Advertisement

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

05:10 PM Jan 19, 2022 | Team Udayavani |
1. ದ.ಕ.: ಸಾವಿರದ ಗಡಿ ದಾಟಿದ ಕೋವಿಡ್‌ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಕೊರೊನಾ ದೈನಂದಿನ ವರದಿ ಮತ್ತು ಪಾಸಿಟಿವಿಟಿ ದರ ಏರಿಕೆ ಕಾಣುತ್ತಿದೆ. ಮಂಗಳವಾರ 1,058 ಮಂದಿಗೆ ಕೊರೊನಾ ದೃಢಪಟ್ಟಿದ್ದು, 275 ಮಂದಿ ಗುಣಮುಖರಾಗಿದ್ದಾರೆ. 4,964 ಸಕ್ರಿಯ ಪ್ರಕರಣಗಳಿವೆ. ಶೇ. 10.76 ಪಾಸಿಟಿವಿಟಿ ದರ ದಾಖಲಾಗಿದೆ. 2. “ವೈದ್ಯರ ನಡೆ ಹಳ್ಳಿ ಕಡೆ’ ಪುನರಾರಂಭಿಸಲು ಸೂಚನೆ ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕಿನ ಸರಪಳಿಯನ್ನು ತುಂಡರಿಸಲು ಸರಕಾರ ನಿರ್ಧರಿಸಿದೆ. ಇದರ ಭಾಗವಾಗಿ “ವೈದ್ಯರ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಮತ್ತೆ ಆರಂಭಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. 3. ಕರ್ಫ್ಯೂ ತೆಗೆಯಿರಿ: ಸರಕಾರದ ವಿರುದ್ಧವೇ ಸಿಂಹ ಘರ್ಜನೆ ! ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿಕೆಂಡ್ ಕರ್ಫ್ಯೂ ಬಗ್ಗೆ ಅಸಮಾಧಾನ ತೋರಿದ್ದಾರೆ. ಲಾಕ್ ಡೌನ್, ಕರ್ಫ್ಯೂ ವಿಧಿಸುವುದಾದಾಗಿದ್ದರೆ ವ್ಯಾಕ್ಸಿನ್ ಯಾಕೆ ಬೇಕಿತ್ತು ಎಂದು ಪ್ರತಾಪ್ ಸಿಂಹ ಸರಕಾರವನ್ನು ಪ್ರಶ್ನಿಸಿ ಬುಧವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. 4. ತಮಿಳುನಾಡಿನ ಎಲ್ಲ ಜಿಲ್ಲೆಗಳಲ್ಲಿ ಕೇಂದ್ರ ತಿರಸ್ಕೃತ ಟ್ಯಾಬ್ಲೋ ಪ್ರದರ್ಶನ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ತಮ್ಮ ರಾಜ್ಯದ ಸ್ತಬ್ದಚಿತ್ರಕ್ಕೆ ಅವಕಾಶ ನೀಡದೇ ಇರುವ ವಿವಾದವನ್ನು ಇತ್ಯರ್ಥಪಡಿಸಲು ತಮಿಳುನಾಡು ಸಿಎಂ ಸಿದ್ದರಿಲ್ಲ. ಕೇಂದ್ರದಿಂದ ತಿರಸ್ಕೃತಗೊಂಡ ಸ್ತಬ್ದಚಿತ್ರವನ್ನು ತಮಿಳುನಾಡಿನ ಎಲ್ಲ ಜಿಲ್ಲೆಗಳಲ್ಲಿ ಪ್ರದರ್ಶನ ಮಾಡಲು ಅವರು ತೀರ್ಮಾನಿಸಿದ್ದಾರೆ. 5. ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ ಯಾದವ್ ಬಿಜೆಪಿ ಸೇರ್ಪಡೆ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಹಲವು ಬೆಳವಣಿಗೆಗಳು ನಡೆಯುತ್ತಿವೆ. ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 6. ಹೊರಟ್ಟಿ ಬಿಜೆಪಿ ಸೇರ್ಪಡೆಗೆ ನಡೆಯುತ್ತಿದೆ ಲೆಕ್ಕಾಚಾರ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರ ಮುಂದಿನ ರಾಜಕೀಯ ನಡೆಯ ಬಗ್ಗೆ ಸಾಕಷ್ಟು ಕುತೂಹಲ ಉಂಟಾಗಿದೆ. ಬಿಜೆಪಿ ಸೇರ್ಪಡೆಯ ಕುರಿತು ಮಾತುಕತೆ ನಡೆದಿದೆಯಾದರೂ ಹೊರಟ್ಟಿಯವರ ಷರತ್ತುಗಳ ಕುರಿತು ಬಿಜೆಪಿ ಮೌನ ವಹಿಸಿದೆ. 7. ವಿಚ್ಛೇದನ ಹಾದಿಯಲ್ಲಿ ನಟ ಚಿರಂಜೀವಿ ಪುತ್ರಿ ಶ್ರೀಜಾ? ತಮಿಳು ನಟ ಧನುಷ್‌ ದಾಂಪತ್ಯ ಅಂತ್ಯಗೊಂಡ ಸುದ್ದಿ ಬಂದ ಬೆನ್ನಲ್ಲೇ ತೆಲುಗು ಚಿತ್ರರಂಗದ ಹಿರಿಯ ನಟ ಚಿರಂಜೀವಿಯವರ ಪುತ್ರಿ ಶ್ರೀಜಾ ಕೂಡ ಇದೇ ಹಾದಿಯಲ್ಲಿ ನಡೆಯುತ್ತಿರುವ ಬಗ್ಗೆ ಅನುಮಾನಗಳು ಮೂಡಿವೆ. ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಶ್ರೀಜಾ ಕಲ್ಯಾಣ್‌ ಎಂದು ಬದಲಾಯಿಸಿಕೊಂಡಿದ್ದು ಇದಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ. 8. 2022 ಕೊನೆಯ ಸೀಸನ್ : ದೇಹ ಕ್ಷೀಣಿಸುತ್ತಿದೆ ಎಂದ ಸಾನಿಯಾ ಮಿರ್ಜಾ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಬುಧವಾರ 2022 ತನ್ನ ಕೊನೆಯ ಸೀಸನ್ ಎಂದು ಘೋಷಿಸಿದ್ದಾರೆ. ಸಾನಿಯಾ ಅವರು ಆಸ್ಟ್ರೇಲಿಯನ್ ಓಪನ್ ಮಹಿಳಾ ಡಬಲ್ಸ್ ಮೊದಲ ಸುತ್ತಿನಲ್ಲಿ ಪಾಲುದಾರ ನಾಡಿಯಾ ಕಿಚೆನೊಕ್ ಅವರೊಂದಿಗೆ ಸೋತ ನಂತರ ನಿವೃತ್ತಿ ಕುರಿತಾಗಿ ಮಾತನಾಡಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next