Advertisement

ಭಾರತ ವಿರುದ್ಧದ ಮೊದಲ 3 ಪಂದ್ಯಗಳಿಗೆ ನ್ಯೂಜಿಲ್ಯಾಂಡ್ ತಂಡ ಪ್ರಕಟ

07:43 AM Jan 17, 2019 | |

ವೆಲ್ಲಿಂಗ್ಟನ್: ಜನವರಿ 23ರಿಂದ ಭಾರತದ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ನ್ಯೂಜಿಲ್ಯಾಂಡ್ 14  ಸದಸ್ಯರ ತಂಡವನ್ನು ಪ್ರಕಟಿಸಿದೆ. ಟಾಮ್ ಲ್ಯಾಂಥಮ್, ಕಾಲಿನ್ ಡಿ ಗ್ರಾಂಡ್ ಹೋಮ್, ಮಿಚೆಲ್ ಸ್ಯಾಂಟ್ನರ್ ತಂಡಕ್ಕೆ ಮರಳಿದ್ದಾರೆ. 

Advertisement

ನೇಪಿಯರ್ ನಲ್ಲಿ ಆರಂಭವಾಗಲಿರುವ ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಮೂರು ಪಂದ್ಯಗಳಿಗೆ ನ್ಯೂಜಿಲ್ಯಾಂಡ್ ತಂಡ ಪ್ರಕಟವಾಗಿದೆ. ಪ್ರಸ್ತುತ ಏಕದಿನ ರ‍್ಯಾಂಕಿಂಗ್ ನಲ್ಲಿ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನದಲ್ಲಿರುವ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳ ಈ ಸರಣಿ ಮಹತ್ವದ್ದಾಗಿರುವುದರಿಂದ ಕಿವೀಸ್ ತನ್ನ ಬಲಿಷ್ಠ ತಂಡವನ್ನೇ ಕಣಕ್ಕಿಳಿಸುವ ಯೋಜನೆ ಹಾಕಿದೆ. 


ಶ್ರೀಲಂಕಾ ವಿರುದ್ಧ ನಡೆದಿದ್ದ ಏಕದಿನ ಸರಣಿಯಲ್ಲಿ ವಿಶ್ರಾಂತಿ ಪಡೆದಿದ್ದ ಕಾಲಿನ್ ಡಿ ಗ್ರಾಂಡ್ ಹೋಮ್ ಮತ್ತು ಟಾಮ್ ಲ್ಯಾಂಥಮ್ ರನ್ನು ಮತ್ತೆ ತಂಡಕ್ಕೆ ಕರೆಸಿಕೊಳ್ಳಲಾಗಿದೆ. ಕಳೆದ ಟಿ-20 ತಂಡದಲ್ಲಿ ಸ್ಥಾನ ಪಡೆಯದ ವೇಗದ ಬೌಲರ್ ಟೆಂಟ್ ಬೌಲ್ಟ್ ಕೂಡಾ ತಂಡಕ್ಕೆ ಮರಳಿದ್ದಾರೆ. ಗಾಯಾಳಾಗಿ ಹೊರಬಿದ್ದಿದ್ದ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ ಕೂಡಾ ತಂಡದಲ್ಲಿ ಮರಳಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ. 

ನ್ಯೂಜಿಲ್ಯಾಂಡ್ ತಂಡ: ಕೇನ್ ವಿಲಿಯಮ್ಸನ್ ( ನಾಯಕ), ಟ್ರೆಂಟ್ ಬೌಲ್ಟ್, ಮಾರ್ಟಿನ್ ಗಪ್ಟಿಲ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಂಥಮ್, ಕಾಲಿನ್ ಮನ್ರೋ, ಹೆನ್ರಿ ನಿಕೋಲ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ರಾಸ್ ಟೇಲರ್, ಡಗ್ ಬ್ರೇಸ್ ವೆಲ್, ಕಾಲಿನ್ ಡಿ ಗ್ರಾಂಡ್ ಹೋಮ್, ಲ್ಯೂಕಿ ಫರ್ಗ್ಯುಸನ್.

Advertisement

Udayavani is now on Telegram. Click here to join our channel and stay updated with the latest news.

Next