ನವ ದೆಹಲಿ : ಬುಧವಾರ (ಜುಲೈ 7) ದಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ಸಚಿವರಾಗಿ ಸೇರ್ಪಡೆಗೊಂಡಿದ್ದ ಜ್ಯೋತಿರಾದಿತ್ಯ ಸಿಂದಿಯಾ ಇಂದು ( ಶುಕ್ರವಾರ, ಜುಲೈ 9) ನಾಗರಿಕ ವಿಮಾನಯಾನ ಸಚಿವಾಲಯದ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.
ಸಿಂದಿಯಾ ಅವರೊಂದಿಗೆ ಜನರಲ್ (ನಿವೃತ್ತ) ವಿ.ಕೆ.ಸಿಂಗ್ ಅವರು ಮಾಜಿ ನಾಗರಿಕ ವಿಮಾನಯಾನ ರಾಜ್ಯ ಸಚಿವರಾದ ಹರ್ದೀಪ್ ಪುರಿಯಿಂದ ಅಧಿಕಾರ ವಹಿಸಿಕೊಂಡಿದ್ದಾರೆ.
ಇದನ್ನೂ ಓದಿ : ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ತಮಿಳುನಾಡು ವಿರೋಧ : ಸರ್ವ ಪಕ್ಷ ಸಭೆ ಕರೆದ ಸ್ಟಾಲಿನ್
ಕೋವಿಡ್ ಸೋಂಕಿನ ಎರಡನೇ ಅಲೆಯ ಸಂದರ್ಭದಲ್ಲಿ ದೇಶಿಯ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಬಹಳ ದೊಡ್ಡ ಪ್ರವಾಹ ಬೀರಿದೆ. ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿರುವ ಕಾರಣದಿಂದಾಗಿ ನಾಗರಿಕ ವಿಮಾನಯಾನ ಸಚಿವಾಲಯವೂ ಕೂಡ ಈ ಬಾರಿ ಆರ್ಥಿಕ ಸಂಕಷ್ಟವನ್ನು ಅನುಭವಿಸಿದ್ದ ಸಂದರ್ಭದಲ್ಲಿ ಸಿಂದಿಯಾ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರವನ್ನು ವಹಿಸಿಕೊಂಡಿದ್ದು, ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಸಚಿವಾಲಯವನ್ನು ಸಿಂದಿಯಾ ಹೇಗೆ ನಿಭಾಯಿಸುತ್ತಾರೆ ಎನ್ನುವುದರ ಬಗ್ಗೆ ಕುತೂಹಲ ಮೂಡಿಸಿದೆ.
ಇನ್ನು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಎರಡನೇ ಅವಧಿಗೆ 2019 ರ ಮೇ ತಿಂಗಳಲ್ಲಿ ರಚನೆಯಾದ ನಂತರದಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ವಿಸ್ತರಣೆಯಾಗಿದೆ. ನಿನ್ನೆ (ಬುಧವಾರ, ಜುಲೈ 7) ರಾಷ್ಟ್ರಪತಿ ಭವನದಲ್ಲಿ ಕೋವಿಡ್-19 ಮಾರ್ಗಸೂಚಿಗೆ ಅನುಗುಣವಾಗಿ ಪ್ರಮಾನ ವಚನ ಸ್ವೀಕಾರ ಸಮಾರಂಭದಲ್ಲಿ ಒಟ್ಟು 43 ಮಂದಿ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ.
ಇದನ್ನೂ ಓದಿ : ಭಾನುವಾರ ಗೋವಾಗೆ ನಡ್ಡಾ ಆಗಮನ : ಚುನಾವಣಾ ಪೂರ್ವ ಸಿದ್ಧತೆಯ ಚರ್ಚೆ ಸಾಧ್ಯತೆ