1. ಹೊಸವರ್ಷ ಆಚರಣೆ ವಿಚಾರದ ಬಗ್ಗೆ ತೀರ್ಮಾನ ಮಾಡಿಲ್ಲ : ಸಿಎಂ
ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿದೆ ಅನ್ನುವ ಸಂದರ್ಭದಲ್ಲಿ ಸೌತ್ ಆಫ್ರಿಕಾ, ಹಾಂಕಾಂಗ್ ದೇಶದಲ್ಲಿ ರೂಪಾಂತರಿ ವೈರಸ್ ಕಂಡು ಬಂದಿದ್ದು, ಯಾವ ರೀತಿ ಪರಿಣಾಮ ಆಗುತ್ತದೆ ಅನ್ನುವುದು ಗೊತ್ತಿಲ್ಲ. ಹೊಸವರ್ಷ ಆಚರಣೆಗೆ ವಿಚಾರವಾಗಿ ತೀರ್ಮಾನ ಮಾಡಿಲ್ಲ,ಇದು ಹೇಗೆ ಬೆಳವಣಿಗೆ ಆಗುತ್ತದೆ ಎನ್ನುವುದನ್ನು ನೋಡಿಕೊಂಡು ತಿರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.
2. ರೈಡ್ ಫಾರ್ ಅಪ್ಪು’ ಪುನೀತ್ ನೆನಪಿಗಾಗಿ ಬೈಕ್ ಮೆರವಣಿಗೆ; ಹೆಲ್ಮೆಟ್ ಜಾಗೃತಿ
ಟೀಮ್ ದ್ವಿಚಕ್ರ ಮತ್ತು ಇಂಚರ ಸ್ಟುಡಿಯೊ ವತಿಯಿಂದ, ಅಪ್ಪು ಅಗಲಿದ ಒಂದು ತಿಂಗಳ ನೆನಪಿಗಾಗಿ, ಭಾನುವಾರ ಏರ್ಪಡಿಸಿದ್ದ ‘ರೈಡ್ ಫಾರ್ ಅಪ್ಪು’ ಬೈಕ್ ಮೆರವಣಿಗೆಗೆ ಉನ್ನತ ಶಿಕ್ಷಣ ಹಾಗೂ ಐಟಿ, ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಚಾಲನೆ ನೀಡಿದರು.
3. ಮುನಾವರ್ ಫರೂಕಿ ಹಾಸ್ಯ ಕಾರ್ಯಕ್ರಮಕ್ಕೆ ಪೊಲೀಸರ ತಡೆ
ಇಂದು ಬೆಂಗಳೂರಿನ ಗುಡ್ ಶೆಫರ್ಡ್ ಸಭಾಂಗಣದಲ್ಲಿ ನಡೆಯಬೇಕಿದ್ದ ಹಾಸ್ಯನಟ ಮುನಾವರ್ ಫರೂಕಿ ಅವರ ಕಾರ್ಯಕ್ರಮಕ್ಕೆ ಪೊಲೀಸರು ತಡೆ ಹಾಕಿದ್ದಾರೆ. ಬೆಂಗಳೂರಿನ ಅಶೋಕ್ ನಗರದಲ್ಲಿರುವ ಗುಡ್ ಶೆಫರ್ಡ್ ಸಭಾಂಗಣಕ್ಕೆ ಪತ್ರ ಬರೆದಿರುವ ಪೊಲೀಸರು, ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿರುವ ಕಾರಣ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಸಂಘಟಕರಿಗೆ ಸೂಚಿಸಿದ್ದಾರೆ.
4. ಒಮಿಕ್ರಾನ್ ಪೀಡಿತ ದೇಶಗಳಿಂದ ಬರುವ ವಿಮಾನಗಳನ್ನು ಕೂಡಲೇ ನಿಲ್ಲಿಸಿ: PMಗೆ ಕೇಜ್ರಿವಾಲ್ ಪತ್ರ
ಕೋವಿಡ್ ವೈರಸ್ ನ ಹೊಸ ರೂಪಾಂತರವಾದ ಒಮಿಕ್ರಾನ್ ಪೀಡಿತ ದೇಶಗಳಿಂದ ಭಾರತಕ್ಕೆ ಬರುವ ವಿಮಾನಗಳ ಸಂಚಾರವನ್ನು ತಕ್ಷಣ ನಿಲ್ಲಿಸಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪತ್ರದ ಬರೆದು ಒತ್ತಾಯಿಸಿದ್ದಾರೆ.
5. ಇಸ್ರೋ ಸ್ಥಳಾಂತರ: ಪ್ರಧಾನಿ ಮತ್ತು ಸಿಎಂಗೆ ಡಿಕೆಶಿ ಬರೆದ ಪತ್ರದ ಸಾರಾಂಶ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ. ಅದರಲ್ಲಿ ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಭಾರತೀಯ ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕಾಗಿ ವಿನಂತಿ ಮಾಡಿದ್ದರೆ.
6. ಭೀಕರ ಅಪಘಾತ: ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ನಿಂತಿದ್ದ ಟ್ರಕ್‌ಗೆ ಅಂತ್ಯ ಕ್ರಿಯೆಗೆ ತೆರಳುತ್ತಿದ್ದ ಇನ್ನೊಂದು ಮಿನಿ ಟ್ರಕ್ ಡಿಕ್ಕಿ ಹೊಡೆದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ ಭೀಕರ ಅವಘಡ ಭಾನುವಾರ ನಸುಕಿನ ವೇಳೆ ನಡೆದಿದೆ.
7. ಮೀಟೂ ಪ್ರಕರಣ: ನಟಿ ಶ್ರುತಿ ಹರಿಹರನ್ ಗೆ ನೋಟಿಸ್ ಜಾರಿ
ಕೆಲ ವರ್ಷಗಳ ಹಿಂದೆ ಸ್ಯಾಂಡಲ್ವುಡ್ನಲ್ಲಿ ಭಾರೀ ಸದ್ದು ಮಾಡಿದ್ದ ‘ಮೀಟೂ’ ಪ್ರಕರಣಕ್ಕೆ ಸಂಬಂಧಿಸಿ ನಟಿ ಶ್ರುತಿ ಹರಿಹರನ್ ಗೆ ವಿಚಾರಣೆಗೆ ಹಾಜರಾಗುವಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
2018ರಲ್ಲಿ ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಅವರು ಮೀಟೂ ಆರೋಪ ಮಾಡಿದ್ದರು.
8. ಚೊಚ್ಚಲ ಪಂದ್ಯದಲ್ಲೇ ಹೊಸ ದಾಖಲೆ ಬರೆದ ಶ್ರೇಯಸ್ ಅಯ್ಯರ್
ಟೆಸ್ಟ್ ಕ್ರಿಕೆಟ್ ನ ಪದಾರ್ಪಣಾ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸಿ ಮಿಂಚಿದ್ದ, ಮುಂಬೈ ಬ್ಯಾಟರ್ ಶ್ರೇಯಸ್ ಅಯ್ಯರ್ ಇದೀಗ ಮತ್ತೊಂದು ದಾಖಲೆ ಬರೆದಿದ್ದಾರೆ. ಎರಡನೇ ಇನ್ನಿಂಗ್ಸ್ ನಲ್ಲಿ ಸತತ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡಕ್ಕೆ ನೆರವಾದ ಅಯ್ಯರ್, ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.