1. ಪರಿಷತ್ ಫೈಟ್: ಚಿತ್ರದುರ್ಗ, ಉ. ಕನ್ನಡ, ಚಿಕ್ಕಮಗಳೂರು, ಮಂಗಳೂರು ಕ್ಷೇತ್ರದ ಫಲಿತಾಂಶ ಪ್ರಕಟ
ರಾಜ್ಯದಲ್ಲಿ ಡಿಸೆಂಬರ್ 10ರಂದು ನಡೆದಿದ್ದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆದಿದೆ. ಹಲವು ಕ್ಷೇತ್ರಗಳ ಫಲಿತಾಂಶ ಈಗಾಗಲೇ ಲಭ್ಯವಾಗಿದ್ದು, ಚಿತ್ರದುರ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರೆ, ಬೀದರ್, ತುಮಕೂರು, ವಿಜಯಪುರ, ಮೈಸೂರು, ಬೆಳಗಾವಿ ಯಲ್ಲಿ ಕಾಂಗ್ರೆಸ್ ಹಾಗೂ ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಜಯ ಸಾಧಿಸಿದ್ದಾರೆ.
2. ಬಹುಮತ ಬಂದಿದೆಯೆಂದು ಜೆಡಿಎಸ್ ನಿರ್ಲಕ್ಷ್ಯ ಮಾಡಲ್ಲ: ಯಡಿಯೂರಪ್ಪ
ವಿಧಾನ ಪರಿಷತ್ ನಲ್ಲಿ ಬಿಜೆಪಿಗೆ ಬಹುಮತ ಬಂದರೂ ಜೆಡಿಎಸ್ ಪಕ್ಷವನ್ನು ನಿರ್ಲಕ್ಷ್ಯ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು 25 ರಲ್ಲಿ 20ಕ್ಕೆ ಸ್ಪರ್ಧೆ ಮಾಡಿದ್ದೆವು. 15 ಸ್ಥಾನ ಗೆಲ್ಲವ ನಿರೀಕ್ಷೆಯಿತ್ತು. ಆದರೆ 12 ಜನ ಅಭ್ಯರ್ಥಿಗಳು ಗೆದ್ದಿದ್ದಾರೆ ಎಂದರು.
3. ಬಿಜೆಪಿಗೆ ಧಮ್ ಇಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ: ಸಿದ್ದರಾಮಯ್ಯ
ವಿಧಾನ ಪರಿಷತ್ ಚುನಾವಣೆಯಲ್ಲಿ 12 ಗೆಲ್ಲಬಹುದು ಎಂದು ನಮ್ಮ ನಿರೀಕ್ಷೆಯಿತ್ತು. 11 ಸ್ಥಾನಗಳನ್ನು ಗೆದ್ದಿದ್ದೇವೆ. ಚಿಕ್ಕಮಗಳೂರಲ್ಲಿ ಗಾಯತ್ರಿ ನಾಲ್ಕು ಮತಗಳ ಅಂತರದಿಂದ ಸೋಲಾಗಿದೆ. ಅದೊಂದು ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು ಭಾವಿಸಿದ್ದೇವೆ. ಆ ಒಂದು ಕ್ಷೇತ್ರದಲ್ಲಿ ಮಾತ್ರ ನಿರೀಕ್ಷೆ ಹುಸಿಯಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
4. ನಾನು ಸಿಎಂ ಆದರೆ ರಾಜ್ಯದ ಇತಿಹಾಸವೇ ಬದಲಾವಣೆಯಾಗುತ್ತದೆ: ಯತ್ನಾಳ್
ರಾಜ್ಯದ ಸಚಿವ ಸಂಪುಟದಲ್ಲಿ ಕೇವಲ ನಾಲ್ಕು ಸ್ಥಾನವಲ್ಲ, ನಿಷ್ಕ್ರಿಯ ಸಚಿವರನ್ನೆಲ್ಲಾ ಬದಲಾವಣೆ ಮಾಡಬೇಕು. ನಾನು ಮುಖ್ಯಮಂತ್ರಿಯಾದರೆ ರಾಜ್ಯದ ಇತಿಹಾಸವೇ ಬದಲಾವಣೆಯಾಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
5. ಟಿಎಂಸಿ ಬಹುಸಂಸ್ಕೃತಿ ಮತ್ತು ಬಹುಧರ್ಮೀಯ ರಾಜ್ಯವನ್ನು ಬೆಂಬಲಿಸುವ ಪಕ್ಷ: ಮಮತಾ ಬ್ಯಾನರ್ಜಿ
ಟಿಎಂಸಿ ಎಂದರೆ “ದೇವಸ್ಥಾನ,ಮಸೀದಿ ಮತ್ತು ಚರ್ಚ” ಎಂದರ್ಥ. ನಾವು ಇಲ್ಲಿ ಮತಗಳನ್ನು ವಿಭಜಿಸಲು ಬಂದಿಲ್ಲ. ಮತಗಳನ್ನು ಕ್ರೋಢೀಕರಿಸಲು ಮತ್ತು ಟಿಎಂಸಿ ಮೈತ್ರಿಕೂಟ ಗೆಲ್ಲಲು ಬಂದಿದ್ದೇವೆ. ನಾವು ಹೋರಾಟ ನಡೆಸಿ ಸಾಯುತ್ತೇವೆಯೇ ಹೊರತು ಹೋರಾಟ ನಡೆಸದೆಯೇ ಹಿಂದಿರುಗುವುದಿಲ್ಲಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
6. ದೆಹಲಿಯಲ್ಲಿ ಮತ್ತೆ 4 ಒಮಿಕ್ರಾನ್ ಸೋಂಕು ಪತ್ತೆ, ಒಟ್ಟು ಸಂಖ್ಯೆ ಆರಕ್ಕೆ ಏರಿಕೆ
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಸೋಂಕಿನ ನಾಲ್ಕು ಪ್ರಕರಣ ಪತ್ತೆಯಾಗಿರುವುದಾಗಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮಂಗಳವಾರ(ಡಿಸೆಂಬರ್ 14) ತಿಳಿಸಿದ್ದಾರೆ.
7. ಪುಷ್ಪದಲ್ಲಿ ಸಮಂತಾ ಹೈಲೈಟ್: ರಶ್ಮಿಕಾ ಕಸಿವಿಸಿ?
ಇತ್ತೀಚೆಗಷ್ಟೇ ವಿದೇಶ ಪ್ರವಾಸ ಮುಗಿಸಿಕೊಂಡು ಬಂದಿರುವ ನಟಿ ರಶ್ಮಿಕಾ ಮಂದಣ್ಣ ಈಗ “ಪುಷ್ಪ’ ಸಿನಿಮಾದ ಪ್ರಮೋಶನ್‌ನಲ್ಲಿ ಬಿಝಿಯಾಗಿದ್ದಾರೆ. ಈ ಚಿತ್ರ ಡಿ.17 ರಂದು ತೆರೆಕಾಣುತ್ತಿದೆ. ಅಲ್ಲು ಅರ್ಜುನ್ ನಟನೆಯ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ದೊಡ್ಡ ಹಿಟ್ ಆಗಿದೆ.
8. ಏಕದಿನ ಸರಣಿಯಿಂದ ಹಿಂದೆ ಸರಿದ ವಿರಾಟ್
ನ್ಯೂಜಿಲ್ಯಾಂಡ್ ಸರಣಿ ಮುಗಿದು ಸದ್ಯ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ ಆಟಗಾರರು ಇನ್ನು ಕೆಲವೇ ದಿನಗಳಲ್ಲಿ ದಕ್ಷಿಣ ಆಫ್ರಿಕಾಗೆ ಪ್ರಯಾಣ ಬೆಳೆಸಲಿದ್ದಾರೆ. ಮೊದಲು ಟೆಸ್ಟ್ ಸರಣಿ ನಂತರ ಏಕದಿನ ಸರಣಿಯನ್ನು ಭಾರತ ತಂಡ ದಕ್ಷಿಣ ಆಫ್ರಿಕಾದಲ್ಲಿ ಆಡಲಿದೆ. ಆದರೆ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಅವರು ಪಾಲ್ಗೊಳ್ಳುವುದು ಅನುಮಾನ ಎನ್ನಲಾಗಿದೆ. ಟೆಸ್ಟ್ ಸರಣಿ ಮುಗಿದ ಬಳಿಕ ವಿರಾಟ್ ಕೊಹ್ಲಿ ಅವರು ಭಾರತಕ್ಕೆ ಬರಲಿದ್ದಾರೆ. ಮಗಳು ವಮಿಕಾಳ ಮೊದಲ ವರ್ಷದ ಹುಟ್ಟುಹಬ್ಬದ ಕಾರಣಕ್ಕೆ ವಿರಾಟ್ ಕೊಹ್ಲಿ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ವರದಿ ತಿಳಿಸಿದೆ.