1. 15 ಸಾವಿರ ಶಿಕ್ಷಕರ ನೇಮಕಕ್ಕೆ ನಿರ್ಧಾರ: ಸಚಿವ ಬಿ.ಸಿ. ನಾಗೇಶ್
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಸರ್ಕಾರ ನಿರ್ಧರಿಸಿದೆ. ಒಟ್ಟು 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
2. ಮಂಗಳೂರಿನಲ್ಲಿ ಮತಾಂತರ ಮಾಡಲು ಯತ್ನಿಸಿದ್ದು ದೃಢ
ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣದಲ್ಲಿ ನೂರ್ ಜಹಾನ್ ಎಂಬ ಮಹಿಳೆ ಮತಾಂತರ ಮಾಡಲು ಯತ್ನಿಸಿದ್ದು ಸಾಭೀತಾಗಿದೆ. ಈ ಹಿನ್ನಲೆಯಲ್ಲಿ ಆಕೆಯನ್ನು ಬಂಧಿಸಲಾಗಿದೆ. ಈ ಮಾಹಿತಿಯನ್ನು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಶನಿವಾರ ತಿಳಿಸಿದ್ದಾರೆ.
3. ಪುತ್ರಿಯರಿಂದ ಜ.ರಾವತ್ ಚಿತಾಭಸ್ಮ ಗಂಗಾ ನದಿಯಲ್ಲಿ ವಿಸರ್ಜನೆ
ಹೆಲಿಕಾಪ್ಟಾರ್ ದುರಂತದಲ್ಲಿ ಮಡಿದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಅವರ ಚಿತಾಭಸ್ಮವನ್ನು ಇಂದು ವಿಸರ್ಜಿಸಲಾಯಿತು. ಅವರ ಪುತ್ರಿಯರು ಶನಿವಾರ ಮಧ್ಯಾಹ್ನ ಹರಿದ್ವಾರದಲ್ಲಿ ಗಂಗಾ ನದಿಯಲ್ಲಿ ಭಸ್ಮ ವಿಸರ್ಜನೆ ಮಾಡಿದರು.
4. ಹೆಚ್ಚಿದ ಒಮಿಕ್ರಾನ್ ಭೀತಿ: ಮುಂಬೈನಲ್ಲಿ ಸೆಕ್ಷನ್ 144 ಜಾರಿ
ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಈ ಕಾರಣದಿಂದಾಗಿ ಮುಂಬೈನಲ್ಲಿ ಶನಿವಾರ ಮತ್ತು ರವಿವಾರ ಸೆಕ್ಷನ್ 144 ವಿಧಿಸಲಾಗಿದೆ. ಸದ್ಯ ದೇಶದಲ್ಲೇ ಅತೀ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿದೆ.
5. ವಿವಾದಾತ್ಮಕ ಹೇಳಿಕೆ: ಹರ್ಯಾಣ ಸಿಎಂ
ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ಸಹಿಸುವುದಿಲ್ಲ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಶುಕ್ರವಾರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಈ ಸಮಸ್ಯೆಯನ್ನು ಪರಿಹರಿಸಲು ನಾನು ಪೊಲೀಸರಿಗೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.
6. ಶಬರಿಮಲೆ ಯಾತ್ರಿಗಳಿಗೆ ಸಿಹಿ ಸುದ್ದಿ
ಕೋವಿಡ್ 19 ಸೋಂಕು ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಶಬರಿಮಲೆ ಯಾತ್ರೆಗೆ ವಿಧಿಸಲಾಗಿರುವ ನಿರ್ಬಂಧ ಸಡಿಲಗೊಳಿಸಲಾಗಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ಅವರ ನಡುವೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
7. ಮತಾಂತರ ಆಗಲು ನಿರ್ದೇಶಕನ ನಿರ್ಧಾರ
ಮಲಯಾಳಂ ಸಿನಿಮಾ ರಂಗದ ಖ್ಯಾತ ನಿರ್ದೇಶಕ ಅಲಿ ಅಕ್ಬರ್ ಹಾಗೂ ಅವರ ಪತ್ನಿ ಮತಾಂತರವಾಗಲು ನಿರ್ಧರಿಸಿದ್ದಾರೆ. ಇಸ್ಲಾಂ ಧರ್ಮವನ್ನು ತೊರೆದು ಹಿಂದು ಧರ್ಮಕ್ಕೆ ಮತಾಂತರಗೊಳ್ಳಲು ತೀರ್ಮಾನಿಸಿದ್ದಾರೆ. ಇದಕ್ಕೆ ಸಿಡಿಎಸ್ ಬಿಪಿನ್ ರಾವತ್ ಅವರ ದುರ್ಮರಣವನ್ನು ಕೆಲ ಮುಸ್ಲಿಮರು ಸಾಮಾಜಿಕ ಜಾಲತಾಣಗಳಲ್ಲಿ ಸಂಭ್ರಮಿಸಿದ್ದು ಕಾರಣ ಎನ್ನಲಾಗಿದೆ.
8. ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಲು ಮುಂದಾದರೆ ರವೀಂದ್ರ ಜಡೇಜಾ?
ಭಾರತ ತಂಡದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಲು ಮುಂದಾಗಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರವೀಂದ್ರ ಜಡೇಜಾ ಈ ನಿರ್ಧಾರ ಮಾಡಿದ್ದಾರೆಂದು ವರದಿಯಾಗಿದೆ.