Advertisement
ಎರಡನೇ ವಾರ (ಏ.13) “ಸೀಜರ್’, “ದಳಪತಿ’ ಜೊತೆಗೆ ಉತ್ತರ ಕರ್ನಾಟಕದಲ್ಲಿ ಬಿಡುಗಡೆಯಾಗಿ 25 ದಿನ ಪೂರೈಸಿದ “ಅಬ್ಬೆ ತುಮಕೂರು ಸಿದ್ಧಿಪುರುಷ ವಿಶ್ವಾರಾಧ್ಯರು’ ಚಿತ್ರ ಕಳೆದ ವಾರ ಬೆಂಗಳೂರಿನಲ್ಲಿ ಬಿಡುಗಡೆಯಾಗಿತ್ತು. ಹಾಗಾಗಿ ಮೂರು ಚಿತ್ರ ಎನ್ನಬಹುದು. ಈ ವಾರ ಮತ್ತೆ ಆರು ಚಿತ್ರಗಳು ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿವೆ. “6 ಟು 6′, “ಎಟಿಎಂ’, “ರುಕ್ಕು’, “ನಾಗವಲ್ಲಿ ವರ್ಸಸ್ ಆಪ್ತಮಿತ್ರರು’, “ಕೃಷ್ಣ ತುಳಸಿ’ ಹಾಗೂ “ಸಾಗುವ ದಾರಿಯಲ್ಲಿ’ ಚಿತ್ರಗಳು ಈ ವಾರ ತಮ್ಮ ಬಿಡುಗಡೆಯನ್ನು ಘೋಷಿಸಿಕೊಂಡಿವೆ.
Related Articles
ಯಾವ್ಯಾವ ಸಿನಿಮಾ, ಏನ್ ಕಥೆ
ಈ ವಾರ ತೆರೆಕಾಣುತ್ತಿರುವ “6 ಟು 6′ ಸಿನಿಮಾದ ಬಗ್ಗೆ ಹೇಳುವುದಾದರೆ ಈ ಚಿತ್ರವನ್ನು ಶ್ರೀನಿವಾಸ್ ಶಿಡ್ಲಘಟ್ಟ ನಿರ್ದೇಶಿಸಿದ್ದಾರೆ. ಬೆಳಿಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೂ ನಡೆಯುವಂತಹ ಘಟನೆಗಳನ್ನು ಇಟ್ಟುಕೊಂಡು ಚಿತ್ರ ಮಾಡಿರುವುದರಿಂದ, ಈ ಚಿತ್ರಕ್ಕೆ “6 ಟು 6′ ಎಂಬ ಹೆಸರನ್ನು ಇಡಲಾಗಿದೆ. ಸ್ವರೂಪಿಣಿ ಹಾಗೂ ತಾರಕ್ ಪೊನ್ನಪ್ಪ ನಾಯಕ-ನಾಯಕಿಯಾಗಿ ಕಾಣಿಸಿಕೊಂಡಿದ್ದು, ಮಿಕ್ಕಂತೆ ಸುರೇಶ್ ಹೆಬ್ಳೀಕರ್, ಸದಾಶಿವ ಬ್ರಹ್ಮಾವರ್, ಮೈಸೂರು ರಮಾನಂದ್ ಸೇರಿದಂತೆ ಹಲವಾರು ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.
Advertisement
ಈ ವಾರ ತೆರೆಕಾಣುತ್ತಿರುವ “ಎಟಿಎಂ’ (“ಅಟೆಂಪ್ಟ್ ಟು ಮರ್ಡರ್’) ಚಿತ್ರ ತನ್ನ ಹೆಸರಿನಿಂದಲೇ ಗಮನ ಸೆಳೆದಿದೆ. ಅಮರ್ ಎನ್ನುವವರು ಈ ಚಿತ್ರದ ನಿರ್ದೇಶಕರು. ಕೆಲ ವರ್ಷಗಳ ಹಿಂದೆ ನಡೆದ “ಎಟಿಎಂ’ ದರೋಡೆಯನ್ನಿಟ್ಟುಕೊಂಡು ಈ ಸಿನಿಮಾದ ಕಥೆ ಮಾಡಿದ್ದಾರೆ ನಿರ್ದೇಶಕರು. ಹಾಗಂತ ಯಥಾವತ್ ಅದನ್ನೇ ಇಟ್ಟುಕೊಂಡು ಸಿನಿಮಾ ಮಾಡಿಲ್ಲವಂತೆ. ಅದಕ್ಕೊಂದಿಷ್ಟು ಸಿನಿಮೀಯ ಟ್ವಿಸ್ಟ್‌ಗಳನ್ನು ಸೇರಿಸಿ ಸಿನಿಮಾ ಮಾಡಿದ್ದಾರೆ. ಈ ಚಿತ್ರದಲ್ಲಿ ನಾಯಕನಿಗಿಂತ ಹೆಚ್ಚು ಸ್ಕೋಪ್ ಇರೋದು ವಿಲನ್‌ಗಂತೆ.
ಅದೇ ಕಾರಣಕ್ಕೆ ವಿಲನ್‌ಗೆ ವಿಶೇಷ ಗೆಟಪ್ ಕೂಡಾ ಇದೆಯಂತೆ. ಅನೂಪ್ ಸಾ.ರಾ.ಗೋವಿಂದು ನಾಯಕರಾಗಿರುವ “ಸಾಗುವ ದಾರಿಯಲ್ಲಿ’ ಚಿತ್ರವನ್ನು ಶಿವಕುಮಾರ್ ನಿರ್ದೇಶಿಸಿದ್ದು, ಚಿತ್ರಕ್ಕೆ ಸವಾಲುಗಳ ಚಕ್ರವ್ಯೂಹ ಎಂಬ ಟ್ಯಾಗ್‌ಲೈನ್ ಇದೆ. ಸಂಚಾರಿ ವಿಜಯ್, ಮೇಘನಾ ಮುಖ್ಯಭೂಮಿಕೆಯಲ್ಲಿ ನಟಿಸಿರುವ “ಕೃಷ್ಣ ತುಳಸಿ’ ಚಿತ್ರ ಕೂಡಾ ಈ ವಾರ ತೆರೆಕಾಣುತ್ತಿದ್ದು, ಇಲ್ಲಿ ಸಂಚಾರಿ ವಿಜಯ್ ಅಂದನಾಗಿ ಕಾಣಿಸಿಕೊಂಡಿದ್ದಾರಂತೆ.
ಚಿತ್ರವನ್ನು ಸುಖೇಶ್ ನಾಯಕ್ ನಿರ್ದೇಶಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ “ರುಕ್ಕು’ ಎಂಬ ಚಿತ್ರ ಯಾವತ್ತೋ ತೆರೆಕಾಣಬೇಕಿತ್ತು. ಆದರೆ, ಚಿತ್ರ ಈ ವಾರ ತೆರೆಕಾಣುತ್ತಿದೆ. ಬಸವರಾಜು ಬಳ್ಳಾರಿ ಈ ಚಿತ್ರದ ನಿರ್ದೆಶಕರು. “ರುಕ್ಕು’ ಚಿತ್ರ ಹಳ್ಳಿಯ ಕಥೆಯನ್ನು ಹೊಂದಿದೆಯಂತೆ.. ಇಡೀ ಸಿನಿಮಾ ಹಳ್ಳಿಯ ಹಿನ್ನೆಲೆಯಲ್ಲೇ ನಡೆಯುತ್ತದೆಯಂತೆ.
“ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಚಿತ್ರ ಕೂಡಾ ಈ ವಾರ ತೆರೆಕಾಣುತ್ತಿದ್ದು, ಅರುಣ್ ಈ ಚಿತ್ರದ ನಿರ್ದೇಶಕರು. ವಿಷ್ಣುವರ್ಧನ್ ಹಾಗೂ ಸೌಂದರ್ಯ ಸಾವಿಗೆ ನಾಗವಲ್ಲಿ ಕಾರಣನಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ. ಮೊದಲೇ ಹೇಳಿದಂತೆ ಕನ್ನಡದಿಂದ ಯಾವುದೇ ದೊಡ್ಡ ಸಿನಿಮಾ ಅಥವಾ ಸ್ಟಾರ್ ಸಿನಿಮಾಗಳು ಬಿಡುಗಡೆಯಾಗುತ್ತಿಲ್ಲ. ಆದರೆ, ತೆಲುಗಿನ ಮಹೇಶ್ ಬಾಬು ನಟನೆಯ “ಭರತ್ ಆನೆ ನೇನು’ ಚಿತ್ರ ಏಪ್ರಿಲ್ 20 ರಂದು ತೆರೆಕಾಣುತ್ತಿದೆ.