Advertisement

New York ಶೂಟೌಟ್‌:ಇಬ್ಬರು ಮಹಿಳೆಯರು ಸಾವು

12:37 AM Jul 30, 2024 | Team Udayavani |

ರೋಚೆಸ್ಟರ್‌: ಅಮೆರಿಕದ ನ್ಯೂಯಾರ್ಕ್‌ನ ರೋಚೆಸ್ಟರ್‌ನ ಮೇಪಲ್‌ವುಡ್‌ ಪಾರ್ಕ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ. ಪಾರ್ಕ್‌ನಲ್ಲಿ ಸೋಮವಾರ ಕಾರ್ಯಕ್ರಮವೊಂದರ ಪ್ರಯುಕ್ತ ನೂರಾರು ಮಂದಿ ಸೇರಿದ್ದರು. ಈ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಕಾರ್ಯಕ್ರಮದಲ್ಲಿ ಇದ್ದವರು ದಿಕ್ಕಾಪಾಲಾಗಿ ಓಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಹಂತದಲ್ಲಿ ಕಾರ್ಯಕ್ರಮದಲ್ಲಿ ಹಲವಾರು ಸುತ್ತಿನ ಗುಂಡಿನ ದಾಳಿ ನಡೆಸಲಾಗಿತ್ತು ಎಂದು ಶಂಕಿಸಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next