Advertisement

ಹೊಸ ವರ್ಷಾಚರಣೆ: ಶೇ.50ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ

03:56 PM Dec 31, 2020 | Team Udayavani |

ಚಿತ್ರದುರ್ಗ: ಹೊಸ ವರ್ಷದ ಸಂಭ್ರಮಾಚರಣೆ ಸಂಬಂಧ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಅರಣ್ಯ ಮತ್ತು ಪ್ರವಾಸೋದ್ಯಮ ಇಲಾಖೆಯ ವಸತಿ ಗೃಹಗಳು, ಹೋಟೆಲ್‌ಗ‌ಳು, ರೆಸಾರ್ಟ್‌, ಲಾಡ್ಜ್, ಪಬ್‌, ರೆಸ್ಟೋರೆಂಟ್‌ಗಳು, ಪ್ರೇಕ್ಷಣಿಯ ಸ್ಥಳಗಳಲ್ಲಿ ಶೇ.50ರಷ್ಟು ಜನರು ಮಾತ್ರ ಸೇರುವ ಷರತ್ತಿಗೊಳಪಟ್ಟು ಅನುಮತಿ ನೀಡಲಾಗಿದೆ.

Advertisement

ಶೇ. 50 ಕ್ಕಿಂತ ಹೆಚ್ಚು ಜನರಿಗೆ ಅವಕಾಶ ಮಾಡಿ ಕೋವಿಡ್‌-19ರ ಸೋಂಕು ನಿಯಂತ್ರಣ ಕ್ರಮಗಳನ್ನು ಉಲ್ಲಂಘಿಸಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್‌ 58ರಡಿ ಮತ್ತು ಭಾರತೀಯ ದಂಡ ಸಂಹಿತೆ ಸೆಕ್ಷನ್‌ 188ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳವಾಗಿ ಆಚರಿಸುವ ಅವಶ್ಯಕತೆ ಇದೆ. ಸಾಮಾಜಿಕ ಅಂತರವಿಲ್ಲದೇ ಹೆಚ್ಚಿನ ಜನರು ಸೇರುವಂತ ಕೂಟಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಹೆಚ್ಚು ಜನಸಂಖ್ಯೆಯುಳ್ಳ ವಸತಿ ಸಮುಚ್ಚಯಗಳಲ್ಲಿ ಹಾಗೂ ಜನ ಸೇರುತಕ್ಕಂತಹ ಸ್ಥಳಗಳಲ್ಲಿ ಆಯೋಜಿಸುವುದನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ:ಜನವರಿ 1ರಿಂದ ಜಿಯೋದಿಂದ ಇತರ ನೆಟ್ ವರ್ಕ್ ಗಳಿಗೆ “Voice call” ಉಚಿತ

ಎಲ್ಲಾ ಹೋಟೆಲ್‌, ರೆಸಾರ್ಟ್‌, ಲಾಡ್ಜ್, ಪಬ್‌, ರೆಸ್ಟೋರೆಂಟ್‌ಗಳು, ಪ್ರೇಕ್ಷಣೀಯ ಸ್ಥಳಗಳನ್ನು ತಹಶೀಲ್ದಾರ್‌, ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯಿತಿ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸಿ ತಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಖುದ್ದು ಪರಿಶೀಲಿಸಿ ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಜನಸಂದಣಿ ಸೇರುವ ಸಂಬಂಧವಿರುವ ಸ್ಥಳಗಳಲ್ಲಿ ಶೇ.50ಕ್ಕಿಂತ ಹೆಚ್ಚು ಸಾರ್ವಜನಿಕರು ಸೇರದಂತೆ ಕ್ರಮವಹಿಸಬೇಕು.

Advertisement

ಸಂಭ್ರಮಾಚರಣೆ ವೇಳೆ ಎಲ್ಲಾ ರೀತಿಯ ಡಿಜೆ ಸೌಂಡ್ಸ್‌, ಡ್ಯಾನ್ಸ್‌ ಕಾರ್ಯಕ್ರಮಗಳನ್ನು ಹಾಗೂ ಪಾರ್ಟಿಗಳನ್ನು ನಿಷೇಧಿಸಿ ಜಿಲ್ಲಾ ಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಆದೇಶಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next