Advertisement
ಸೋಮವಾರ ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನೂತನ ವರ್ಷಾಚರಣೆ ಹಿನ್ನಲೆ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಆಯಾಕಟ್ಟಿನ ಸ್ಥಳಗಳಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡ ಲಾಗಿದೆ. ಪ್ರಸಿದ್ಧ ಪ್ರವಾಸಿಕೇಂದ್ರಗಳಾದ ಮುಳ್ಳಯ್ಯನಗಿರಿ, ದತ್ತಪೀಠ, ದೇವರಮನೆ, ಝರಿಫಾಲ್ಸ್ ಸೇರಿದಂತೆ ಇತರೆ ಕಡೆಗಳಲ್ಲಿ ಮಧ್ಯಪಾನ ಮಾಡುವುದು, ಅಸಭ್ಯವಾಗಿ ವರ್ತಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿರ್ಬಂಧವನ್ನು ವಿಧಿಸಲಾಗಿದೆ ಎಂದರು.
Related Articles
Advertisement
ರೇವ್ ಪಾರ್ಟಿ, ಡ್ರಕ್ಸ್ ಪ್ರಕರಣ ಕಂಡು ಬಂದಲ್ಲಿ ಕಠಿಣ ಕ್ರಮ: ಸಂಭ್ರಮಾಚರಣೆ ಸಂದರ್ಭದಲ್ಲಿ ರೇವ್ ಪಾರ್ಟಿ ಹಾಗೂ ಡ್ರಗ್ ಸೇವನೆ ಪ್ರಕರಣಗಳು ಕಂಡು ಬಂದರೇ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.
ಕುಡಿದು ವಾಹನ ಚಲಾಯಿಸುವರು, ವಿಲಿಂಗ್, ಹೈ ಸ್ಪೀಡ್ ಡ್ರೈವಿಂಗ್ ವಿರುದ್ಧ ಪೊಲೀಸರ ಹದ್ದಿನ ಕಣ್ಣು: ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಕುಡಿದು ವಾಹನ ಚಲಾಯಿಸುವರ ಹಾಗೂ ಬೈಕ್ ವಿಲಿಂಗ್ ಮಾಡುವವರು, ಕಾರು ಮತ್ತು ದ್ವಿಚಕ್ರ ವಾಹನಗಳನ್ನು ಅತೀ ವೇಗದಲ್ಲಿ ಚಲಾಯಿಸುವರ ವಿರುದ್ಧ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು, ಆಯಾಕಟ್ಟಿನ ಪ್ರದೇಶದಲ್ಲಿ ತೀವ್ರ ತಪಾಸಣೆ ಒಳಪಡಿಸಲಾಗುವುದು. ಬ್ಯಾರಿಕೇಡ್ಗಳನ್ನು ಅಳವಡಿಸಲಾಗುವುದು. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ಎಚ್ಚರಿಕೆ ನೀಡಿದರು.
– ಕುಡಿದು ವಾಹನ ಚಾಲನೆ, ವೀಲ್ಹಿಂಗ್ ಮಾಡೋರ ಮೇಲೆ ಖಾಕಿ ಹದ್ದಿನಕಣ್ಣು.
ಇದನ್ನೂ ಓದಿ: Delhi poll: ಅರ್ಚಕರಿಗೆ ತಿಂಗಳಿಗೆ 18000 ಗೌರವಧನ ಘೋಷಣೆ ಮಾಡಿದ ಕೇಜ್ರಿವಾಲ್, ಆದರೆ…