Advertisement

ಶೌಚಾಲಯದಲ್ಲಿ ನವಜಾತ ಹೆಣ್ಣು ಮಗು ಪತ್ತೆ… ನೈರ್ಮಲ್ಯ ಕಾರ್ಯಕರ್ತರಿಂದ ರಕ್ಷಣೆ

02:49 PM Oct 10, 2024 | Team Udayavani |

ತಮಿಳುನಾಡು: ಹುಟ್ಟಿದ ಕೆಲವೇ ಗಂಟೆಗಳಲ್ಲಿ ನವಜಾತ ಹಣ್ಣು ಶಿಶುವೊಂದನ್ನು ಸಾರ್ವಜನಿಕ ಶೌಚಾಲಯದಲ್ಲಿ ಬಿಟ್ಟು ಹೋಗಿರುವ ಆಘಾತಕಾರಿ ಘಟನೆ ತಮಿಳುನಾಡಿನ ಮೈಲಾಡುತುರೈ ಹೊಸ ಬಸ್ ನಿಲ್ದಾಣದಲ್ಲಿ ಗುರುವಾರ(ಅ.10) ಬೆಳಕಿಗೆ ಬಂದಿದೆ.

Advertisement

ಶೌಚಾಲಯ ಸ್ವಚ್ಛಗೊಳಿಸಲು ಬಂದಿದ್ದ ಸಿಬಂದಿ ಕಣ್ಣಿಗೆ ಮಗು ಕಂಡಿದ್ದು ಕೂಡಲೇ ರಕ್ಷಣೆ ಮಾಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಮಗುವನ್ನು ತಪಾಸಣೆ ನಡೆಸಿದ ವೈದ್ಯರು ಮಗು ಕೆಲವೇ ಗಂಟೆಗಳ ಮೊದಲು ಜನಿಸಿದ್ದಾಗಿ ಹೇಳಿದ್ದಾರೆ.

ಮಗುವಿನ ಅರೋಗ್ಯ ಸ್ಥಿತಿ ಸ್ಥಿರವಾಗಿದ್ದು ಸದ್ಯ ಆಸ್ಪತ್ರೆಯಲ್ಲಿ ವೈದ್ಯರ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಗುವಿನ ಪೋಷಕರ ಪತ್ತೆಗೆ ಬಲೆ ಬೀಸಿದ್ದು ಯಾವ ಉದ್ದೇಶಕ್ಕಾಗಿ ಈ ಕೃತ್ಯ ಎಸಗಿದ್ದಾರೆ ಎಂಬ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: Ratan Tata; ಉದ್ಯಮ ರಂಗದ ಭೀಷ್ಮ, ಅಮೂಲ್ಯ ರತುನ: ಜಗದಗಲ ಕೀರ್ತಿ

Advertisement
Advertisement

Udayavani is now on Telegram. Click here to join our channel and stay updated with the latest news.

Next