Advertisement

ಹೊಸ ವರ್ಷ-ಹೊಸ ಕೋವಿಡ್ ಮಾರ್ಗಸೂಚಿ; ಸೋಮವಾರ ಗೃಹ ಸಚಿವರ ನೇತೃತ್ವದಲ್ಲಿ ಸಭೆ: ಸುಧಾಕರ್

08:07 PM Dec 27, 2020 | Mithun PG |

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಹೊಸವರ್ಷದ ಆಚರಣೆಯ ಹಿನ್ನೆಲೆಯಲ್ಲಿ ಗೃಹ ಸಚಿವರು, ಗೃಹ ಇಲಾಖೆಯ ಅಧಿಕಾರಿಗಳು ಮತ್ತು ಬೆಂಗಳೂರು ನಗರ ಪೋಲೀಸ್ ಆಯುಕ್ತರು ಹಾಗೂ ಡಿಜಿಪಿ ಅವರು ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದ್ದಾರೆ. ಸೋಮವಾರದಂದು ಗೃಹ ಸಚಿವರ ನೇತೃತ್ವದಲ್ಲಿ ಆರೋಗ್ಯ ಮತ್ತು ಗೃಹ ಇಲಾಖೆ ಅಧಿಕಾರಿಗಳ ಉನ್ನತಮಟ್ಟದ ಸಭೆ ನಡೆಸಿ ಇನ್ನು ದೀರ್ಘವಾದ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸುತ್ತೇವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Advertisement

ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಗ್ರಾ.ಪಂ. ಚುನಾವಣೆಗೆ ಮತದಾನ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಿಸುವ ಸಲುವಾಗಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ ಜನರು ರಾತ್ರಿಯ ಕರ್ಫ್ಯೂ ಇಲ್ಲ ಮತ್ತು ನಿಬಂಧನೆಗಳಿಲ್ಲವೆಂದು ಮನಸೋಇಚ್ಚೆಯಿಂದ ನಡೆದುಕೊಂಡರೆ ಆರೋಗ್ಯದ ಮೇಲೆ ಏನಾದರೂ ದುಷ್ಪರಿಣಾಮ ಆದರೆ ತಾವೇ ಜವಬ್ದಾರರು ಆಗುತ್ತಾರೆ ಎಂದು ಎಚ್ಚರಿಕೆ ನೀಡಿದ ಆರೋಗ್ಯ ಸಚಿವರು ಹೊಸ ವರ್ಷದ ನೆಪದಲ್ಲಿ ಸಭೆ ಸಮಾರಂಭಗಳು, ಮನರಂಜನೆಗಳನ್ನು ಲಸಿಕೆ ಬರುವವರೆಗೆ ಮುಂದೂಡಬೇಕೆಂದು ಸಚಿವರು ಮನವಿ ಮಾಡಿದರು.

ಐದಾರು ದಿನಗಳಲ್ಲಿ ಹೊಸವರ್ಷದ ಗುಂಗಿನಲ್ಲಿ ತಡ ರಾತ್ರಿಯಲ್ಲಿ ಮದ್ಯಪಾನ ಮಾಡುವುದು ಅಥವಾ ನೃತ್ಯಗಳು ಸಹಿತ ಎಲ್ಲಾ ರೀತಿಯ ಸಮಾರಂಭಗಳಿಗೆ ಕಡಿವಾಣ ಹಾಕಿದರೆ ಒಳ್ಳೆಯದು ಎಂದು ಸಲಹೆ ನೀಡಿದ ಆರೋಗ್ಯ ಸಚಿವರು ಜನರ ಆರೋಗ್ಯವನ್ನು ಕಾಪಾಡಲು ಸರ್ಕಾರದೊಂದಿಗೆ ಜನಸಾಮಾನ್ಯರು ಸಹ ಸಹಕರಿಸಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ: ಸಾಯಿಬಾಬಾ ದೇವಸ್ಥಾನದಲ್ಲಿ ಬೆಂಕಿ ಅವಘಡ: ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ

ಗ್ರಾಮ ಸ್ವರಾಜ್ಯ ಆಗಬೇಕಾದರೆ ಗ್ರಾಮಗಳು ಸುಂದರವಾಗಿ, ಸ್ವಚ್ಚವಾಗಿ ಎಲ್ಲ ಮೂಲಭೂತ ಸೌಕರ್ಯಗಳಿಂದ ಬೆಳಗುವ ವ್ಯಕ್ತಿಯನ್ನು ಅಂತಹ ವ್ಯಕ್ತಿತ್ವವನ್ನು ಹೊಂದಿರುವರನ್ನು ಜನರು ಆಯ್ಕೆ ಮಾಡಬೇಕು. ಆ ಕಾರಣಕ್ಕಾಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷದ ಚಿನ್ಹೆ ಕೂಡ ಇರುವುದಿಲ್ಲ. ರಾಜಕೀಯೇತರ ಬದ್ದತೆ ಇಟ್ಟುಕೊಂಡು, ಸಾಮಾಜಿಕ ಪ್ರಜ್ಞೆಯನ್ನಿಟ್ಟುಕೊಂಡು ಜನಸಾಮಾನ್ಯರ ಕೆಲಸ ಮಾಡಲಿ ಎಂದು ಗ್ರಾ.ಪಂ. ಚುನಾವಣೆಗಳನ್ನು ನಡೆಸಲಾಗುತ್ತಿದೆ ಎಂದರು.

Advertisement

ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಕೇಶವರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ:  ರಾಜ್ಯದಲ್ಲಿ ಕಾಂಗ್ರೆಸ್ ಮುಳುಗುವ ಹಡಗು, ಸದ್ಯಕ್ಕೆ ಅದು ಆಕ್ಸಿಜನ್ ಸಪೋರ್ಟ್ ನಲ್ಲಿದೆ:ನಳಿನ್

Advertisement

Udayavani is now on Telegram. Click here to join our channel and stay updated with the latest news.

Next