Advertisement

ಶನಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

07:37 AM Jul 30, 2022 | Team Udayavani |

ಮೇಷ:

Advertisement

ಕರ್ತವ್ಯ ನಿಷ್ಠೆ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಜನಮನ್ನಣೆ. ಉತ್ತಮ ಧನಾರ್ಜನೆ. ಸ್ಪರ್ದೆಗಳಲ್ಲಿ ಜಯ. ಗುರುಹಿರಿಯರಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

ವೃಷಭ:

ಉತ್ತಮ ವಾಕ್‌ಚತುರತೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಹೆಚ್ಚಿನ ಧನ ಸಂಪತ್ತು ವೃದ್ಧಿ. ಪಾಲುದಾರರೊಂದಿಗೆ ತಾಳ್ಮೆಯಿಂದ ಸಹಕರಿಸಿ. ದೂರದ ಸ್ಥಳದಿಂದ ಜ್ಞಾನ ಸಂಪಾದನೆ. ಮನೆಯಲ್ಲಿ ಸಂಭ್ರಮ ಪರಿಸ್ಥಿತಿ.

ಮಿಥುನ:

Advertisement

ಧಾರ್ಮಿಕ ಕಾರ್ಯಗಳಲ್ಲಿ ಮುನ್ನಡೆ. ವಿದ್ಯಾರ್ಜನೆಯಲ್ಲಿಯೂ ಮಕ್ಕಳಲ್ಲಿಯೂ ಸಮಯ ಕಳೆಯುವಿಕೆ. ಸಾಹಸ ಪ್ರವೃತ್ತಿಯಿಂದಲೂ ಬುದ್ಧಿವಂತಿಕೆಯಿಂದಲೂ ಗೌರವ ಸ್ಥಾನ ಪ್ರಾಪ್ತಿ. ದಾಂಪತ್ಯ ತೃಪ್ತಿಕರ. ಮನೆಯ ನಿಮಿತ್ತ ಹೆಚ್ಚಿದ ಜವಾಬ್ದಾರಿ.

ಕರ್ಕ:

ಕಾರ್ಯ ಸಾಧಿಸಿದ್ದರಿಂದ ಮನಸ್ಸಿನಲ್ಲಿ ಸಂತೋಷ. ಗುರುಹಿರಿಯರಲ್ಲಿ ಸಮಾದಾನ ತಾಳ್ಮೆ ಅಗತ್ಯ. ನಿರೀಕ್ಷಿಸಿದಂತೆ ಧನವೃದ್ಧಿ. ದೂರದ ಮಿತ್ರರಿಂದ ಸಹಾಯ ಹಾಗೂ ಅವರಿಗಾಗಿ ಧನ ವ್ಯಯ ಸಂಭವ. ಮಕ್ಕಳಿಂದ ಸಂತೋಷ.

ಸಿಂಹ:

ಆರೋಗ್ಯ ವೃದ್ಧಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನ ಲಾಭ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ. ಆಸ್ತಿ ಭೂಮಿ ಕಟ್ಟಡಗಳ ಬಗ್ಗೆ ಬದಲಾವಣೆ ಸಂಭವ. ಸನ್ಮಾರ್ಗದ ಸಂಪತ್ತಿಗೆ ಆದ್ಯತೆ ನೀಡಿ.

 ಕನ್ಯಾ:

ಹೆಚ್ಚಿದ ದೈಹಿಕ ಶ್ರಮ ಜವಾಬ್ದಾರಿ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಮನಃ ಸಂತೋಷ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಗುರುಹಿರಿಯರಿಂದ ತೃಪ್ತಿ.

ತುಲಾ:

ಧಾರ್ಮಿಕ ಕಾರ್ಯಗಳ ನೇತೃತ್ವ. ದೀರ್ಘ‌ ಪ್ರಯಾಣ. ಮಾನಸಿಕ ಒತ್ತಡದಿಂದ ಕೂಡಿದ ಜವಾಬ್ದಾರಿ. ಚತುರತೆಯಿಂದ ಮಾಡುವ ಕಾರ್ಯಗಳು ಧನ ಸಂಪತ್ತು ವೃದ್ಧಿ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ. ಗುರುಹಿರಿಯರಿಂದ ಸಂತೋಷ.

 ವೃಶ್ಚಿಕ:

ದಂಪತಿಗಳಿಗೆ ಪರಸ್ಪರರಿಂದ ಲಾಭ. ದೂರ ಪ್ರಯಾಣ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಜವಾಬ್ದಾರಿಯುತ ಕಾರ್ಯ ವೈಖರಿ. ಆಸ್ತಿ ವಿಚಾರಗಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಹಿರಿಯರ ಆರೋಗ್ಯ ಗಮನಿಸಿ. ಬಹು ಸಂಪತ್ತು ವೃದ್ಧಿಯಾಗುವ ಸಂದರ್ಭ.

ಧನು:

ಗೃಹೋಪ ವಸ್ತುಗಳ ಸಂಗ್ರಹ. ಹೆಚ್ಚಿದ ಜನಸಂಪರ್ಕ. ಗಣ್ಯರ ಭೇಟಿ. ದೂರದ ಬಂಧು-ಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ಉತ್ತಮ ಸಂಬಂಧ ಕೂಡಿ ಬರುವ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ.

ಮಕರ:

ಅಧ್ಯಯನಶೀಲತೆ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಸತ್ಕರ್ಮಕ್ಕೆ ಧನವ್ಯಯ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಗುರುಹಿರಿಯರಲ್ಲಿ ತಾಳ್ಮೆ ಸಮಾದಾನದಿಂದ ವರ್ತಿಸಿ.

ಕುಂಭ:

ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗೃಹೋಪ ವಸ್ತುಗಳ ಸಂಗ್ರಹ. ಸಾಂಸಾರಿಕ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಬಂಧುಮಿತ್ರರ ಸಹಾಯ ಸಹಕಾರದಿಂದ ಅಭಿವೃದ್ಧಿ. ಹೆಚ್ಚಿನ ವರಮಾನ. ಗುರುಹಿರಿಯರಿಂದ ಸುಖ ಸಂತೋಷ ಹಾಗೂ ಮಾರ್ಗದರ್ಶನ.

ಮೀನ:

ಆಭರಣಾದಿ ಖರೀದಿಗಳು. ಮನೆಗೆ ಸಂಬಂಧಿಸಿದ ವಸ್ತು ಸಂಗ್ರಹ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾನ ಧರ್ಮದಲ್ಲಿ ಆಸಕ್ತಿ. ಅವಿವಾಹಿತರಿಗೆ ಯೋಗ. ವಿದ್ಯಾರ್ಥಿಗಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next