Advertisement

ಬೆಳಗಾವಿ : ಚುಚ್ಚುಮದ್ದು ಪಡೆದ ಬಳಿಕ ಮೂರು ಶಿಶುಗಳ ನಿಗೂಢ ಸಾವು

07:17 PM Jan 16, 2022 | Team Udayavani |
1. ಸಂಪನ್ಮೂಲ ಸಮಾಧಾನ; ರಾಜ್ಯದ ಸಂಪನ್ಮೂಲ ಕ್ರೋಡೀಕರಣದಲ್ಲಿ ಚೇತರಿಕೆ ಕೊರೊನಾ ಸಂಕಷ್ಟದ ನಡುವೆಯೂ ಸಂಪನ್ಮೂಲ ಕ್ರೋಡೀಕರಣದಲ್ಲಿ ಕರ್ನಾಟಕ ಸಮಾಧಾನಕರ ಹೆಜ್ಜೆ ಇರಿಸುತ್ತಿದೆ. ಎಪ್ರಿಲ್‌ನಿಂದ ಡಿಸೆಂಬರ್‌ವರೆಗೆ ಕಳೆದ ಬಜೆಟ್‌ನಲ್ಲಿ ಹಾಕಿಕೊಳ್ಳಲಾಗಿದ್ದ ಗುರಿಯ ಶೇ. 75ರಷ್ಟು ಸಂಪನ್ಮೂಲ ಸಂಗ್ರಹವಾಗಿದ್ದು, ಆರ್ಥಿಕ ಚೇತರಿಕೆಯಲ್ಲಿ ಗಮನಾರ್ಹ ಪ್ರಗತಿ ಕಾಣಿಸಿದೆ. ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ, ಮುದ್ರಾಂಕ ಮತ್ತು ಮೋಟಾರು ವಾಹನಗಳ ತೆರಿಗೆ ಸಂಗ್ರಹದಲ್ಲಿ ತೃಪ್ತಿದಾಯಕ ಪ್ರಗತಿ ಆಗಿದೆ ಎಂದು ರಾಜ್ಯ ಸರಕಾರ ತಿಳಿಸಿದೆ. 2. ತುರ್ತು ಇದ್ದರಷ್ಟೇ ಆಸ್ಪತ್ರೆಗೆ; ಆರೋಗ್ಯ ಇಲಾಖೆ ಆದೇಶ ಕೋವಿಡ್‌ ಸಹಿತ ಯಾವುದೇ ಕಾಯಿಲೆಗಳು ಗಂಭೀರವಿಲ್ಲದಿದ್ದರೆ ಮುಂದಿನ ಎರಡು ವಾರ ಆ ರೋಗಿಗಳು ಆಸ್ಪತ್ರೆಗಳಿಗೆ ಭೇಟಿ ನೀಡಬಾರದು. ಮನೆಯಲ್ಲೇ ಆರೈಕೆಗೆ ಒಳಪಡಬೇಕು. ರಾಜ್ಯದಲ್ಲಿ ಕೊರೊನಾ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಈ ಆದೇಶ ಹೊರಡಿಸಿದೆ. 3. ಬೆಳಗಾವಿ: ಚುಚ್ಚುಮದ್ದು ಪಡೆದ ಬಳಿಕ ಮೂರು ಶಿಶುಗಳ ನಿಗೂಢ ಸಾವು ಎರಡು ದಿನಗಳ ಹಿಂದೆಯಷ್ಟೇ ಚುಚ್ಚುಮದ್ದು ಪಡೆದಿದ್ದ ಮೂರು ಶಿಶುಗಳು ಬೆಳಗಾವಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ. ಮಲ್ಲಾಪುರ‌ ಗ್ರಾಮದಲ್ಲಿ ಚುಚ್ಚುಮದ್ದು ನೀಡಿರುವ ನಾಲ್ಕು ಶಿಶುಗಳ ಪೈಕಿ ಒಂದು ಮಗು, ಬೋಚಬಾಳ ಗ್ರಾಮದಲ್ಲಿ 21 ಮಕ್ಕಳಿಗೆ ಚುಚ್ಚುಮದ್ದು ನೀಡಿದ್ದು, ಅದರಲ್ಲಿ ಇಬ್ಬರು ಕಂದಮ್ಮಗಳು ಅಸುನೀಗಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 4. ಬಿಜೆಪಿಯ ‘ದ್ವೇಷ’ದ ರಾಜಕಾರಣ ದೇಶಕ್ಕೆ ಅತ್ಯಂತ ಹಾನಿಕಾರಕ: ರಾಹುಲ್ ಗಾಂಧಿ ಬಿಜೆಪಿಯ ‘ದ್ವೇಷದ ರಾಜಕಾರಣ, ದೇಶಕ್ಕೆ ಅತ್ಯಂತ ಹಾನಿಕಾರಕ ಮತ್ತು ನಿರುದ್ಯೋಗಕ್ಕೂ ಕಾರಣವಾಗಿದೆ ಎಂದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. 5. 2.71 ಲಕ್ಷ ಹೊಸ ಕೋವಿಡ್ ಪ್ರಕರಣಗಳು ಪತ್ತೆ: ದೇಶದಲ್ಲಿ ಕಡಿಮೆಯಾಗುತ್ತಿದೆ ಪಾಸಿಟಿವಿಟಿ ದರ ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,71,202 ಹೊಸ ಕೋವಿಡ್ -19 ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೆ ಒಟ್ಟು 7,743 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ, ಶನಿವಾರದಿಂದ ಶೇ.28.17ರಷ್ಟು ಹೆಚ್ಚಳವಾಗಿದ್ದು, 314 ಮಂದಿ ಕೋವಿಡ್‍ನಿಂದ ಮೃತಪಟ್ಟಿದ್ದಾರೆ ಎಂದು ಭಾನುವಾರ ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಅಂಕಿಅಂಶದಲ್ಲಿ ತಿಳಿಸಿದೆ. 6. ಯುಪಿ: ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಬಿಜೆಪಿಗೆ ಸೇರ್ಪಡೆ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದ ಮಾಜಿ ಐಪಿಎಸ್ ಅಧಿಕಾರಿ ಅಸೀಮ್ ಅರುಣ್ ಭಾನುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಬಿಜೆಪಿ ಯುಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್, ಅಸೀಮ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. 7. ಡಿಸ್ನಿ+, ಹಾಟ್ ಸ್ಟಾರ್ ನಲ್ಲಿ ಬಿಡುಗಡೆಯಾಗಲಿದೆ ಧನುಶ್ ಮುಂದಿನ ಚಿತ್ರ ತಮಿಳು ನಟ ಧನುಶ್ ಅವರ ಮುಂದಿನ ಚಿತ್ರ ‘ಮಾರನ್’ಓಟಿಟಿಯಲ್ಲಿ ಬಿಡುಗಡೆಯಾಗಲಿದೆ. ಕಾರ್ತಿಕ್ ನರೆನ್ ನಿರ್ದೇಶನದ ಮಾರನ್ ಚಿತ್ರವು ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಡಿಸ್ನಿ +, ಹಾಟ್ ಸ್ಟಾರ್ ನಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರರಂಗ ಹೇಳಿಕೊಂಡಿದೆ. 8. ನಾಯಕತ್ವ ತ್ಯಜಿಸುವ ಕೊಹ್ಲಿ ನಿರ್ಧಾರ ವೈಯಕ್ತಿಕ: ಸೌರವ್ ಗಂಗೂಲಿ ವಿರಾಟ್ ಕೊಹ್ಲಿ ಅವರು ಭಾರತ ತಂಡದ ನಾಯಕರಾಗಿದ್ದ ಅವಧಿಯಲ್ಲಿ ತಂಡವನ್ನು ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಮುನ್ನಡೆಸಿದ್ದಕ್ಕಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶ್ಲಾಘಿಸಿದ್ದಾರೆ, ಆದರೆ ಟೆಸ್ಟ್ ನಾಯಕತ್ವ ತ್ಯಜಿಸುವ ಅವರ ನಿರ್ಧಾರ ವೈಯಕ್ತಿಕವಾಗಿದೆ ಎಂದಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next