ಜನತಾ ನ್ಯಾಯಾಲಯದ ಮುಂದೆ ಚರ್ಚೆಗೆ ಭಯವೇಕೆ : ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ”ನಾನು ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುವುದಕ್ಕೆ ಬೊಮ್ಮಾಯಿಯವರಿಗೆ ಸವಾಲು ಹಾಕಿದ್ದೆ. ಆದರೆ ಅವರು ವಿಧಾನಸಭೆಯಲ್ಲಿ ಚರ್ಚೆ ಮಾಡೋಣ ಅನ್ನುತ್ತಾರೆ. ಅವರು ಹೇಳಿದ್ದು ಸತ್ಯ ಇರುವುದಾದರೆ ಜನತಾ ನ್ಯಾಯಾಲಯದ ಮುಂದೆ ವೇದಿಕೆಯಲ್ಲಿ ಚರ್ಚೆ ಮಾಡೋಕೆ ಏಕೆ ಭಯ” ಎಂದು ಪ್ರಶ್ನಿಸಿದರು.
ಪೆಗಾಸಸ್ ಗೂಢಚರ್ಯೆ; ಸ್ವತಂತ್ರ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್
ಇಸ್ರೇಲ್ ಕಂಪನಿಯ ಗೂಢಚರ್ಯ ತಂತ್ರಾಂಶ “ಪೆಗಾಸಸ್” ಬಳಸಿ ಕೇಂದ್ರ ಸರ್ಕಾರ ಪತ್ರಕರ್ತರು ಸೇರಿದಂತೆ ದೇಶದ 300ಕ್ಕೂ ಅಧಿಕ ಹೆಚ್ಚು ಗಣ್ಯರ ಮೊಬೈಲ್ ಫೋನ್ ಗೆ ಕನ್ನ ಹಾಕಿದ ಆರೋಪದ ಪ್ರಕರಣದ ತನಿಖೆ ನಡೆಸಲು ಸುಪ್ರೀಂಕೋರ್ಟ್ ತಜ್ಞರ ಸಮಿತಿಯನ್ನು ರಚಿಸಿದೆ. ವೈಯಕ್ತಿಕ ನೆಲೆಯಲ್ಲಿ ತಾರತಮ್ಯ ಎಸಗುವ ಬೇಹುಗಾರಿಕೆ ನಡೆಸಲು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸಮಿತಿ ರಚನೆ ವೇಳೆ ಅಭಿಪ್ರಾಯವ್ಯಕ್ತಪಡಿಸಿದೆ.
ಬೈಕಲ್ಲಿ ಮಕ್ಕಳ ಬೆಲ್ಟ್ ಕಡ್ಡಾಯ.
ಮೋಟಾರು ಬೈಕ್‌ಗಳಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆಗಾಗಿ ಕೇಂದ್ರ ಸರ್ಕಾರವು ಹೊಸ ನಿಯಮವೊಂದನ್ನು ಜಾರಿ ಮಾಡಲು ಚಿಂತನೆ ನಡೆಸಿದೆ. 9 ತಿಂಗಳಿಂದ 4 ವರ್ಷದೊಳಗಿನ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯುವ ವೇಳೆ ಸುರಕ್ಷತಾ ಚೀಲಗಳಲ್ಲೇ ಕುಳ್ಳಿರಿಸಿಕೊಂಡು ಕರೆದೊಯ್ಯಬೇಕು ಹಾಗೂ ಆ ಚೀಲದ ಬೆಲ್ಟ್ ಅನ್ನು ಚಾಲಕನ ದೇಹಕ್ಕೆ ಅಳವಡಿಸಿರಬೇಕು ಎಂದು ಕರಡು ನಿಯಮದಲ್ಲಿ ಉಲ್ಲೇಖೀಸಲಾಗಿದೆ.
ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ
ಪಟಾಕಿ ಮಾರಾಟ ಅಂಗಡಿಯೊಂದರಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ಕಲ್ಲಾಕುರಿಚಿ ಜಿಲ್ಲೆಯ ಶಂಕರಪುರಂ ನಗರದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಅಂಗಡಿ ಮಾಲೀಕರೂ ಸ್ಫೋಟದಲ್ಲಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.
ಅಲ್ಪಸಂಖ್ಯಾತ ಬಾಂಧವರೇ ಕಾಂಗ್ರೆಸ್ ಗೆ ಒಮ್ಮೆ ಪಾಠ ಕಲಿಸಿ:ಹಾನಗಲ್ ನಲ್ಲಿ ಸಿಎಂ
ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರವಾಗಿ ಕೂಡಲದಲ್ಲಿ ಪ್ರಚಾರ ನಡೆಸಿದ ಸಿಎಂ, ”ಜಮೀರ್ ಅಹ್ಮದ್ ಅವರು ಸಾಮಾಜಿಕವಾಗಿ ಮತ ಕೇಳದೇ ಕೇವಲ ಒಂದೇ ಸಮಾಜದವರ ಮತ ಕೇಳಿದ್ದಾರೆ. ಕಾಂಗ್ರೆಸ್ ನವರಿಗೆ ಕೇವಲ ಅಲ್ಪಸಂಖ್ಯಾತರ ಮತ ಅಷ್ಟೇ ಬೇಕು ಎಂಬುದು ನಮಗೂ ಗೊತ್ತಿದೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಬಾವಿಯಲ್ಲಿ ಇಟ್ಟಿದೆ. ಅವಶ್ಯಕತೆ ಬಿದ್ದಾಗ ಮಾತ್ರ ಹಗ್ಗ ಬಿಟ್ಟು ಮೇಲಕ್ಕೆ ಎತ್ತುತ್ತಾರೆ.”ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದೂರಿದರು.
ಅಂಜನಾದ್ರಿ ಸುತ್ತಮುತ್ತಲ ಬೆಟ್ಟಗಳಲ್ಲಿ ಶಿಲಾರೋಹಣ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ
ಆನೆಗೊಂದಿ ಅಂಜನಾದ್ರಿ ಹಾಗೂ ಸುತ್ತಮುತ್ತಲಿನ ಬೆಟ್ಟ ಪ್ರದೇಶಗಳಲ್ಲಿ ಶಿಲಾರೋಹಣ ಸಾಹಸ ಕ್ರೀಡೆಗೆ ಹೇಳಿ ಮಾಡಿಸಿದ ಪ್ರದೇಶವಾಗಿತ್ತು ಇಲ್ಲಿಗೆ ಶಿಲಾರೋಹಣ ಮಾಡುವ ಸಾಹಸಿ ಪ್ರವಾಸಿಗರಿಗೆ ಪ್ರೋತ್ಸಾಹ ನೀಡುವಲ್ಲಿ ಪ್ರವಾಸೋದ್ಯಮ ಇಲಾಖೆ ಮತ್ತು ಕ್ರೀಡಾ ಇಲಾಖೆ ಸೂಕ್ತ ಮಾರ್ಗದರ್ಶನ ಮತ್ತು ಪ್ರಚಾರ ಮಾಡಲಿವೆ ಎಂದು ಜಿಲ್ಲಾಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಶಿಲಾರೋಹಣ ತರಬೇತಿ ಕಾರ್ಯಾಗಾರದಲ್ಲಿ ತಿಳಿಸಿದರು.
ಕನ್ನಡದಲ್ಲೇ ಮೊದಲ ಪ್ರಯೋಗ : ವಿಂಡೋಸೀಟ್ ನಲ್ಲಿ ಮೂಡಿ ಬಂತು ಜಾಝ್ ಸಾಂಗ್
ವಿಂಡೋಸೀಟ್.. ಈ ಸಿನಿಮಾ ಸೆಟ್ಟೇರಿದಾಗಿನಿಂದ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲೇ ಇದೆ. ಅದ್ರಲ್ಲೂ ಟೈಟಲ್, ಟೀಸರ್, ಮೇಕಿಂಗ್ ನಿಂದಲೇ ಎಲ್ಲರ ಚಿತ್ತ ಕದ್ದಿದ್ದ ಸಿನಿಮಾ, ಇದೀಗ ಮತ್ತೊಂದು ಹಾಡು ಬಿಟ್ಟು ಎಲ್ಲರ ಗಮನ ಸೆಳೆದಿದೆ. ಅದರಲ್ಲೂ ನೇರ ಪಡ್ಡೆ ಹೈಕ್ಳ ಹಾರ್ಟ್ ಗೆ ಕೈ ಹಾಕಿದೆ. ಜಾಝ್ ಶೈಲಿಯಲ್ಲಿ ಸೆರಂಡರ್ ಹಾಡನ್ನ ಸೃಷ್ಟಿಸಿದೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ಇಂಥ ಪ್ರಯೋಗ ಮಾಡಿದ್ದಾರೆ ನರ್ದೇಶಕಿ ಶೀತಲ್ ಶೆಟ್ಟಿ.
ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್
ಹಿಂದೂಗಳ ನಡುವೆ ನಮಾಜ್ ಮಾಡಿದ್ದು ನನಗೆ ತುಂಬಾ ವಿಶೇಷವಾಗಿತ್ತು ಎಂದು ಹೇಳಿಕೆ ನೀಡಿದ್ದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ವಕಾರ್ ಯೂನಿಸ್ ಬುಧವಾರ ತನ್ನ ವಿವಾದಕ್ಕೆ ಗುರಿಯಾಗಿದ್ದ ಹೇಳಿಕೆಗಾಗಿ ಕ್ಷಮೆಯಾಚಿಸಿದ್ದಾರೆ.
ಟ್ವೆಂಟಿ-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆಲುವು ಸಾಧಿಸಿದ ಬಳಿಕ ವಕಾರ್ ಯೂನಿಸ್ , ಸುದ್ದಿ ಸಂಸ್ಥೆಯೊಂದರ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದರು.