1. ಮೇಕೆದಾಟು ರೀತಿಯಲ್ಲೇ ಮಹದಾಯಿ ಹೋರಾಟ ನಡೆಸುತ್ತೇವೆ: ಸತೀಶ್ ಜಾರಕಿಹೊಳಿ
ಕೋವಿಡ್ ಕಡಿಮೆಯಾದ ನಂತರ ಮುಂದಿನ ದಿನಗಳಲ್ಲಿ ಮೇಕೆದಾಟು ಹೋರಾಟದ ಮಾದರಿಯಲ್ಲಿಯೇ ಮಹದಾಯಿ ಹೋರಾಟ ನಡೆಸಲಾಗುವುದು. ಮಹದಾಯಿ ಹೋರಾಟ ಎಲ್ಲಿಂದ ಆರಂಭ ಮಾಡಬೇಕೆಂಬುದನ್ನು ನಮ್ಮ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಅದರ ರೂಪರೇಷೆ ತಯಾರಿಸಿದ ನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
2. ತೀವ್ರ ವಿರೋಧ: ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ವಾಪಸ್ ಸಾಧ್ಯತೆ?
ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ವಾಪಸ್ ಪಡೆಯುವ ಬಗ್ಗೆ ಸರಕಾರದ ಹಂತದಲ್ಲಿ ಮಹತ್ವದ ಚರ್ಚೆ ನಡೆಯುತ್ತಿದ್ದು, ಶುಕ್ರವಾರ ನಡೆಯುವ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಹೊಟೇಲ್ ಸಂಘ, ಬಾರ್ ಆಂಡ್ ರೆಸ್ಟೋರೆಂಟ್, ನಾನಾ ವರ್ತಕ ಸಂಘಟನೆಗಳ ಜತೆಗೆ ಆಡಳಿತಾರೂಢ ಬಿಜೆಪಿಯಿಂದಲೇ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ತೆರವು ಮಾಡಬೇಕೆಂದು ಆಗ್ರಹ ವ್ಯಕ್ತವಾಗಿದೆ.
3. ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಲು ಕಾಂಗ್ರೆಸ್ ತೀರ್ಮಾನ: ಏನಿದು ಡಿಕೆಶಿ ಪ್ಲ್ಯಾನ್
ಕೋವಿಡ್ ಮಾರ್ಗಸೂಚಿ ಪಾಲನೆ ಮಾಡದ ಬಿಜೆಪಿ ನಾಯಕರ ಮೇಲೆ ಕೇಸ್ ಹಾಕುವಂತೆ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಲು ಕಾಂಗ್ರೆಸ್ ತೀರ್ಮಾನ ಮಾಡಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಾವು ಸಿಎಂ ಭೇಟಿ ಮಾಡಲು ಹೋಗುವುದು ನೆಂಟಸ್ಥಿಕೆ ಮಾಡಲಲ್ಲ. ನಾವೇನು ಮಾಡುತ್ತೇವೆ ಎನ್ನುವುದನ್ನು ನೀವು ನೋಡ್ತಾ ಇರಿ ಎಂದರು.
4. ಗಣರಾಜ್ಯೋತ್ಸವ ದಿನ ಪ್ರಧಾನಿ ಮೋದಿ ಜೀವಕ್ಕೆ ಅಪಾಯ; ಗುಪ್ತಚರ ಇಲಾಖೆ 9ಪುಟಗಳ ವರದಿಯಲ್ಲೇನಿದೆ?
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ ಗಣ್ಯರ ಜೀವಕ್ಕೆ ಅಪಾಯ ಇದ್ದಿರುವುದಾಗಿ ಗುಪ್ತಚರ ಇಲಾಖೆಗೆ ಸುಳಿವು ಲಭ್ಯವಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
5. ಭಾರತದಲ್ಲಿ 2.38 ಲಕ್ಷ ಕೋವಿಡ್ ಪ್ರಕರಣ ಪತ್ತೆ,ಪಾಸಿಟಿವಿಟಿ ದರ ಶೇ.20ರಿಂದ ಶೇ.14ಕ್ಕೆ ಇಳಿಕೆ
ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2.38 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಶೇ.7ರಷ್ಟು ಪ್ರಕರಣ ಇಳಿಕೆ ಕಂಡಿದೆ. ಪಾಸಿಟಿವಿಟಿ ದರ ಶೇ.19.65ರಿಂದ 14.43ಕ್ಕೆ ಇಳಿಕೆಯಾಗಿದ್ದು, ಭಾರತದಲ್ಲಿ ಒಟ್ಟು 8,891 ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
6. ಪಂಜಾಬ್ ವಿಧಾನಸಭಾ ಚುನಾವಣೆ-2022; ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಹೆಸರು ಘೋಷಣೆ
ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ಭಗವಂತ್ ಮಾನ್ ಆಪ್ ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಂಗಳವಾರ ಘೋಷಿಸಿದ್ದಾರೆ.
7. 18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್- ಐಶ್ವರ್ಯಾ
ತಮಿಳು ನಟ ಧನುಷ್ ಮತ್ತು ಸೂಪರ್ ಸ್ಟಾರ್ ರಜಿನಿಕಾಂತ್ ಪುತ್ರಿ ಐಶ್ವರ್ಯಾ ತಮ್ಮ 18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದಾರೆ. ಡಿವೋರ್ಸ್ ಪಡೆಯುವ ಬಗ್ಗೆ ಧನುಷ್ ಸೋಮವಾರ ಅಧಿಕೃತ ಮಾಹಿತಿ ನೀಡಿದ್ದಾರೆ.
8. ಹಾರ್ದಿಕ್ ಪಾಂಡ್ಯ, ರಶೀದ್ ಖಾನ್ ಜೊತೆಗೆ ಯುವ ಆಟಗಾರನನ್ನು ಸೆಳೆದ ಅಹಮದಾಬಾದ್ ಫ್ರಾಂಚೈಸಿ
ಮುಂದಿನ ಸೀಸನ್ ನ ಐಪಿಎಲ್ ಗೆ ತಯಾರಿ ಜೋರಾಗಿಯೇ ನಡೆಯುತ್ತಿದೆ. ಎರಡು ಹೊಸ ತಂಡಗಳು ತಮಗೆ ಬೇಕಾದ ಮೂವರು ಆಟಗಾರರ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ. ಈ ಮಧ್ಯೆ ಅಹಮದಾಬಾದ್ ಮೂಲದ ಫ್ರಾಂಚೈಸಿಯು ತನ್ನ ಆಯ್ಕೆಯನ್ನು ಅಂತಿಮಗೊಳಿಸಿದೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಹೈದರಾಬಾದ್ ಫ್ರಾಂಚೈಸಿಯನ್ನು ಮುನ್ನಡೆಸಲಿದ್ದಾರೆ, ಇವರೊಂದಿಗೆ ಹೈದರಾಬಾದ್ ತಂಡದಲ್ಲಿದ್ದ ಸ್ಟಾರ್ ಬೌಲರ್ ರಶೀದ್ ಖಾನ್ ಅವರನ್ನೂ ಆಯ್ಕೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.