Advertisement

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

07:13 PM Dec 05, 2021 | Team Udayavani |
1. ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ ಜಿಲ್ಲೆಯಲ್ಲಿ ಯಾವುದೇ ಪಕ್ಷದ ಜೊತೆ ಯಾವುದೇ ಹೊಂದಾಣಿಕೆ ಇಲ್ಲ ಎಂದು ಬಿ ಎಸ್‌ ವೈ ಮಂಡ್ಯದಲ್ಲಿ ತಿಳಿಸಿದರು. ಜೆಡಿಎಸ್ ಅಭ್ಯರ್ಥಿ ಇಲ್ಲದ ಕಡೆ ಬೆಂಬಲ ಕೇಳಿದ್ದೇವೆ ಅಷ್ಟೇ. ಆದರೆ ಯಾವುದೇ ಕಾರಣಕ್ಕೂ ಮಂಡ್ಯದಲ್ಲಿ ಮೈತ್ರಿ ಇಲ್ಲ ಎಂದು ಅವರು ಸ್ಪಸ್ಟಪಡಿಸಿದರು. 2. ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ: ರಾಜ್ಯ ಸರ್ಕಾರದ ವಿರೋಧ ಬೆಂಗಳೂರು: ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಈ ಭಾಗದ ಜನತೆಯ ಒಕ್ಕೊರಲಿನ ವಿರೋಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು. 3. ನಾಗಾಲ್ಯಾಂಡ್‌ ನಲ್ಲಿ ನಡೆದ ನಾಗರಿಕ ಹತ್ಯೆಗಳ ಬಗ್ಗೆ ಸೇನೆ ವಿಷಾದ ನಾಗಾಲ್ಯಾಂಡ್‌ನಲ್ಲಿ 11 ನಾಗರಿಕರ ಹತ್ಯೆಯ ಬಗ್ಗೆ ಸೇನೆ ಭಾನುವಾರ ವಿಷಾದ ವ್ಯಕ್ತಪಡಿಸಿದೆ. ನಾಗಾಲ್ಯಾಂಡ್ ಹತ್ಯೆಯ ಘಟನೆಯನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುತ್ತಿದೆ, ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸೇನೆಯು ಭರವಸೆ ನೀಡಿದೆ. 4. ಅಮೇಠಿಯಲ್ಲಿ ಎಕೆ-203 ರೈಫ‌ಲ್‌ ಉತ್ಪಾದನೆ ರಕ್ಷಣ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವತ್ತ ಪ್ರಮುಖ ಉತ್ತರಪ್ರದೇಶ ಹೊಸ ಹೆಜ್ಜೆ ಇಟ್ಟಿದೆ. ಅಮೇಠಿಯ ಕೊರ್ವಾದಲ್ಲಿ 5 ಲಕ್ಷ ಎಕೆ-203 ರೈಫ‌ಲ್‌ಗ‌ಳ ಉತ್ಪಾದನೆ ಯೋಜನೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಈ ಮೂಲಕ ಉತ್ತರಪ್ರದೇಶವು ದೇಶದ ರಕ್ಷಣ ಉತ್ಪಾದನ ಹಬ್‌ ಆಗಲಿದೆ. 5. ಕೃತಿಗಳ ರೂಪಕ್ಕೆ ನೌಕಾಪಡೆಯ ಸಮರ ಇತಿಹಾಸ ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಭಾಗವಾಗಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಹೊಸ ಚಿಂತನೆ ನಡೆಸಿದೆ. ಭಾರತೀಯ ನೌಕಾಪಡೆಯ ಸಹಭಾಗಿತ್ವದಲ್ಲಿ ನೌಕಾಪಡೆಯ ಯುದ್ಧದ ಇತಿಹಾಸಗಳನ್ನು ಸೇನೆ ಕೃತಿಯ ರೂಪದಲ್ಲಿ ದಾಖಲಿಸಲಿದೆ. 6. ದೇಶದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆ ಕೋವಿಡ್ ಭೀತಿಗೆ ಕಾರಣವಾಗಿರುವ ಒಮಿಕ್ರಾನ್ ರೂಪಾಂತರಿ ತಳಿಯ ಮತ್ತೊಂದು ಪ್ರಕರಣ ದೇಶದಲ್ಲಿ ಪತ್ತೆಯಾಗಿದೆ. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶದ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಐದಕ್ಕೇರಿಕೆಯಾಗಿದೆ. 7. ಪುನೀತ್ ಡ್ರೀಮ್ ಪ್ರಾಜೆಕ್ಟ್ ಬಗ್ಗೆ ಅಶ್ವಿನಿ ಟ್ವೀಟ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಡ್ರೀಮ್ ಪ್ರಾಜೆಕ್ಟ್ ಡಾಕ್ಯುಮೆಂಟರಿಯ ಟೈಟಲ್ ಟೀಸರ್ ಬಿಡುಗಡೆಯ ಬಗ್ಗೆ ದಿನಾಂಕ ನಿಗದಿಯಾಗಿದೆ. ಇದೀಗ ಅಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತಷ್ಟು ಮಾಹಿತಿ ನೀಡಿದ್ದಾರೆ. ಡಿ.6ರಂದು ಬೆಳಗ್ಗೆ 10 ಗಂಟೆಗೆ ಪಿಆರ್ ಕೆ ಸ್ಟುಡಿಯೋದ ಯುಟ್ಯೂಬ್ ಚಾನೆಲ್ ನಲ್ಲಿ ಟೈಟಲ್ ಟೀಸರ್ ಬಿಡುಗಡೆಯಾಗಲಿದೆ ಎಂದು ಟ್ವೀಟ್‌ ಮಾಡಿದ್ದಾರೆ. 8. ಮುಂಬೈ ಟೆಸ್ಟ್: ಅನಿಲ್ ಕುಂಬ್ಳೆ ದಾಖಲೆ ಮುರಿದ ರವಿಚಂದ್ರನ್ ಅಶ್ವಿನ್ ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧ ನಡೆಯುತ್ತಿರುವ ಮುಂಬೈ ಟೆಸ್ಟ್ ಪಂದ್ಯದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಿದೆ. ಎರಡನೇ ಇನ್ನಿಂಗ್ಸ್ ನಲ್ಲಿ ವಿಲ್ ಯಂಗ್ ನ ವಿಕೆಟ್ ಪಡೆಯುವ ಮೂಲಕ ರವಿ ಅಶ್ವಿನ್ 2021ರಲ್ಲಿ 50 ಟೆಸ್ಟ್ ವಿಕೆಟ್ ಕಿತ್ತ ಸಾಧನೆ ಮಾಡಿದ್ದಾರೆ. ಅದಲ್ಲದೆ 2021ರಲ್ಲಿ ಈ ಸಾಧನೆ ಮಾಡಿದ ಮೊದಲ ಬೌಲರ್ ಕೂಡಾ ಎನಿಸಿದರು.
Advertisement

Udayavani is now on Telegram. Click here to join our channel and stay updated with the latest news.

Next