Advertisement

‘ನವಭಾರತ ಮೇಳಸಮಾರೋಪ:ತಂತ್ರಜ್ಞಾನ ಬಳಸಿ ಬೆರಳ ತುದಿಗೆ ಜನಪರ ಆಡಳಿತ; ಅಶ್ವತ್ಥ ನಾರಾಯಣ

07:19 PM Oct 09, 2021 | Team Udayavani |

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂತ್ರಜ್ಞಾನದ ನೆರವಿನಿಂದ ಬೆರಳ ತುದಿಗೆ ಜನಪರ ಆಡಳಿತವನ್ನು ತಲುಪಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ ಎಂದು ಉನ್ನತ ಶಿಕ್ಷಣ ಹಾಗೂ ಐ.ಟಿ./ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.

Advertisement

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಧಿಕಾರದ ಚುಕ್ಕಾಣಿ  ಹಿಡಿದು 20 ವರ್ಷಗಳನ್ನು ಪೂರೈಸಿದ ಪ್ರಯುಕ್ತ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ನವಭಾರತ ಮೇಳ’ದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಬಿಜೆಪಿ ಯು ನಮ್ಮ ತನಕ್ಕೆ ಪ್ರತೀಕವಾದ ಪಕ್ಷವಾಗಿದೆ. ಜನರ ಪ್ರತಿಯೊಂದು ಅವಶ್ಯಕತೆಯನ್ನು ಪೂರೈಸುವ ದಿಸೆಯಲ್ಲಿ ಯೋಜನೆಗಳನ್ನು ಹಾಕಿಕೊಂಡು ಮುನ್ನಡೆಯಲಾಗುತ್ತಿದೆ. ಮೋದಿ ಅವರ ನೇತೃತ್ವದಲ್ಲಿ ಕುಗ್ರಾಮಗಳಿಗೆ ಕೂಡ ಕುಡಿಯುವ ನೀರು, ವಿದ್ಯುತ್, ಅನಿಲ, ಆರೋಗ್ಯ ವಿಮೆ, ಜೀವ ವಿಮೆ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸರ್ಕಾರದ ಧನಸಹಾಯವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡುವ ಮೂಲಕ ಮಧ್ಯವರ್ತಿಗಳ ಹಾವಳಿಯನ್ನು ನಿವಾರಿಸಲಾಗಿದೆ ಎಂದು ವಿವರಿಸಿದರು.

ಸ್ವಚ್ಛತಾ ಅಭಿಯಾನದ ಮೂಲಕ ಹಳ್ಳಿಹಳ್ಳಿಗಳಲ್ಲೂ ನೈರ್ಮಲ್ಯದ ಬಗ್ಗೆ ಅರಿವು ಬೆಳೆಸಲಾಗಿದೆ. ಎಲ್ಲೆಡೆ ಶೌಚಾಲಯಗಳ ಬಳಕೆ ಬಗ್ಗೆ ತಿಳಿವಳಿಕೆ ಮೂಡಿಸಲಾಗಿದೆ. ರೈತರ ಆದಾಯವನ್ನು ದ್ವಿಗುಣಗೊಳಿಸುವುದಕ್ಕಾಗಿ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುವ ಜೊತೆಗೆ ಕೃಷಿ ಕಾಯ್ದೆಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಒಟ್ಟಾರೆ ಪ್ರತಿಯೊಬ್ಬ ವ್ಯಕ್ತಿಯ ಬದುಕಿನಲ್ಲೂ ಗುಣಾತ್ಮಕ ಬದಲಾವಣೆ ತರಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಯಪ್ರವೃತ್ತವಾಗಿವೆ ಎಂದು ಸಚಿವರು ಹೇಳಿದರು.

ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರೂ ಆದ ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ, ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಸಂದೀಪ್ ಕುಮಾರ್, ಬೆಂಗಳೂರು ವಿಭಾಗದ ಪ್ರಭಾರಿ ಗೋಪಿನಾಥ ರೆಡ್ಡಿ, ಮೇಳದ ಸಂಚಾಲಕ ಅನಿಲ್ ಶೆಟ್ಟಿ, ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಜಿತ್ ಹೆಗ್ಡೆ ಮತ್ತಿತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next