ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆಗಳ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ ಹಿನ್ನಲೆಯಲ್ಲಿ 1 ರಿಂದ 5 ನೇ ತರಗತಿಯವರೆಗೆ ಶಾಲೆಗಳನ್ನು ಅಕ್ಟೋಬರ್ 25 ರಿಂದ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ತೀರ್ಮಾನ ಮಾಡಿದೆ.
ಶಾಲೆಗಳ ಆರಂಭಕ್ಕೆ ಸರಕಾರ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿದ್ದು, ಶಾಲೆಗೆ ಕಳುಹಿಸಲು ಪೋಷಕರ ಅನುಮತಿ ಕಡ್ಡಾಯವಾಗಿರಬೇಕು ಎಂದು ಸೂಚನೆ ನೀಡಿದೆ.
ಭಾರೀ ಮಳೆ, ಪ್ರವಾಹಕ್ಕೆ ತತ್ತರಿಸಿಹೋದ ಕೇರಳ, ಸಾವಿನ ಸಂಖ್ಯೆ 27ಕ್ಕೆ ಏರಿಕೆ, CM ತುರ್ತು ಸಭೆ
ಭಾರೀ ಮಳೆ, ಪ್ರವಾಹದ ಪರಿಣಾಮ ಕೇರಳದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 27ಕ್ಕೆ ಏರಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ(ಅಕ್ಟೋಬರ್ 18) ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತುರ್ತು ಸಭೆಯನ್ನು ಕರೆದು ಮಳೆ, ಪ್ರವಾಹ ಪೀಡಿತ ಪ್ರದೇಶಗಳ ಕುರಿತ ಮಾಹಿತಿ ಪಡೆದಿರುವುದಾಗಿ ವರದಿ ತಿಳಿಸಿದೆ.
ಚೀನಾ ವಿರುದ್ಧವೂ ಸರ್ಜಿಕಲ್ ಸ್ಟ್ರೈಕ್ ನಡೆಸಿ : ರಾವತ್ ಸವಾಲು
ಕೇಂದ್ರ ಸರಕಾರ ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿ ಸಾಮರ್ಥ್ಯ ತೋರಿಸಲಿ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಅವರು ಸೋಮವಾರ ಸವಾಲು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್ ಅವರು, ಸದ್ಯ ಕಾಶ್ಮೀರದಲ್ಲಿ ಸ್ಥಿತಿ ಚಿಂತಾಜನಕವಾಗಿದೆ. ಕೇಂದ್ರ ಸರಕಾರ ಅಮಾಯಕರು, ವಲಸಿಗರು ಮತ್ತು ಕಾರ್ಮಿಕರ ಹತ್ಯೆಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
5 ಅಂತಸ್ತಿನ ಕಟ್ಟದಲ್ಲಿ ಬೆಂಕಿ ಅವಘಡ ನಡೆದಿದ್ದು 2 ಮಂದಿ ಬಲಿ, 70 ಮಂದಿಯ ರಕ್ಷಣೆ
ಸೂರತ್‌ನ ಕಡೋದರ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಐದು ಅಂತಸ್ತಿನ ಕಟ್ಟಡದಲ್ಲಿ ಸೋಮವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ಯಾಕೇಜಿಂಗ್ ಘಟಕದಲ್ಲಿ ಬೆಳಗಿನ ಜಾವ 4.30 ರ ವೇಳೆಗೆ ಬೆಂಕಿ ಅವಘಡ ಸಂಭವಿಸಿದ್ದು, 70 ಮಂದಿ ಕಾರ್ಮಿಕರನ್ನು ತಕ್ಷಣ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಲಾಗಿದೆ.ರಕ್ಷಣಾ ಕಾರ್ಯ ಮುಂದುವೆದಿದೆ ಎಂದು ಕಡೋದರ ಪೊಲೀಸ್ ಅಧಿಕಾರಿ ಹೇಮಂತ್ ಪಟೇಲ್ ತಿಳಿಸಿದ್ದಾರೆ.
ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ: ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ
ರಾಜ್ಯ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಹೆಬ್ಬೆಟ್ಟು ಗಿರಾಕಿ ಮೋದಿಯಿಂದ ದೇಶ ನರಳುತ್ತಿದೆ ಎಂದು ಟೀಕಿಸಿದೆ.
ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ ನರೇಂದ್ರ ಮೋದಿ ಓದಲಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಮಾಡಿತ್ತು ಆದರೂ ಓದಲಿಲ್ಲ. ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ. ಹೆಬ್ಬೆಟ್ಟು ಗಿರಾಕಿ ಮೋದಿಯಿಂದ ದೇಶ ನರಳುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ
ಗ್ರಾಮ ಪಂಚಾಯತ್‌ಗೊಂದು ಮಾದರಿ ಶಾಲೆ
ರಾಜ್ಯದ ಪ್ರತೀ ಗ್ರಾಮ ಪಂಚಾಯತ್‌ನಲ್ಲಿ ಒಂದು ಸರಕಾರಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸಿ, ಅದರ ಸಂಪೂರ್ಣ ಜವಾಬ್ದಾರಿಯನ್ನು ಸ್ಥಳೀಯ ಶಾಸಕರ ಹೆಗಲಿಗೇರಿಸಲು ಸರಕಾರ ಗಂಭೀರ ಚಿಂತನೆ ನಡೆಸಿದೆ.
ಪ್ರತೀ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಇದೆ. ಪೂರ್ವ ಪ್ರಾಥಮಿಕ ತರಗತಿಯಿಂದ 12ನೇ ತರಗತಿ ವರೆಗೆ ಒಂದೇ ಸೂರಿನಡಿ ಶಿಕ್ಷಣ ನೀಡಲು ಇವುಗಳನ್ನು ಆರಂಭಿಸಲಾಗಿದ್ದು, ಯಶಸ್ವಿಯಾಗಿದೆ.
ಕನ್ನಡಕ್ಕಾಗಿ ‘ಓನ್ಲಿ ಕನ್ನಡ’: ಹೊಸ ಓಟಿಟಿ ವೇದಿಕೆ
ಲಾಕ್‌ಡೌನ್‌ನಲ್ಲಿ ಜನ ಓಟಿಟಿ ಕಡೆಗೆ ಹೆಚ್ಚು ವಾಲಿದ ಪರಿಣಾಮ ಈಗ ಹೊಸ ಹೊಸ ಓಟಿಟಿ ವೇದಿಕೆಗಳು ಹುಟ್ಟಿಕೊಳ್ಳುತ್ತಿವೆ. ಕನ್ನಡದಲ್ಲೂ ಒಂದಷ್ಟು ಓಟಿಟಿಗಳು ಹುಟ್ಟಿಕೊಳ್ಳುತ್ತಿವೆ. ಆ ಸಾಲಿಗೆ “ಓನ್ಲಿ ಕನ್ನಡ’ ಸೇರುತ್ತದೆ.
ಇದು ಹೊಸದಾಗಿ ಆರಂಭವಾದ ಓಟಿಟಿ ವೇದಿಕೆ. “ಪ್ರಯೋಗ್ ಸ್ಟುಡಿಯೋ’ ಆರಂಭಿಸಿದ್ದ ಪ್ರದೀಪ್ ಅವರು ಈಗ ಓನ್ಲಿ ಕನ್ನಡ ಆರಂಭಿಸಿದ್ದಾರೆ. ಇತ್ತೀಚೆಗೆ ಈ ಓಟಿಟಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಶ್ರೀಲಂಕಾದ ಮೊದಲ ಟೆಸ್ಟ್ ನಾಯಕ ಬಂದುಲಾ ವರ್ಣಾಪುರ ನಿಧನ
ಶ್ರೀಲಂಕಾ ಟೆಸ್ಟ್ ತಂಡದ ಮೊತ್ತಮೊದಲ ನಾಯಕ ಬಂದುಲಾ ವರ್ಣಾಪುರ ಇಂದು ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಬಂದುಲಾ ವರ್ಣಾಪುರ ಇಂದು ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು.
ಬಲಗೈ ಬ್ಯಾಟ್ಸಮನ್ ಆಗಿದ್ದ ಬಂದುಲಾ ವರ್ಣಾಪುರ 1982ರ ಫೆಬ್ರವರಿಯಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕನಾಗಿದ್ದರು. ಈ ಪಂದ್ಯದಲ್ಲಿ ಶ್ರೀಲಂಕಾ ತಂಡವು ಇಂಗ್ಲೆಂಡ್ ತಂಡವನ್ನು ಎದುರಿಸಿತ್ತು.