Advertisement

Karnataka CM ಆಯ್ಕೆ ಮಾಡುವ ಅಧಿಕಾರ ಖರ್ಗೆಗೆ ನೀಡಿದ ಕಾಂಗ್ರೆಸ್ ಶಾಸಕರು

09:17 PM May 14, 2023 | Team Udayavani |

ಬೆಂಗಳೂರು : ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭಾನುವಾರ ಅಧಿಕಾರ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Advertisement

ಭಾನುವಾರ ಸಂಜೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತನ್ನ ನಾಯಕನನ್ನು ಆಯ್ಕೆ ಮಾಡಲು ಪಕ್ಷದ ಮುಖ್ಯಸ್ಥರಿಗೆ ಅಧಿಕಾರ ನೀಡುವ ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿತು. ಇದಕ್ಕೂ ಮುನ್ನ ಕಾಂಗ್ರೆಸ್ ಕೇಂದ್ರ ವೀಕ್ಷಕರು, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿಕೆ ಸಿ ವೇಣುಗೋಪಾಲ್ ಅವರು ನಿರ್ಗಮಿತ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸಭೆ ನಡೆಸಿದರು.

ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಸಿಂಗ್ ಮತ್ತು ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಬಾರಿಯಾ ಅವರನ್ನು ಸಿಎಲ್‌ಪಿ ನಾಯಕನ ಆಯ್ಕೆಗೆ ವೀಕ್ಷಕರನ್ನಾಗಿ ನಿಯೋಜಿಸಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next