ್ಥಳದಲ್ಲಿ ಸ್ವಯಂ ಸೇವಕರನ್ನು ನೇಮಕ ಮಾಡಿಕೊಳ್ಳಬೇಕು. ಮಹಿಳೆಯರು, ಮಕ್ಕಳು, ವೃದ್ಧರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸಿ.ಎಲ್- 5 ಪರವಾನಿಗೆ ಪಡೆದುಕೊಂಡವರು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಯವಾಗಿದೆ. ಯಾವುದೇ ತರಹದ ಅಹಿತಕರ ಘಟನೆ ಸಂಭವಿಸಿದರೇ ತಕ್ಷಣ ಪೊಲೀಸ್ ಇಲಾಖೆಯನ್ನು ಸಂಪರ್ಕಿಸುವಂತೆ ಮನವಿ ಮಾಡಿದ ಅವರು, ರಾತ್ರಿ 12:15ಕ್ಕೆ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಬೇಕೆಂದು ತಿಳಿಸಿದರು.

Advertisement

ರೇವ್ ಪಾರ್ಟಿ, ಡ್ರಕ್ಸ್ ಪ್ರಕರಣ ಕಂಡು ಬಂದಲ್ಲಿ ಕಠಿಣ ಕ್ರಮ: ಸಂಭ್ರಮಾಚರಣೆ ಸಂದರ್ಭದಲ್ಲಿ ರೇವ್ ಪಾರ್ಟಿ ಹಾಗೂ ಡ್ರಗ್ ಸೇವನೆ ಪ್ರಕರಣಗಳು ಕಂಡು ಬಂದರೇ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.

ಕುಡಿದು ವಾಹನ ಚಲಾಯಿಸುವರು, ವಿಲಿಂಗ್, ಹೈ ಸ್ಪೀಡ್ ಡ್ರೈವಿಂಗ್ ವಿರುದ್ಧ ಪೊಲೀಸರ ಹದ್ದಿನ ಕಣ್ಣು: ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಕುಡಿದು ವಾಹನ ಚಲಾಯಿಸುವರ ಹಾಗೂ ಬೈಕ್ ವಿಲಿಂಗ್ ಮಾಡುವವರು, ಕಾರು ಮತ್ತು ದ್ವಿಚಕ್ರ ವಾಹನಗಳನ್ನು ಅತೀ ವೇಗದಲ್ಲಿ ಚಲಾಯಿಸುವರ ವಿರುದ್ಧ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಆಯಾಕಟ್ಟಿನ ಪ್ರದೇಶದಲ್ಲಿ ತೀವ್ರ ತಪಾಸಣೆ ಒಳಪಡಿಸಲಾಗುವುದು. ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುವುದು. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ಎಚ್ಚರಿಕೆ ನೀಡಿದರು.

– ಕುಡಿದು ವಾಹನ ಚಾಲನೆ, ವೀಲ್ಹಿಂಗ್ ಮಾಡೋರ ಮೇಲೆ ಖಾಕಿ ಹದ್ದಿನಕಣ್ಣು.

ಇದನ್ನೂ ಓದಿ: Delhi poll: ಅರ್ಚಕರಿಗೆ ತಿಂಗಳಿಗೆ 18000 ಗೌರವಧನ ಘೋಷಣೆ ಮಾಡಿದ ಕೇಜ್ರಿವಾಲ್, ಆದರೆ…

Advertisement

Udayavani is now on Telegram. Click here to join our channel and stay updated with the latest news.

Next