ಮುಂಬಯಿ: ಇತ್ತೀಚೆಗಷ್ಟೇ ವಿವಾಹವಾದ ನವದಂಪತಿ ಜಹೀರ್ ಇಕ್ಬಾಲ್ – ಸೋನಾಕ್ಷಿ ಸಿನ್ಹಾ(Sonakshi Sinha) ಇದ್ದಕ್ಕಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿರುವುದು ಅಭಿಮಾನಿಗಳಲ್ಲಿ ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
7 ವರ್ಷಗಳಿಂದ ಪ್ರೀತಿಸುತ್ತಿದ್ದ ಸೋನಾಕ್ಷಿ – ಜಹೀರ್ (Zaheer Iqbal) ಜೂ.23 ರಂದು ಕೋರ್ಟಿನಲ್ಲಿ ಕುಟುಂಬದ ಆತ್ಮೀಯರ ಸಮ್ಮುಖದಲ್ಲಿ ವಿವಾಹವಾಗಿದ್ದರು. ಆ ಬಳಿಕ ಮುಂಬೈನ ಬಾಸ್ಟಿಯನ್‌ನಲ್ಲಿ ಮದುವೆಯ ಆರತಕ್ಷತೆಯನ್ನು ಆಯೋಜಿಸಲಿದ್ದರು. ಇದರಲ್ಲಿ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಭಾಗಿಯಾಗಿದ್ದರು.
ಮದುವೆಯಾಗಿ ಕೆಲವೇ ದಿನಗಳು ಕಳೆದ ಬಳಿಕ ಶುಕ್ರವಾರ(ಜೂ.28 ರಂದು) ಸೋನಾಕ್ಷಿ -ಜಹೀರ್ ಮುಂಬೈಯ ಖಾಸಗಿ ಆಸ್ಪತ್ರೆಯೊಂದಿಗೆ ಬಂದಿದ್ದಾರೆ. ಈ ವೇಳೆ ಮಾಧ್ಯಮಗಳ ಕಣ್ಣಾಪ್ತಿಸಿ ಆಸ್ಪತ್ರೆಗೆ ಹೋಗಲು ದಂಪತಿ ಯತ್ನಿಸಿದ್ದಾರೆ.
ಯಾವ ಕಾರಣಕ್ಕಾಗಿ ದಂಪತಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎನ್ನುವುದರ ಬಗ್ಗೆ ಯಾವ ಮಾಹಿತಿಯೂ ಹೊರಬಿದ್ದಿಲ್ಲ. ಆದರೆ ನೆಟ್ಟಿಗರು ಸೋನಾಕ್ಷಿ ಗರ್ಭಿಣಿಯಾಗಿದ್ದಾರೆ ಎಂದು ಹೇಳುತ್ತಿದ್ದಾರೆ. ಆಲಿಯಾ ಭಟ್ ಮದುವೆಯಾದ ಕೆಲವೇ ದಿನಗಳ ಬಳಿಕ ತಾಯಿ ಆಗುವ ಬಗ್ಗೆ ಸುದ್ದಿಯನ್ನು ಹಂಚಿಕೊಂಡಿದ್ದರು. ಸೋನಾಕ್ಷಿ ವಿಚಾರದಲ್ಲೂ ಹೀಗೆಯೇ ಆಗಿದೆ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.
ಸದ್ಯ ದಂಪತಿ ಆಸ್ಪತ್ರೆಗೆ ಭೇಟಿ ನೀಡಿರುವ ವಿಡಿಯೋ ವೈರಲ್ ಆಗಿದೆ.